Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ನೀನು ಅವರಿಗೆ, ‘ಯೆಹೋನಾಥಾನನ ಮನೆಗೆ ನನ್ನನ್ನು ತಿರುಗಿ ಸೇರಿಸಬೇಡ, ಅಲ್ಲೇ ಸತ್ತೇನು ಎಂದು ಅರಸನಿಗೆ ಬಿನ್ನಹ ಮಾಡಿಕೊಂಡೆನು’ ಎಂಬುದಾಗಿ ಹೇಳು” ಎಂದು ಅಪ್ಪಣೆಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನೀನು ಅವರಿಗೆ, ‘ಯೆಹೋನಾಥಾನನ ಮನೆಗೆ ನನ್ನನ್ನು ಮರಳಿ ಸೇರಿಸಬೇಡ. ಅಲ್ಲೇ ಸತ್ತೇನು ಎಂದು ಅರಸನಲ್ಲಿ ಬಿನ್ನಹ ಮಾಡಿಕೊಂಡೆ’ ಎಂಬುದಾಗಿ ಹೇಳು,” ಎಂದು ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನೀನು ಅವರಿಗೆ - ಯೆಹೋನಾಥಾನನ ಮನೆಗೆ ನನ್ನನ್ನು ತಿರಿಗಿ ಸೇರಿಸಬೇಡ, ಅಲ್ಲೇ ಸತ್ತೇನು ಎಂದು ಅರಸನಿಗೆ ಬಿನ್ನಹ ಮಾಡಿಕೊಂಡೆನು ಎಂಬದಾಗಿ ಹೇಳು ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆಗ ನೀನು ಅವರಿಗೆ, ‘ಯೆಹೋನಾಥಾನನ ಮನೆಯ ನೆಲಮಾಳಿಗೆಯ ಕತ್ತಲು ಕೋಣೆಗೆ ನನ್ನನ್ನು ಮತ್ತೆ ಕಳುಹಿಸಬೇಡಿ, ಅಲ್ಲಿಗೆ ಹೋದರೆ ನಾನು ಸತ್ತುಹೋಗುವೆನೆಂದು ರಾಜನಿಗೆ ಪ್ರಾರ್ಥಿಸುತ್ತಿದ್ದೆ’” ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನೀನು ಅವರಿಗೆ, ‘ನನ್ನನ್ನು ತಿರುಗಿ ಯೋನಾತಾನನ ಮನೆಗೆ ನಾನು ಅಲ್ಲಿ ಸಾಯುವ ಹಾಗೆ ತೆಗೆದುಕೊಂಡು ಹೋಗಬೇಡವೆಂದು ಅರಸನ ಮುಂದೆ ಬಿನ್ನಹ ಮಾಡಿದೆನೆಂದು ಹೇಳು,’ ಎಂದು ಹೇಳಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:26
5 ತಿಳಿವುಗಳ ಹೋಲಿಕೆ  

ಎನ್ನೊಡೆಯನೇ, ಅರಸನೇ, ಈಗ ದಯಮಾಡಿ ಲಾಲಿಸು; ಲೇಖಕನಾದ ಯೆಹೋನಾಥಾನನ ಮನೆಗೆ ನನ್ನನ್ನು ತಿರುಗಿ ಸೇರಿಸಬೇಡ, ಅಲ್ಲೇ ಸತ್ತೇನು, ನನ್ನ ಬಿನ್ನಹವು ನಿನಗೆ ಮುಟ್ಟಲಿ” ಎಂದು ಅರಿಕೆಮಾಡಿದನು.


ಆ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ, ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕನಾದ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು.


ಅವರು ಅವನಿಗೆ, “ದಯಮಾಡು, ನಮ್ಮ ಬಿನ್ನಹವನ್ನು ಲಾಲಿಸು; ನಿನ್ನ ಕಣ್ಣಿಗೆ ಕಾಣುವ ಪ್ರಕಾರ ಅಪಾರ ಜನರಲ್ಲಿ ನಾವು ಕೆಲವರು ಮಾತ್ರ ಉಳಿದಿದ್ದೇವೆ.


ಅದರೊಂದಿಗೆ ತಮ್ಮನ್ನು ಸಂಹರಿಸುವುದಕ್ಕೋಸ್ಕರ ಶೂಷನಿನಲ್ಲಿ ಪ್ರಕಟವಾದ ರಾಜಶಾಸನದ ಒಂದು ಪ್ರತಿಯನ್ನು ಕೊಟ್ಟು, “ಇದನ್ನು ಎಸ್ತೇರಳಿಗೆ ತೋರಿಸಿ ವಿವರಿಸು; ಮತ್ತು ಆಕೆಯು ಅರಸನ ಬಳಿಗೆ ಹೋಗಿ ಅವನು ಕೃಪೆ ತೋರಿಸುವಂತೆ ಅವನ ಸನ್ನಿಧಿಯಲ್ಲಿ ತನ್ನ ಜನರಿಗೋಸ್ಕರ ಬಿನ್ನಹ ಮಾಡಲಿ” ಎಂದು ಹೇಳಿಕಳುಹಿಸಿದನು.


ಕೆಲವು ಕಾಲದ ಮೇಲೆ ಸಕಲ ಪ್ರಧಾನರು ಯೆರೆಮೀಯನ ಬಳಿಗೆ ಬಂದು ಹಾಗೆಯೇ ಪ್ರಶ್ನೆ ಮಾಡಿದರು. ಅವನು ಅರಸನ ಅಪ್ಪಣೆಯಂತೆಯೇ ಉತ್ತರಕೊಡಲು ಅವರು ಮಾತನ್ನು ಮುಗಿಸಿದರು; ಏನೂ ತಿಳಿದುಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು