Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 39:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೆ ಏನೂ ಇಲ್ಲದ ಕೆಲವು ಬಡ ಜನರನ್ನು ಯೆಹೂದ ದೇಶದಲ್ಲಿ ಬಿಟ್ಟು ಆಗಲೇ ಅವರಿಗೆ ಹೊಲ ಮತ್ತು ದ್ರಾಕ್ಷಿತೋಟಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದರೆ ಏನೂ ಇಲ್ಲದ ಬಡಜನರನ್ನು ಜುದೇಯದ ನಾಡಿನಲ್ಲೆ ಬಿಟ್ಟು ಅವರಿಗೆ ಹೊಲತೋಟಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದರೆ ಏನೂ ಇಲ್ಲದ ಕೆಲವು ಬಡ ಜನರನ್ನು ಯೆಹೂದ ದೇಶದಲ್ಲಿ ಬಿಟ್ಟು ಆಗಲೇ ಅವರಿಗೆ ಹೊಲತೋಟಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ಬಾಬಿಲೋನ್ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನು ಯೆಹೂದದ ಕೆಲ ಬಡಜನರನ್ನು ಅಲ್ಲಿಯೇ ಬಿಟ್ಟನು. ಆ ಜನಗಳಿಗೆ ಯಾವ ಆಸ್ತಿಪಾಸ್ತಿ ಇದ್ದಿರಲಿಲ್ಲ. ಆದ್ದರಿಂದ ಅಂದು ನೆಬೂಜರದಾನನು ಯೆಹೂದದ ಆ ಬಡಜನರಿಗೆ ದ್ರಾಕ್ಷಿತೋಟಗಳನ್ನು ಮತ್ತು ಹೊಲಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಜನರೊಳಗೆ ಏನಿಲ್ಲದವರಾದ ಬಡವರಲ್ಲಿ ಕೆಲವರನ್ನು ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆಹೂದ ದೇಶದಲ್ಲಿ ಬಿಟ್ಟು, ಅವರಿಗೆ ಆಗಲೇ ದ್ರಾಕ್ಷಿತೋಟಗಳನ್ನೂ, ಹೊಲಗಳನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 39:10
8 ತಿಳಿವುಗಳ ಹೋಲಿಕೆ  

ಹೊಲಗಳನ್ನೂ, ದ್ರಾಕ್ಷಿ ತೋಟಗಳನ್ನೂ, ವ್ಯವಸಾಯಮಾಡುವುದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.


ಆದರೆ ನೆಬೂಜರದಾನನು ಹೊಲಗಳನ್ನೂ ಹಾಗು ದ್ರಾಕ್ಷಿಯ ತೋಟಗಳನ್ನೂ ವ್ಯವಸಾಯ ಮಾಡುವುದಕ್ಕಾಗಿ ದೇಶದ ಜನರಲ್ಲಿ ಕೆಲವು ಬಡ, ದಿಕ್ಕಿಲ್ಲದವರನ್ನು ಮಾತ್ರ ಬಿಟ್ಟುಹೋದನು.


ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶಾಧಿಪತಿಯನ್ನಾಗಿ ನೇಮಿಸಿ, ಬಾಬಿಲೋನಿಗೆ ಸೆರೆಯೊಯ್ಯಲ್ಪಡದ ದೇಶೀಯರಲ್ಲಿ ಬಡ, ದಿಕ್ಕಿಲ್ಲದ ಗಂಡಸರನ್ನೂ, ಹೆಂಗಸರನ್ನೂ ಮತ್ತು ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದನೆಂಬ ಸುದ್ದಿಯನ್ನು ಕಾಡುಮೇಡುಗಳಲ್ಲಿದ್ದ ಸಕಲ ಯೆಹೂದ ಸೈನಿಕರೂ ಮತ್ತು ಸೇನಾಪತಿಗಳು ಕೇಳಿ ಮಿಚ್ಪದಲ್ಲಿ ವಾಸವಾಗಿದ್ದ ಅವನ ಬಳಿಗೆ ಹೋದರು.


“ನರಪುತ್ರನೇ, ಇಸ್ರಾಯೇಲ್ ಸೀಮೆಯ ಹಾಳು ಪ್ರದೇಶಗಳಲ್ಲಿ ವಾಸಿಸುವವರು ‘ಅಬ್ರಹಾಮನು ಒಂಟಿಗನಾಗಿದ್ದರೂ ಈ ದೇಶವು ಅವನಿಗೆ ಸ್ವತ್ತಾಗಿ ಸಿಕ್ಕಿತಲ್ಲಾ; ಅದು ಬಹು ಜನರಾದ ನಮಗೆ ಸ್ವತ್ತಾಗಿ ಸಿಕ್ಕಿದ್ದು ಬಹು ದೊಡ್ಡದು?’” ಎಂದು ಅಂದುಕೊಳ್ಳುತ್ತಿದ್ದಾರೆ.


ಆ ಕಾಲದಲ್ಲಿ ಮನುಷ್ಯನು ಒಂದು ಹಸುವಿನ ಕರುವನ್ನು ಮತ್ತು ಎರಡು ಕುರಿಗಳನ್ನು ಸಾಕುವನು.


ನಾನಂತು ಮಿಚ್ಪದಲ್ಲಿ ವಾಸವಾಗಿದ್ದು ನಮ್ಮ ಬಳಿಗೆ ಬರುವ ಕಸ್ದೀಯರ ಮುಂದೆ ನಿಮ್ಮ ಪಕ್ಷವನ್ನು ವಹಿಸುವೆನು; ನೀವು ದ್ರಾಕ್ಷಾರಸ, ಹಣ್ಣು, ಎಣ್ಣೆ, ಇವುಗಳನ್ನು ಸಂಗ್ರಹಿಸಿ ನಿಮ್ಮ ಪಾತ್ರೆಗಳಲ್ಲಿ ತುಂಬಿಸಿಟ್ಟು ನೀವು ಹಿಡಿದ ಪಟ್ಟಣಗಳಲ್ಲಿ ವಾಸಿಸಿರಿ” ಎಂದು ಖಂಡಿತವಾಗಿ ಹೇಳಿದನು.


ನೇರೀಯನ ಮಗನಾದ ಬಾರೂಕನು, ರಾಜಕುಮಾರ್ತೆಯರು ಅಂತು ಗಂಡಸರು, ಹೆಂಗಸರು, ಮಕ್ಕಳು,


ಆಗ ನಾನು ದೀನಾವಸ್ಥೆಯಲ್ಲಿದ್ದ ಆ ಕೊಯ್ಗುರಿಗಳ ಮಂದೆಯನ್ನು ಮೇಯಿಸಿದೆನು. ಎರಡು ಕೋಲುಗಳನ್ನು ತೆಗೆದುಕೊಂಡು ಒಂದಕ್ಕೆ “ಕೃಪೆ” ಎಂತಲೂ ಇನ್ನೊಂದಕ್ಕೆ, “ಒಗ್ಗಟ್ಟು” ಎಂತಲೂ ಹೆಸರಿಟ್ಟು ಅವುಗಳಿಂದ ಮಂದೆಯನ್ನು ಮೇಯಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು