ಯೆರೆಮೀಯ 39:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನಿಗೆ ಹೀಗೆ ಹೇಳು, ‘ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನುಡಿದ ಮೇಲನ್ನಲ್ಲ, ನುಡಿದ ಕೇಡನ್ನೇ ಈ ಪಟ್ಟಣದ ಮೇಲೆ ಬರಮಾಡುವೆನು; ಅದು ಆ ದಿನದಲ್ಲಿ ನಿನ್ನ ಕಣ್ಣೆದುರಿಗೆ ಆಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನೀನು ಹೋಗಿ ಸುಡಾನಿನ ಎಬೆದ್ಮೆಲೆಕನಿಗೆ ಹೀಗೆ ತಿಳಿಸು: “ಈ ಇಸ್ರಯೇಲರ ದೇವರೂ ಸೇನಾಧೀಶ್ವರನೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ - ನಾನು ನುಡಿದ ಮೇಲನ್ನು ಅಲ್ಲ, ಕೇಡನ್ನೇ ಈ ನಗರದ ಮೇಲೆ ಬರಮಾಡುವೆನು. ಅದು ನಿನ್ನ ಕಣ್ಣೆದುರಿಗೇ ಆ ದಿನದಂದು ನಡೆಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನಿಗೆ ಹೀಗೆ ಹೇಳು - ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನುಡಿದ ಮೇಲನ್ನಲ್ಲ, ನುಡಿದ ಕೇಡನ್ನೇ ಈ ಪಟ್ಟಣದ ಮೇಲೆ ಬರಮಾಡುವೆನು; ಅದು ಆ ದಿನದಲ್ಲಿ ನಿನ್ನ ಕಣ್ಣೆದುರಿಗೆ ಆಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ಯೆರೆಮೀಯನೇ, ಹೋಗಿ ಇಥಿಯೋಪಿಯದವನಾದ ಎಬೆದ್ಮೆಲೆಕನಿಗೆ ಈ ಸಂದೇಶವನ್ನು ಕೊಡು: ‘ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುತ್ತಾನೆ: ಜೆರುಸಲೇಮ್ ನಗರದ ಬಗ್ಗೆ ನಾನು ಕೊಟ್ಟ ಸಂದೇಶಗಳು ಬೇಗ ಕಾರ್ಯರೂಪಕ್ಕೆ ಬರುತ್ತವೆ. ನನ್ನ ಸಂದೇಶ ಕಾರ್ಯರೂಪಕ್ಕೆ ಬರುವುದು ಕೇಡುಗಳ ಮೂಲಕವೇ ಹೊರತು ಒಳ್ಳೆಯದರ ಮೂಲಕವಲ್ಲ. ಎಲ್ಲವೂ ನನ್ನ ಸಂದೇಶದಂತೆ ನಡೆಯುವುದನ್ನು ನೀನು ಕಣ್ಣಾರೆ ನೋಡುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನ ಸಂಗಡ ಮಾತನಾಡಿ, ಹೇಳತಕ್ಕದ್ದೇನೆಂದರೆ: ‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಒಳ್ಳೆಯದಕ್ಕಾಗಿ ಅಲ್ಲ, ಕೆಟ್ಟದ್ದಕ್ಕಾಗಿ ನನ್ನ ಮಾತುಗಳನ್ನು ಈ ಪಟ್ಟಣದ ಮೇಲೆ ಬರಮಾಡುತ್ತೇನೆ. ಅವು ಆ ದಿವಸಗಳಲ್ಲಿ ನಿನ್ನ ಮುಂದೆಯೇ ನೆರವೇರುವುವು. ಅಧ್ಯಾಯವನ್ನು ನೋಡಿ |