Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 39:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನು ಇಂತೆನ್ನುತ್ತಾನೆ, ಆ ದಿನದಲ್ಲಿ ನಾನು ನಿನ್ನನ್ನು ಉದ್ಧರಿಸುವೆನು; ನೀನು ಹೆದರುವ ಮನುಷ್ಯರ ಕೈಗೆ ಸಿಕ್ಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆದರೆ ಆ ದಿನದಲ್ಲಿ ನಿನ್ನನ್ನು ನಾನು ಉದ್ಧರಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ. ನೀನು ಯಾರಿಗಾಗಿ ಭಯಪಡುತ್ತಿಯೋ ಅವರ ಕೈಗೆ ಸಿಕ್ಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಾನು ನಿನ್ನನ್ನು ಉದ್ಧರಿಸುವೆನು; ನೀನು ಹೆದರುವ ಮನುಷ್ಯರ ಕೈಗೆ ಸಿಕ್ಕುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಅಂದು ಎಬೆದ್ಮೆಲೆಕನೇ, ನಾನು ನಿನ್ನನ್ನು ರಕ್ಷಿಸುತ್ತೇನೆ.’ ಇದು ಯೆಹೋವನ ನುಡಿ. ‘ನೀನು ಊಹಿಸಿ ಭಯಪಟ್ಟಂತೆ ನಿನ್ನನ್ನು ಆ ಜನರ ಕೈಗೆ ಒಪ್ಪಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಆ ದಿವಸದಲ್ಲಿ ನಾನು ನಿನ್ನನ್ನು ಬಿಡುಗಡೆ ಮಾಡುವೆನೆಂದು ಯೆಹೋವ ದೇವರು ಹೇಳುತ್ತಾರೆ. ನೀನು ಹೆದರಿಕೊಳ್ಳುವ ಮನುಷ್ಯರ ಕೈಯಲ್ಲಿ ಒಪ್ಪಿಸಲಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 39:17
16 ತಿಳಿವುಗಳ ಹೋಲಿಕೆ  

ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.


ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು” ಎಂದು ಹೇಳಿದನು.


ಅದಕ್ಕೆ ದಾವೀದನು ಗಾದನಿಗೆ, “ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ. ಯೆಹೋವನ ಕೈಯಲ್ಲಿ ಬೀಳುತ್ತೇನೆ, ಆತನು ಕೃಪಾಪೂರ್ಣನು ನಾನು ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು” ಎಂದು ಹೇಳಿದನು.


“ಎನ್ನೊಡೆಯನೇ, ಅರಸನೇ, ಇವರು ಪ್ರವಾದಿಯಾದ ಯೆರೆಮೀಯನಿಗೆ ಮಾಡಿದ್ದೆಲ್ಲಾ ದುಷ್ಟಕಾರ್ಯವೇ ಸರಿ, ಅವನನ್ನು ಬಾವಿಯಲ್ಲಿ ಹಾಕಿದ್ದಾರೆ; ಅವನು ಆಹಾರವಿಲ್ಲದೆ ಬಿದ್ದಲ್ಲೇ ಸಾಯುವುದು ಖಂಡಿತ, ಪಟ್ಟಣದಲ್ಲಿ ಇನ್ನು ರೊಟ್ಟಿಯಿಲ್ಲವಲ್ಲಾ” ಎಂದು ಅರಿಕೆಮಾಡಿದನು.


ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”


ಅದಕ್ಕೆ ಉತ್ತರವಾಗಿ ಅರಸನು, ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.


ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ರಾಜನ ಅಪ್ಪಣೆಯಂತೆ ಹಾಕಿಬಿಟ್ಟರು. ಆಗ ರಾಜನು ದಾನಿಯೇಲನಿಗೆ, “ನೀನು ನಿತ್ಯವೂ ಆರಾಧಿಸುವ ದೇವರು ನಿನ್ನನ್ನುದ್ಧರಿಸಲಿ” ಎಂದು ಹರಸಿದನು.


ಮತ್ತಾನನ ಮಗನಾದ ಶೆಫತ್ಯ, ಪಷ್ಹೂರನ ಮಗನಾದ ಗೆದಲ್ಯ, ಸೆಲೆಮ್ಯನ ಮಗನಾದ ಯೂಕಲ, ಮಲ್ಕೀಯನ ಮಗನಾದ ಪಷ್ಹೂರ ಇವರು ಯೆರೆಮೀಯನ ಮಾತುಗಳನ್ನು ಕೇಳುತ್ತಿದ್ದರು.


ಆಗ ಎಲೀಯನು ಅವನಿಗೆ, “ನಾನು ಸನ್ನಿಧಿ ಸೇವೆಮಾಡುತ್ತಿರುವ ಸೇನಾಧೀಶ್ವರನಾದ ಯೆಹೋವನಾಣೆ, ನಾನು ಈ ಹೊತ್ತು ಅಹಾಬನಿಗೆ ಹೇಗೂ ಕಾಣಿಸಿಕೊಳ್ಳುವೆನು” ಅಂದನು.


ಓಬದ್ಯನು ಅಹಾಬನ ಬಳಿಗೆ ಹೋಗಿ ಅವನಿಗೆ ಈ ಮಾತನ್ನು ತಿಳಿಸಿದನು. ಅಹಾಬನು ಎಲೀಯನನ್ನು ಎದುರುಗೊಳ್ಳುವುದಕ್ಕಾಗಿ ಹೊರಟುಹೋಗಿ


ಆಗ ಎಲೀಷನು ಅವನಿಗೆ, “ಹೆದರಬೇಡ, ಅವರ ಕಡೆಯಲ್ಲಿರುವವರಿಗಿಂತಲೂ, ನಮ್ಮ ಕಡೆಯಲ್ಲಿರುವವರು ಹೆಚ್ಚಾಗಿದ್ದಾರೆ” ಎಂದು ಹೇಳಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು