Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು, “ಇಸ್ರಾಯೇಲೇ, ನೀನು ತಿರುಗಿಕೊಂಡರೆ ನನ್ನ ಬಳಿಗೇ ಬರುವಿ; ನನ್ನ ಕಣ್ಣೆದುರಿನಿಂದ ನಿನ್ನ ಅಸಹ್ಯವಸ್ತುಗಳನ್ನು ತೆಗೆದುಬಿಟ್ಟರೆ, ನೀನು ಇನ್ನು ದಿಕ್ಕು ದೆಸೆಗಳಿಲ್ಲದೆ ನರಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಇಸ್ರಯೇಲಿನ ಜನರೇ, ನೀವು ಹಿಂದಿರುಗುವಿರಾದರೆ ನನ್ನ ಬಳಿಗೆ ಬನ್ನಿ. ಅಸಹ್ಯವಾದ ನಿಮ್ಮ ಮೂರ್ತಿ ಪೂಜಾವಸ್ತುಗಳನ್ನು ನನ್ನ ಕಣ್ಣೆದುರಿನಿಂದ ತೆಗೆದುಬಿಡಿ. ಆಗ ನೀವು ಅತ್ತಿತ್ತ ತೂರಾಡಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಹೀಗನ್ನುತ್ತಾನೆ - ಇಸ್ರಾಯೇಲೇ, ನೀನು ಹಿಂದಿರುಗುವಿಯಾದರೆ ನನ್ನ ಬಳಿಗೇ ಬರುವಿ; ನನ್ನ ಕಣ್ಣೆದುರಿನಿಂದ ನಿನ್ನ ಅಸಹ್ಯವಸ್ತುಗಳನ್ನು ತೆಗೆದುಬಿಟ್ಟರೆ ನೀನು ಇನ್ನು ದಿಕ್ಕಾಪಾಲಾಗಿರುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇದು ಯೆಹೋವನ ಸಂದೇಶ: “ಇಸ್ರೇಲೇ, ನೀನು ಹಿಂತಿರುಗಿ ಬರಲು ಇಚ್ಛಿಸಿದರೆ ನನ್ನಲ್ಲಿಗೆ ಹಿಂತಿರುಗಿ ಬಾ. ನಿನ್ನ ವಿಗ್ರಹಗಳನ್ನು ಎಸೆದುಬಿಡು. ನನ್ನಿಂದ ದೂರಸರಿದು ಅಲೆದಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಇಸ್ರಾಯೇಲೇ, ನೀನು ಹಿಂದಿರುಗುವಿಯಾದರೆ ನನ್ನ ಕಡೆ ಹಿಂದಿರುಗಿ ಬಾ,” ಎಂದು ಯೆಹೋವ ದೇವರು ನುಡಿಯುತ್ತಾರೆ. “ನೀನು ನಿನ್ನ ಅಸಹ್ಯಗಳನ್ನು ನನ್ನ ಎದುರಿನಿಂದ ತೆಗೆದುಬಿಟ್ಟರೆ, ಅಲೆದಾಡದೆ ಇರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:1
38 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆ ಹೇಳುತ್ತಾನೆ, “ಈಗಲಾದರೂ, ನೀವು ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ. ಉಪವಾಸಮಾಡಿರಿ, ಅಳಿರಿ, ಗೋಳಾಡಿರಿ.”


“ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು” ಎಂದು ಯೆಹೋವನು ನುಡಿಯುತ್ತಾನೆ. ಅದಕ್ಕೆ ಜನರು, “ಇಗೋ, ನಿನ್ನ ಬಳಿಗೆ ಬಂದೆವು, ನೀನು ಯೆಹೋವನು, ನಮ್ಮ ದೇವರು.


ಈಗಲಾದರೂ ತಮ್ಮ ದೇವದ್ರೋಹವನ್ನು ಮತ್ತು ಅರಸರ ಶವಗಳನ್ನು ನನ್ನಿಂದ ದೂರ ಮಾಡಲಿ. ಆಗ ನಾನು ಅದರ ಮಧ್ಯದಲ್ಲಿ ಸದಾ ವಾಸಿಸುವೆನು.”


ಆತನು ನಿಮಗೆ ಹೇಳಿದ ಮಾತೇನೆಂದರೆ, ‘ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ಹಿಂದಿರುಗಿರಿ. ನಿಮಗೆ ಶಾಶ್ವತ ಸ್ವತ್ತಾಗಿರಲಿ ಎಂದು ಯೆಹೋವನು ಪುರಾತನ ಕಾಲದಲ್ಲಿ ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗೆ ನೆಲೆಗೊಳ್ಳಿರಿ.


ನೀನು ಹೋಗಿ ಉತ್ತರದಿಕ್ಕಿಗೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ಭ್ರಷ್ಟಳಾದ ಇಸ್ರಾಯೇಲೇ, ಹಿಂದಿರುಗು, ನಾನು ಕೋಪದ ಮುಖದಿಂದ ನಿನ್ನನ್ನು ನೋಡೆನು, ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ.


ಯೆಹೋವನು ಹೀಗೆನ್ನುತ್ತಾನೆ, “ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನ ಹೆಂಡತಿಯಾದ ಮೇಲೆ, ಅವಳನ್ನು ಮೊದಲ ಗಂಡನು ತಿರುಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವುದಲ್ಲವೇ? ಹೀಗಿರಲು ಬಹುಮಂದಿಯೊಡನೆ ವ್ಯಭಿಚಾರ ಮಾಡಿದ ನೀನು ನನ್ನ ಬಳಿಗೆ ಹಿಂದಿರುಗಿ ಬರುತ್ತಿಯಾ?


ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ “ನಿಮ್ಮ ಮಧ್ಯಲ್ಲಿರುವ ಅನ್ಯ ದೇವರುಗಳನ್ನು ತೆಗೆದುಹಾಕಿ ನಿಮ್ಮನ್ನು ಶುದ್ಧಪಡಿಸಿಕೊಂಡು, ವಸ್ತ್ರಗಳನ್ನು ಬದಲಾಯಿಸಿರಿ,


ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೋ; ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ.


“ನಿಮ್ಮ ತಾಯಿಯ ಸಂಗಡ ವಾದಮಾಡಿ; ಅವಳು ನನ್ನ ಹೆಂಡತಿಯಲ್ಲ, ನಾನು ಅವಳ ಗಂಡನಲ್ಲ. ಅವಳು ವ್ಯಭಿಚಾರವನ್ನು ತನ್ನ ಮುಖಸೌಂದರ್ಯದಿಂದ, ವ್ಯಭಿಚಾರದ ಬೆಡಗನ್ನು ತನ್ನ ಸ್ತನಮಧ್ಯದಿಂದ ತೊಲಗಿಸಲಿ.


ಇಸ್ರಾಯೇಲರು ಇನ್ನು ಮುಂದೆ ದೇಶಭ್ರಷ್ಟರಾಗಿರದೆ ತಮ್ಮ ಪೂರ್ವಿಕರಿಗೆ ನೇಮಿಸಲ್ಟಟ್ಟ ದೇಶದಲ್ಲಿಯೇ ವಾಸವಾಗಿರುವಂತೆ ಮಾಡುವೆನು” ಎಂದು ಹೇಳಿದನು.


ಆಸನು ಓದೇದನ ಮಗನಾದ ಅಜರ್ಯ ಪ್ರವಾದಿಯ ಈ ಮಾತುಗಳನ್ನು ಕೇಳಿದಾಗ ಧೈರ್ಯಗೊಂಡನು. ಯೆಹೂದ, ಬೆನ್ಯಾಮೀನ್ ಪ್ರಾಂತ್ಯಗಳಲ್ಲಿಯೂ ತಾನು ಸ್ವಾಧೀನಮಾಡಿಕೊಂಡ ಎಫ್ರಾಯೀಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲಿಯೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದು ಹಾಕಿಸಿದನು. ಯೆಹೋವನ ಆಲಯಕ್ಕೆ ಸೇರಿದ ಮಂಟಪದ ಎದುರಿಗಿದ್ದ ಯೆಹೋವನ ಯಜ್ಞವೇದಿಯನ್ನು ಜೀರ್ಣೋದ್ಧಾರ ಮಾಡಿಸಿದನು.


ಇದಲ್ಲದೆ, ಯೋಷೀಯನು ಸತ್ತವರಲ್ಲಿ ವಿಚಾರಿಸುವವರನ್ನೂ, ಭೂತ ಪ್ರೇತ ಆರಾಧಕರನ್ನೂ, ಯೆರೂಸಲೇಮ್, ಯೆಹೂದ ಪ್ರಾಂತ್ಯ ಇವುಗಳಲ್ಲಿದ್ದ ಎಲ್ಲಾ ತೆರಾಫೀಮ್ ಎಂಬ ಬೊಂಬೆಗಳನ್ನೂ, ಮೂರ್ತಿಗಳನ್ನೂ ಎಲ್ಲಾ ಅಸಹ್ಯ ವಿಗ್ರಹಗಳನ್ನೂ ತೆಗೆದುಹಾಕಿ ಯಾಜಕನಾದ ಹಿಲ್ಕೀಯನಿಗೆ ಯೆಹೋವನ ಆಲಯದಲ್ಲಿ ಸಿಕ್ಕಿದ್ದ ಧರ್ಮೋಪದೇಶಗ್ರಂಥದಲ್ಲಿದ್ದ ಆಜ್ಞೆಗಳನ್ನು ನೆರವೇರಿಸಿದನು.


ಇಸ್ರಾಯೇಲರ ಅರಸನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್ ದೇವತೆ, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಯೆರೂಸಲೇಮಿನ ಎದುರಿನಲ್ಲಿಯೂ, ವಿಘ್ನಪರ್ವತದ ದಕ್ಷಿಣದಿಕ್ಕಿನಲ್ಲಿಯೂ ಸ್ಥಾಪಿಸಿದ್ದ ಪೂಜಾಸ್ಥಳಗಳನ್ನು ಅರಸನು ಹೊಲೆ ಮಾಡಿದನು.


ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಯೆಹೋವನ ಕಡೆಗೆ ತಿರುಗಿಕೊಂಡಿರುವುದಾದರೆ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿ ಯೆಹೋವನ ಮೇಲೆಯೇ ಮನಸ್ಸಿಟ್ಟು ಆತನೊಬ್ಬನನ್ನೇ ಸೇವಿಸಿರಿ. ಆಗ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು” ಅಂದನು.


ಆಗ ಆತನ ಮನಸ್ಸು ಇಸ್ರಾಯೇಲರ ಸಂಕಟದ ನಿಮಿತ್ತ ಬಹಳವಾಗಿ ನೊಂದಿತು.


ಅತ್ತಿತ್ತ ತಿರುಗಿಕೊಳ್ಳುತ್ತಾರೆ, ದೇವರ ಕಡೆಗೆ ತಿರುಗಿಕೊಳ್ಳುವುದಿಲ್ಲ; ಮೋಸದ ಬಿಲ್ಲಿಗೆ ಸಮಾನರಾಗಿದ್ದಾರೆ. ಅವರ ಮುಖಂಡರು ತಮ್ಮ ನಾಲಿಗೆಯ ಸೊಕ್ಕಿನ ನಿಮಿತ್ತ ಖಡ್ಗದಿಂದ ಹತರಾಗಿ ಬೀಳುವರು; ಅವರ ಸೋಲು ಐಗುಪ್ತದೇಶದ ಹಾಸ್ಯಕ್ಕೆ ಆಸ್ಪದವಾಗುವುದು.


ಅಸಹ್ಯಕಾರ್ಯವನ್ನು ಮಾಡಿ, ಸಾಲಕ್ಕೆ ಬಡ್ಡಿತೆಗೆದು, ಲಾಭಕ್ಕೆ ಹಣಕೊಟ್ಟು, ಬಲಾತ್ಕಾರಿಯೂ ಮತ್ತು ರಕ್ತಸುರಿಸುವವನೂ ಆಗಿದ್ದರೆ ಜೀವಿಸುವನೇ? ಖಂಡಿತ ಜೀವಿಸುವುದಿಲ್ಲ; ಈ ದುರಾಚಾರಗಳನ್ನೆಲ್ಲಾ ನಡೆಸಿದನಲ್ಲವೇ? ಅವನು ಸಾಯುವುದು ಖಂಡಿತ; ತನ್ನ ಮರಣ ದಂಡನೆಗೆ ತಾನೇ ಕಾರಣ.


ಅವರು ಅಲ್ಲಿಗೆ ಸೇರಿ ಎಲ್ಲಾ ಅಸಹ್ಯ ವಸ್ತುಗಳನ್ನೂ, ಸಮಸ್ತ ಅಸಹ್ಯ ವಿಗ್ರಹಗಳನ್ನೂ ಅಲ್ಲಿಂದ ತೆಗೆದುಹಾಕುವರು.


ಒಂದು ವೇಳೆ ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನು ಕೇಳಿ ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು; ಹಿಂದಿರುಗಿದರೆ ಅವರ ಪಾಪ ಮತ್ತು ಅಪರಾಧಗಳನ್ನು ಕ್ಷಮಿಸಿಬಿಡುವೆನು” ಎಂಬ ಮಾತನ್ನು ತಿಳಿಸಿದನು.


ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ, ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಗ್ರಸ್ತರಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು.


“ಹಿಜ್ಕೀಯನ ಮಗನೂ ಯೆಹೂದದ ಅರಸನೂ ಆದ ಮನಸ್ಸೆಯು ಯೆರೂಸಲೇಮಿನಲ್ಲಿ ನಡೆಸಿದ್ದಕ್ಕೆ ಪ್ರತಿಯಾಗಿ, ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.


ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ, ಯೆಹೋವನಿಗಾಗಿ ಸುನ್ನತಿ ಮಾಡಿಕೊಳ್ಳಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ಧಗಧಗಿಸುವುದು” ಎಂದು ಹೇಳುತ್ತಾನೆ.


ಭ್ರಷ್ಟರಾದ ಮಕ್ಕಳೇ, ತಿರುಗಿಕೊಳ್ಳಿರಿ, ನಾನು ನಿಮಗೆ ಪತಿ. ಒಂದು ಪಟ್ಟಣಕ್ಕೆ ಒಬ್ಬನಂತೆಯೂ, ಗೋತ್ರಕ್ಕೆ ಇಬ್ಬರಂತೆಯೂ ಆರಿಸಿ ಚೀಯೋನಿಗೆ ಕರೆತರುವೆನು.


“ಇಸ್ರಾಯೇಲರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದಿರೋ ಆತನ ಕಡೆಗೆ ತಿರುಗಿಕೊಳ್ಳಿರಿ.


ಹೀಗಿರುವುದರಿಂದ, “ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರಿ ಆತನನ್ನು ಪೂರ್ಣಮನಸ್ಸಿನಿಂದಲೂ, ಯಥಾರ್ಥಚಿತ್ತದಿಂದಲೂ ಸೇವಿಸಿರಿ. ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಪೂಜಿಸುತ್ತಿದ್ದ ದೇವತೆಗಳನ್ನು ನಿಮ್ಮಲ್ಲಿಂದ ತೆಗೆದುಹಾಕಿರಿ. ಯೆಹೋವನನ್ನೇ ಸೇವಿಸಿರಿ.


‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು.


ಮೇಲೆ ಹೇಳಿದ ಎಲ್ಲಾ ಕಷ್ಟಗಳು ನಿಮಗೆ ಸಂಭವಿಸಿ, ನೀವು ಸಂಕಟದಲ್ಲಿರುವಾಗ ಅಂತ್ಯದಲ್ಲಿ ನೀವು ಆತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ಕಿವಿಗೊಡುವಿರಿ.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗೆನ್ನುತ್ತಾನೆ, ನೀವು ನಿಮ್ಮ ನಡತೆಯನ್ನೂ, ಕೃತ್ಯಗಳನ್ನೂ ತಿದ್ದಿಕೊಳ್ಳಿರಿ; ಹೀಗೆ ಮಾಡಿದರೆ ನಾನು ನಿಮ್ಮನ್ನು ಈ ಸ್ಥಳದಲ್ಲಿ ನೆಲೆಗೊಳಿಸುವೆನು.


ನೀವು ನಿಮ್ಮ ನಡತೆಯನ್ನು ಮತ್ತು ಕೃತ್ಯಗಳನ್ನು ಸಂಪೂರ್ಣವಾಗಿ ತಿದ್ದಿಕೊಂಡು ಕಕ್ಷಿ ಪ್ರತಿಕಕ್ಷಿಗಳಿಗೆ ಕೇವಲ ನ್ಯಾಯವನ್ನೇ ತೀರಿಸಿರಿ.


ನಾನು ನಿಮ್ಮನ್ನು ಈ ಸ್ಥಳದಲ್ಲಿ, ನಾನೇ ನಿಮ್ಮ ಪೂರ್ವಿಕರಿಗೆ ಶಾಶ್ವತವಾಗಿ ದಯಪಾಲಿಸಿದ ಈ ದೇಶದಲ್ಲಿ ನೆಲೆಗೊಳಿಸುವೆನು.


ಇದರಿಂದ ಯೆಹೋವನು, “ನೀನು ನನ್ನ ಕಡೆಗೆ ಹಿಂದಿರುಗಿದರೆ ನನ್ನ ಸಮ್ಮುಖದಲ್ಲಿ ನಿಲ್ಲುವಂತೆ ನಾನು ನಿನ್ನನ್ನು ತಿರುಗಿ ಸೇರಿಸಿಕೊಳ್ಳುವೆನು. ನೀನು ತುಚ್ಛವಾದದ್ದನ್ನು ನಿರಾಕರಿಸಿ, ಅಮೂಲ್ಯವಾದದ್ದನ್ನು ಪ್ರಕಾಶಪಡಿಸಿದರೆ ನೀನು ನನ್ನ ಬಾಯಂತಿರುವಿ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು, ನೀನು ಅವರ ಕಡೆಗೆ ತಿರುಗದಿರುವಿ.


ಈಗ ನೀನು ಯೆಹೂದ್ಯರಿಗೂ ಯೆರೂಸಲೇಮಿನವರಿಗೂ ಯೆಹೋವನು ಹೀಗೆನ್ನುತ್ತಾನೆ, ‘ಆಹಾ, ನಾನು ನಿಮ್ಮ ವಿರುದ್ಧವಾಗಿ ಯೋಚಿಸಿ, ಕೇಡನ್ನು ಕಲ್ಪಿಸುತ್ತಿದ್ದೇನೆ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ದುರ್ಮಾರ್ಗದಿಂದ ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ’ ಎಂಬ ಮಾತನ್ನು ಹೇಳು.


ನಿಮ್ಮ ಪೂರ್ವಿಕರಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದುರ್ಮಾರ್ಗ, ದುಷ್ಕೃತ್ಯಗಳಿಂದ ಹಿಂದಿರುಗಿರಿ’ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ” ಇದು ಯೆಹೋವನ ನುಡಿ.


ಯೋಷೀಯನು ಇಸ್ರಾಯೇಲರಿಗೆ ಸೇರಿದ ಎಲ್ಲಾ ಪ್ರಾಂತ್ಯಗಳೊಳಗಿನ ಅಸಹ್ಯ ಮೂರ್ತಿಗಳನ್ನೆಲ್ಲಾ ತೆಗೆದುಹಾಕಿಸಿ, ಇಸ್ರಾಯೇಲರಲ್ಲಿ ಉಳಿದಿರುವವರು ತಮ್ಮ ದೇವರಾದ ಯೆಹೋವನನ್ನೇ ಆರಾಧಿಸುವಂತೆ ಮಾಡಿದನು. ಅವನ ಜೀವಮಾನದಲ್ಲೆಲ್ಲಾ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಬಿಡದೆ ಹಿಂಬಾಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು