Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನೀನು ಈ ಜನರಿಗೂ ಮತ್ತು ಯೆರೂಸಲೇಮಿಗೂ, ‘ನಿಮಗೆ ಸಮಾಧಾನವಾಗುವುದು’ ಎಂದು ಹೇಳಿ ನಿಶ್ಚಯವಾಗಿ ಇವರನ್ನು ಬಹಳ ಮೋಸಗೊಳಿಸಿದ್ದಿ; ಖಡ್ಗವು ಪ್ರಾಣದ ಮಟ್ಟಿಗೂ ಇಳಿಯುತ್ತದಲ್ಲಾ” ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ನಾನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ನೀವು ನಿಶ್ಚಯವಾಗಿಯೂ ಈ ಜನರನ್ನು ಹಾಗೂ ಜೆರುಸಲೇಮಿನವರನ್ನು ಮೋಸಗೊಳಿಸಿದ್ದೀರಿ. ‘ನಿಮಗೆ ಸಮಾಧಾನವಾಗುವುದು’ ಎಂದು ಅವರಿಗೆ ಹೇಳಿದಿರಿ, ಆದರೆ ಕತ್ತಿ ಅವರ ಕುತ್ತಿಗೆಗೆ ಬಂದಿದೆ” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ನಾನು - ಅಯ್ಯೋ, ಕರ್ತನಾದ ಯೆಹೋವನೇ, ನೀನು ಈ ಜನರಿಗೂ ಯೆರೂಸಲೇವಿುಗೂ ನಿಮಗೆ ಸಮಾಧಾನವಾಗುವದೆಂದು ಹೇಳಿ ನಿಶ್ಚಯವಾಗಿ ಇವರನ್ನು ಬಹಳ ಮೋಸಗೊಳಿಸಿದ್ದೀ; ಖಡ್ಗವು ಪ್ರಾಣದ ಮಟ್ಟಿಗೂ ಇಳಿಯುತ್ತದಲ್ಲಾ ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ಯೆರೆಮೀಯನೆಂಬ ನಾನು, “ನನ್ನ ಒಡೆಯನಾದ ಯೆಹೋವನೇ, ನೀನು ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಮೋಸ ಮಾಡಿದೆ, ‘ನೀವು ಶಾಂತಿಯಿಂದ ಇರುವಿರಿ’ ಎಂದು ನೀನು ಅವರಿಗೆ ಹೇಳಿದೆ. ಆದರೆ ಈಗ ಅವರ ಕತ್ತಿನ ಮೇಲೆ ಖಡ್ಗ ಇದೆ” ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ನಾನು ಹೇಳಿದ್ದೇನೆಂದರೆ, “ಹಾ, ಸಾರ್ವಭೌಮ ಯೆಹೋವ ದೇವರೇ, ನಿಶ್ಚಯವಾಗಿ ನೀವು ಈ ಜನರಿಗೂ, ಯೆರೂಸಲೇಮಿಗೂ, ‘ನಿಮಗೆ ಸಮಾಧಾನವಾಗುವುದು,’ ಎಂದು ಹೇಳಿ, ಬಹಳ ಮೋಸ ಮಾಡಿದಿರಿ. ಖಡ್ಗವು ಅವರ ಕುತ್ತಿಗೆಗೆ ಬಂದಿದೆ” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:10
21 ತಿಳಿವುಗಳ ಹೋಲಿಕೆ  

ಅವರು ಯೆಹೋವನನ್ನು ಅಲ್ಲಗಳೆದು, ‘ಆತನು ಏನು ಮಾಡುವನು? ನಮಗೆ ಕೇಡುಬಾರದು, ಖಡ್ಗವೂ, ಕ್ಷಾಮವೂ ನಮ್ಮ ಕಣ್ಣಿಗೆ ಬೀಳವು;


ನನಗೋಸ್ಕರವಾಗಿಯೂ, ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಪಟ್ಟಣವನ್ನು ಉಳಿಸಿ ಕಾಪಾಡುವೆನು” ಎಂದು ಹೇಳುತ್ತಾನೆ ಎಂಬುದೇ.


ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.


ಅವರು ಇಂಥದ್ದನ್ನು ಮಾಡಿದ್ದರಿಂದ ದೇವರು ಅವರನ್ನು ಕೇವಲ ಲಜ್ಜಾಸ್ಪದವಾದ ಕಾಮಾಭಿಲಾಷೆಗಳಿಗೆ ಒಪ್ಪಿಸಿಬಿಟ್ಟನು. ಅವರ ಹೆಂಗಸರು ಸ್ವಾಭಾವಿಕವಾದ ಭೋಗವನ್ನು ತೊರೆದು ಸ್ವಭಾವಕ್ಕೆ ವಿರುದ್ಧವಾದ ಕಾಮಕೃತ್ಯಗಳನ್ನು ಮಾಡಿದರು.


ಆದಕಾರಣ ಅವರು ಮನಸ್ಸಿನ ದುರಾಶೆಗಳಂತೆ ನಡೆದು ತಮ್ಮ ತಮ್ಮ ದೇಹಗಳನ್ನು ತಮ್ಮೊಳಗೆ ಮಾನಹೀನಮಾಡಿಕೊಳ್ಳಲಿ ಎಂದು ದೇವರು ಅವರನ್ನು ಹೊಲಸಾದ ಕೆಟ್ಟ ನಡತೆಗಳಿಗೆ ಒಪ್ಪಿಸಿಬಿಟ್ಟನು.


ನಾನು ಈ ಮಾತನ್ನು ನುಡಿಯುತ್ತಿರುವಾಗಲೇ ಬೆನಾಯನ ಮಗನಾದ ಪೆಲತ್ಯನು ಸತ್ತುಹೋದನು. ಆಗ ನಾನು ಅಡ್ಡಬಿದ್ದು ಗಟ್ಟಿಯಾಗಿ ಕೂಗಿಕೊಂಡೆ, “ಅಯ್ಯೋ, ಕರ್ತನಾದ ಯೆಹೋವನೇ, ಇಸ್ರಾಯೇಲಿನಲ್ಲಿ ಉಳಿದವರನ್ನು ಸಂಪೂರ್ಣವಾಗಿ ನಿರ್ಮೂಲಮಾಡುವಿಯೋ?” ಎಂದು ಮೊರೆಯಿಟ್ಟೆನು.


ಯುವಕರು ಮತ್ತು ವೃದ್ಧರು ಬೀದಿಗಳಲ್ಲಿ ನೆಲದ ಮೇಲೆ ಬಿದ್ದಿರುತ್ತಾರೆ, ನನ್ನ ತರುಣಿಯರು ಹಾಗು ತರುಣರು ಖಡ್ಗದಿಂದ ಹತರಾಗಿದ್ದಾರೆ; ನೀನು ಕೋಪತೀರಿಸಿಕೊಳ್ಳುವ ದಿನದಲ್ಲಿ ಅವರನ್ನು ಕೊಂದುಹಾಕಿದಿ, ಕನಿಕರಿಸದೆ ಸಂಹರಿಸಿದಿ.


“ಆಹಾ! ಕರ್ತನಾದ ಯೆಹೋವನೇ! ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದಿ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.


ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂಬುದಾಗಿ ಯೆಹೋವನು ನುಡಿದಿದ್ದಾನೆ’ ಎಂದು ಹೇಳುತ್ತಲೇ ಇದ್ದಾರೆ. ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.


ಸಮಾಧಾನವಿಲ್ಲದ್ದಿದ್ದರೂ, ‘ಸಮಾಧಾನ’ ಎಂದು ಹೇಳಿ ನನ್ನ ಪ್ರಜೆಯೆಂಬಾಕೆಯ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.


ಸಮಾಧಾನವಿಲ್ಲದಿದ್ದರೂ, ಸಮಾಧಾನ ಎಂದು ಹೇಳಿ ನನ್ನ ಜನರ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.


ನಿನ್ನ ನಡತೆಯೂ ನಿನ್ನ ಕೃತ್ಯಗಳೂ ಈ ಕಷ್ಟವನ್ನು ನಿನಗೆ ಒದಗಿಸಿವೆ, ಇದು ನಿನ್ನ ದುರ್ನೀತಿಯ ಫಲ, ಇದು ವಿಷವೇ; ಹೃದಯದವರೆಗೂ ಏರುತ್ತದೆ.


ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನಾನು ಮಾತು ಬಲ್ಲವನಲ್ಲ, ಬಾಲಕನು” ಎಂದು ಅರಿಕೆ ಮಾಡಿದೆನು.


ಯೆಹೋವನೇ, ನಾವು ನಿನ್ನ ಮಾರ್ಗದಿಂದ ತಪ್ಪಿ ಅಲೆಯುವಂತೆ ಏಕೆ ಮಾಡುತ್ತೀ? ನಾವು ನಿನಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿನಪಡಿಸುವುದೇಕೆ? ನಿನ್ನ ಸೇವಕರ ನಿಮಿತ್ತ ನಿನ್ನ ಬಾಧ್ಯವಾದ ಕುಲಗಳಿಗಾಗಿ ತಿರುಗಿ ಪ್ರಸನ್ನನಾಗು.


ಇವರು ದಿವ್ಯದರ್ಶಿಗಳಿಗೆ, “ನಿಮಗೆ ದರ್ಶನವಾಗದಿರಲಿ” ಎನ್ನುತ್ತಾರೆ, ಮತ್ತು ಪ್ರವಾದಿಗಳಿಗೆ, “ನಮಗಾಗಿ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ, ನಯವಾದವುಗಳನ್ನು ನಮಗೆ ನುಡಿಯಿರಿ, ಮೋಸವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ.


ಈ ಸಾರಿ ನಾನು ನನ್ನ ವಶದಲ್ಲಿರುವ ಈ ಬಾಧೆಗಳನ್ನು ನಿನ್ನ ಪ್ರಜಾಪರಿವಾರದವರಿಗೆ ಉಂಟಾಗುವಂತೆಯೂ, ನಿನ್ನ ಹೃದಯಕ್ಕೂ ತಗಲುವಂತೆಯೂ ಮಾಡುವೆನು. ಆದುದರಿಂದ ಸಮಸ್ತ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನನ್ನ ವಿಷಯದಲ್ಲಿ ತಿಳಿದುಕೊಳ್ಳುವಿ.


ಆಗ ಮೋಶೆಯು ಯೆಹೋವನ ಬಳಿಗೆ ಹಿಂತಿರುಗಿ ಬಂದು, “ಸ್ವಾಮೀ, ಈ ಜನರಿಗೆ ಕೇಡನ್ನು ಮಾಡಿದ್ದೀಯಲ್ಲಾ? ನನ್ನನ್ನು ಕಳುಹಿಸಿದ್ದು ಯಾಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು