Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಿನ್ನ ನಡತೆಯೂ ನಿನ್ನ ಕೃತ್ಯಗಳೂ ಈ ಕಷ್ಟವನ್ನು ನಿನಗೆ ಒದಗಿಸಿವೆ, ಇದು ನಿನ್ನ ದುರ್ನೀತಿಯ ಫಲ, ಇದು ವಿಷವೇ; ಹೃದಯದವರೆಗೂ ಏರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಜುದೇಯ ನಾಡೇ, ನಿನ್ನ ನಡತೆ ಹಾಗೂ ಕೃತ್ಯಗಳೇ ನಿನಗೆ ಈ ವಿಪತ್ತನ್ನು ಒದಗಿಸಿವೆ. ಇದು ನಿನ್ನ ಪಾಪದ ಪ್ರತಿಫಲ. ನೋಡು ಎಷ್ಟು ಕಹಿಯಾಗಿದೆ; ಹೃದಯ ಇರಿಯುವಂತಿದೆ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿನ್ನ ನಡತೆಯೂ ನಿನ್ನ ಕೃತ್ಯಗಳೂ ಈ ಕಷ್ಟವನ್ನು ನಿನಗೆ ಒದಗಿಸಿವೆ; ಇದು ನಿನ್ನ ದುರ್ನೀತಿಯ ಫಲ, ಇದು ವಿಷವೇ; ಹೃದಯದವರೆಗೂ ಏರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ನಿನ್ನ ನಡತೆಯೂ ನಿನ್ನ ಕೃತ್ಯಗಳೂ ನಿನಗೆ ಈ ಕಷ್ಟವನ್ನು ತಂದವು. ನಿನ್ನ ದುಷ್ಟತನವೇ ನಿನ್ನ ಜೀವನವನ್ನು ಇಷ್ಟು ಕಷ್ಟಕರವನ್ನಾಗಿ ಮಾಡಿದೆ. ನಿನ್ನ ದುಷ್ಟತನವೇ ನಿನ್ನ ಮನಸ್ಸಿಗೆ ಆಳವಾದ ನೋವನ್ನು ಉಂಟುಮಾಡಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ನಿನ್ನ ಮಾರ್ಗವೂ, ನಿನ್ನ ಕ್ರಿಯೆಗಳೂ, ಇವುಗಳನ್ನು ನಿನಗೆ ಉಂಟುಮಾಡಿದವು, ಇದೇ ನಿನ್ನ ಶಿಕ್ಷೆ. ಅದು ಕಹಿಯಾದದ್ದಲ್ಲವೋ? ನಿನ್ನ ಹೃದಯಕ್ಕೆ ನಾಟುವುದಿಲ್ಲವೋ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:18
15 ತಿಳಿವುಗಳ ಹೋಲಿಕೆ  

ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟಿದ್ದರಿಂದ ನಿನಗೆ ಕೆಟ್ಟದ್ದಾಗಿಯೂ, ಕಹಿ ಅನುಭವವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು” ಎಂಬುದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.


ಮೂರ್ಖರು ಅಪರಾಧ, ದುರಾಚಾರಗಳ ದೆಸೆಯಿಂದ ಬಾಧೆಗೊಳಗಾದರು.


ನಿನ್ನನ್ನು ಮಾರ್ಗದರ್ಶಿಯಾಗಿ ನಡೆಸುತ್ತಿದ್ದ ನಿನ್ನ ದೇವರಾದ ಯೆಹೋವನನ್ನು ತೊರೆದುಬಿಟ್ಟು ಇದನ್ನೆಲ್ಲಾ ನೀನೇ ನಿನ್ನ ಮೇಲೆ ಬರಮಾಡಿಕೊಂಡೆಯಲ್ಲಾ.


ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ? ನೋಡಿರಿ, ನಿಮ್ಮ ದೋಷಗಳ ನಿಮಿತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.


ಆದುದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ, ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವುದು.


ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು.


ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ ಇವನನ್ನು ಕೊಂದು ಹಾಕಿ ನಮಗೆ ದೊಡ್ಡ ಕೇಡನ್ನು ಉಂಟು ಮಾಡಿಕೊಳ್ಳುವವರಾಗಿದ್ದೇವೆ” ಎಂಬುದಾಗಿ ಸಕಲಜನ ಸಮೂಹಕ್ಕೆ ಹೇಳಿದರು.


“ನಮ್ಮ ದೇವರಾದ ಯೆಹೋವನು ಇವುಗಳನ್ನೆಲ್ಲಾ ನಮಗೆ ಏಕೆ ಮಾಡಿದ್ದಾನೆ?” ಎಂದು ನಿನ್ನ ಜನರು ಅನ್ನುವಾಗ ನೀನು ಅವರಿಗೆ, “ನೀವು ಯೆಹೋವನನ್ನು ತೊರೆದು, ಸ್ವದೇಶದಲ್ಲಿ ಅನ್ಯದೇವತೆಗಳನ್ನು ಆರಾಧಿಸಿದ ಹಾಗೆ ಪರದೇಶದಲ್ಲಿ ಅನ್ಯರನ್ನು ಆರಾಧಿಸುವಿರಿ” ಎಂದು ಹೇಳು.


ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರಮಿಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು.


ನಿಮ್ಮ ಅಪರಾಧಗಳು ನಿಮಗಾಗುವ ಪ್ರಯೋಜನಗಳನ್ನು ತಪ್ಪಿಸಿಬಿಟ್ಟಿವೆ, ನಿಮ್ಮ ಪಾಪಗಳು ನಿಮ್ಮ ಒಳಿತನ್ನು ತಡೆದಿದೆ.


ಅವರ ಪಾಪಕ್ಕೂ, ದುರಾಚಾರಗಳಿಗೂ ತಕ್ಕಂತೆ ನಾನು ಅವರನ್ನು ದಂಡಿಸಿ ನನ್ನ ಮುಖವನ್ನು ಅವರಿಗೆ ಮರೆಮಾಡಿದ್ದೇನೆ.”


ತಮ್ಮ ದುರ್ಮಾರ್ಗವೆಲ್ಲಾ ಯೆಹೋವನ ಜ್ಞಾಪಕದಲ್ಲಿರುತ್ತದೆ ಎಂದು ಅವರು ಮನದಟ್ಟು ಮಾಡಿಕೊಳ್ಳುವುದಿಲ್ಲ; ಅವರ ದುಷ್ಕೃತ್ಯಗಳು ಈಗ ಅವರನ್ನು ಮುತ್ತಿಕೊಂಡಿವೆ, ನನ್ನ ಕಣ್ಣೆದುರಿಗಿವೆ.


ಮತ್ತು ಇವರ ಪ್ರವಾದನೆಯನ್ನು ಕೇಳುವ ಜನರು ಕ್ಷಾಮ ಮತ್ತು ಖಡ್ಗಗಳ ದೆಸೆಯಿಂದ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಅವರ ಹೆಂಡತಿ ಮತ್ತು ಮಕ್ಕಳನ್ನೂ ಹೂಣಿಡುವುದಕ್ಕೆ ಯಾರೂ ಇರುವುದಿಲ್ಲ; ನಾನು ಅವರ ದುಷ್ಟತನವನ್ನೇ ಅವರ ಮೇಲೆ ಹೊಯ್ದುಬಿಡುವೆನು.


ಆತನು ನನಗೆ ಕಹಿಯಾದ ಆಹಾರವನ್ನು ಕೊಟ್ಟು, ವಿಷ ಪಾನವನ್ನು ಕುಡಿಯಮಾಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು