Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹಾ, ನನ್ನ ಕರುಳು! ಕರುಳು! ಯಾತನೆಪಡುತ್ತದೆ; ಆಹಾ, ನನ್ನ ಗುಂಡಿಗೆಯ ಪಕ್ಕಗಳು! ನನ್ನ ಹೃದಯವು ನನ್ನೊಳಗೆ ತಳಮಳಗೊಂಡಿದೆ! ನಾನು ಬಾಯಿಮುಚ್ಚಿಕೊಂಡಿರಲಾರೆ; ನನ್ನ ಆತ್ಮವೇ, ನೀನು ತುತ್ತೂರಿಯ ಶಬ್ದವನ್ನೂ, ಯುದ್ಧದ ಘೋಷವನ್ನೂ ಕೇಳುತ್ತಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅಯ್ಯೋ, ನನ್ನ ಕರುಳು ಯಾತನೆಯಿಂದ ಕಿತ್ತುಬರುವಂತಿದೆ. ಅಕಟಾ ! ನನ್ನ ಗುಂಡಿಗೆಯ ಪಕ್ಕೆಗಳು ಸೀಳುವಂತಿದೆ, ಹೃದಯ ತಳಮಳಗೊಂಡಿದೆ ! ಇನ್ನು ಬಾಯಿಮುಚ್ಚಿಕೊಂಡಿರಲು ನನ್ನಿಂದಾಗದು; ನನ್ನ ಮನವೇ, ಕಾಳಗದ ಕಹಳೆಯನ್ನೂ ಯುದ್ಧದ ಕೋಲಾಹಲವನ್ನೂ ಕೇಳುತ್ತಿರುವೆ, ಅಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಹಾ, ನನ್ನ ಕರುಳು! ಕರುಳು! ಯಾತನೆಪಡುತ್ತೇನೆ; ಆಹಾ, ನನ್ನ ಗುಂಡಿಗೆಯ ಪಕ್ಕಗಳು! ನನ್ನ ಹೃದಯವು ನನ್ನೊಳಗೆ ತಳಮಳಗೊಂಡಿದೆ! ನಾನು ಬಾಯಿಮುಚ್ಚಿಕೊಂಡಿರಲಾರೆ; ನನ್ನ ಆತ್ಮವೇ, ನೀನು ತುತೂರಿಯ ಶಬ್ದವನ್ನೂ ಯುದ್ಧಘೋಷವನ್ನೂ ಕೇಳುತ್ತೀಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅಯ್ಯೋ, ನನ್ನ ದುಃಖ ಮತ್ತು ಚಿಂತೆ ನನ್ನ ಹೊಟ್ಟೆಯಲ್ಲಿ ಸಂಕಟವನ್ನು ಉಂಟುಮಾಡುತ್ತಿವೆ. ನೋವಿನಿಂದ ನಾನು ಬಾಗಿಹೋಗಿದ್ದೇನೆ. ನಾನು ತುಂಬ ಹೆದರಿಕೊಂಡಿದ್ದೇನೆ. ನನ್ನ ಹೃದಯವು ಒಳಗೆ ತಳಮಳಗೊಳ್ಳುತ್ತಿದೆ. ನಾನು ಬಾಯಿ ಮುಚ್ಚಿಕೊಂಡಿರಲಾರೆ. ಏಕೆಂದರೆ, ನಾನು ತುತ್ತೂರಿಯ ಶಬ್ದವನ್ನು ಕೇಳಿದ್ದೇನೆ. ಆ ತುತ್ತೂರಿಯು ಸೈನ್ಯವನ್ನು ಯುದ್ಧಕ್ಕೆ ಕರೆಯುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಓ, ನನ್ನ ಕರುಳು, ನನ್ನ ಕರುಳು! ನಾನು ನೋವಿನಿಂದ ನರಳುತ್ತೇನೆ. ನನ್ನ ಹೃದಯವು ನನ್ನಲ್ಲಿ ತಳಮಳಗೊಂಡಿದೆ. ನಾನು ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿ ಶಬ್ದವನ್ನೂ, ಯುದ್ಧದ ಆರ್ಭಟವನ್ನೂ ಕೇಳುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:19
48 ತಿಳಿವುಗಳ ಹೋಲಿಕೆ  

ಅದು ನನಗೆ ಕೇಳಿಸಲು ನನ್ನ ಒಡಲು ನಡುಗಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು. ಕ್ಷಯವು ನನ್ನ ಎಲುಬುಗಳಲ್ಲಿ ಸೇರಿತು. ನಾನು ನಿಂತ ಹಾಗೆಯೇ ನಡುಗಿದೆನು. ವಿಪತ್ಕಾಲವು ನಮ್ಮನ್ನು ಹಿಂಸಿಸುವ ಜನರನ್ನು ಎದುರಾಯಿಸಿ ಅವರ ಮೇಲೆ ಬೀಳುವವರೆಗೂ ನಾನು ಅದಕ್ಕಾಗಿ ತಾಳ್ಮೆಯಿಂದ ಎದುರುನೋಡುವೆನು.


ಹೀಗಿರಲು, “ನನ್ನ ಕಡೆಯಿಂದ ದೃಷ್ಟಿ ತಿರುಗಿಸಿರಿ, ಬಹು ಸಂಕಟದಿಂದ ನಾನು ಅಳುವೆನು, ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವುದಕ್ಕೆ ತವಕಗೊಳ್ಳದಿರಿ.


ಆದುದರಿಂದ ಮೋವಾಬಿನ ನಿಮಿತ್ತ ನನ್ನ ಹೃದಯವು, ಕೀರ್ ಹೆರೆಸಿನ ನಿಮಿತ್ತ ನನ್ನ ಅಂತರಂಗವು ಕಿನ್ನರಿಯಂತೆ ಅಲುಗಿ ನುಡಿಯುತ್ತದೆ.


“ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದು ಹೋಗರು, ದನಕರುಗಳ ಶಬ್ದ ಕಿವಿಗೆ ಬೀಳದು, ಮೃಗ ಪಕ್ಷಿಗಳು ತೊಲಗಿಹೋಗಿವೆ.


ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ, ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲಿರುಳೂ ಅಳಬೇಕಲ್ಲಾ!


ಆದುದ್ದರಿಂದ ನನ್ನ ಸೊಂಟದಲ್ಲಿ ನೋವು ತುಂಬಿದೆ, ಪ್ರಸವವೇದನೆಯಂತಿರುವ ವೇದನೆಯು ನನ್ನನ್ನು ಹಿಡಿದಿದೆ, ಕಿವಿ ಕಿವುಡಾಗುವಷ್ಟು ಸಂಕಟಪಡುತ್ತೇನೆ, ಕಣ್ಣು ಕುರುಡಾಗುವಷ್ಟು ತತ್ತರಗೊಂಡಿದ್ದೇನೆ.


ನನ್ನ ಪ್ರಿಯರಾದ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಾನು ನಿಮಗಾಗಿ ಪ್ರಸವವೇದನೆ ಪಡುತ್ತಿರುವೆನು.


ಆಗ ದಾನಿಯೇಲನಾದ ನಾನು ಮೂರ್ಛೆಹೋಗಿ, ಕೆಲವು ದಿನಗಳು ಕಾಯಿಲೆ ಬಿದ್ದೆನು. ಆ ಮೇಲೆ ಎದ್ದು ರಾಜಕಾರ್ಯವನ್ನು ನಡೆಸಿದೆನು. ಆ ಕನಸಿಗೆ ಬೆಚ್ಚಿಬೆರಗಾದೆನು. ಅದು ಯಾರಿಗೂ ತಿಳಿಯಲಿಲ್ಲ.


“ದಾನಿಯೇಲನಾದ ನನ್ನ ಆತ್ಮವು ನನ್ನ ಶರೀರದೊಳಗೆ ವ್ಯಥೆಗೊಂಡಿತು, ನನ್ನ ಮನಸ್ಸಿನಲ್ಲಿ ಬಿದ್ದ ಕನಸುಗಳು ನನ್ನನ್ನು ಕಳವಳಪಡಿಸಿದವು.


ನನ್ನ ಹೃದಯವು ಮೋವಾಬಿನ ನಿಮಿತ್ತವಾಗಿ ಮೊರೆಯಿಡುತ್ತದೆ, ಅಲ್ಲಿಂದ ಪಲಾಯನವಾದವರು ಚೋಯರಿಗೂ, ಎಗ್ಲತ್ ಶೆಲಿಶೀಯಕ್ಕೂ ಓಡಿಹೋಗುತ್ತಾರೆ, ಅಳುತ್ತಾ ಲೂಹೀತ್ ದಿಣ್ಣೆಯನ್ನು ಹತ್ತುತ್ತಾರೆ, ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಧ್ವನಿಗೈಯುತ್ತಾರೆ.


ನನ್ನ ಮನವೇ, ನಿನ್ನ ವಿಶ್ರಾಂತಿಯ ನೆಲೆಗೆ ತಿರುಗು. ಯೆಹೋವನು ನಿನಗೆ ಮಹೋಪಕಾರಗಳನ್ನು ಮಾಡಿದ್ದಾನಲ್ಲಾ.


ಸಹೋದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬುದೇ ನನ್ನ ಮನೋಭಿಲಾಷೆಯೂ ಮತ್ತು ದೇವರಿಗೆ ನಾನು ಮಾಡುವ ವಿಜ್ಞಾಪನೆಯೂ ಆಗಿದೆ.


ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವುದಿಲ್ಲವೋ? ಯೆಹೋವನಿಂದಲ್ಲದೆ ಪಟ್ಟಣಕ್ಕೆ ವಿಪತ್ತು ಸಂಭವಿಸುವುದೋ?


ಈ ಕನಸಿನ ಪ್ರಸ್ತಾಪವು ಇಲ್ಲಿಗೆ ಮುಗಿಯಿತು. ದಾನಿಯೇಲನಾದ ನಾನು ನನ್ನ ಯೋಚನೆಗಳಿಂದ ಬಹು ಕಳವಳಗೊಂಡೆ. ನನ್ನ ಮುಖವು ಕಳೆಗುಂದಿತು. ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲಿ ಇಟ್ಟುಕೊಂಡೆ.


ಕಣ್ಣೀರು ಸುರಿಸಿ ಸುರಿಸಿ ನನ್ನ ಕಣ್ಣು ಇಂಗಿ ಹೋಗಿದೆ, ನನ್ನ ಕರುಳು ಕುದಿಯುತ್ತದೆ, ನನ್ನ ಜನವೆಂಬ ಕನ್ಯೆಯು ಹಾಳಾಗಿ ಮಕ್ಕಳುಮರಿಗಳು ಪಟ್ಟಣದ ಚೌಕಗಳಲ್ಲಿ ಮೂರ್ಛೆ ಹೋದುದರಿಂದ ನನ್ನ ಕರುಳು ಕರಗಿದೆ.


ಈ ವಿಪತ್ತುಗಳಿಂದ ಗೋಳಾಡುತ್ತಿರುವೆನು, ನನ್ನನ್ನು ಸಂತೈಸಿ ದಣಿವಾರಿಸತಕ್ಕವನು ದೂರವಾಗಿರುವುದರಿಂದ ನನ್ನ ಕಣ್ಣೀರು ಧಾರೆಧಾರೆಯಾಗಿ ಸುರಿಯುವುದು. ಶತ್ರುವು ಗೆದ್ದು ನನ್ನ ಮಕ್ಕಳು ಹಾಳಾದರು.


ಪ್ರವಾದಿಗಳ ವಿಷಯ: ನನ್ನ ಹೃದಯವು ನನ್ನೊಳಗೆ ಒಡೆದುಹೋಗಿದೆ; ನನ್ನ ಎಲುಬುಗಳೆಲ್ಲಾ ಕರಗಿಹೋಗಿವೆ. ನಾನು ಯೆಹೋವನಿಗೂ ಆತನ ಪರಿಶುದ್ಧ ವಾಕ್ಯಗಳಿಗೂ ವಶನಾಗಿ ಅಮಲೇರಿದವನಂತಿದ್ದೇನೆ. ಹೌದು, ದ್ರಾಕ್ಷಾರಸಕ್ಕೆ ಸೋತವನ ಹಾಗಿದ್ದೇನೆ.


“ನಾನು ಯೆಹೋವನ ವಿಷಯವನ್ನು ಪ್ರಕಟಿಸುವುದಿಲ್ಲ, ಆತನ ಹೆಸರಿನಲ್ಲಿ ಇನ್ನು ಮಾತನಾಡುವುದಿಲ್ಲ” ಎಂದುಕೊಂಡರೆ, ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ, ಸಹಿಸಿ ಸಹಿಸಿ ಆಯಾಸಗೊಂಡಿದ್ದೇನೆ, ಇನ್ನು ಸಹಿಸಲಾರೆ.


ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು. ಯೆಹೋವನ ಮಂದೆಯು ಸೆರೆಯಾಗಿ ಹೋದುದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.


ನಾನು ಎಷ್ಟರವರೆಗೆ ಯುದ್ಧದ ಪತಾಕೆಗಳನ್ನು ನೋಡಲಿ, ಎಂದಿನ ತನಕ ತುತ್ತೂರಿಯ ಶಬ್ದವನ್ನು ಕೇಳಲಿ!


ಯೆಹೂದದಲ್ಲಿ ಸಾರಿರಿ, ಯೆರೂಸಲೇಮಿನೊಳಗೆ ಪ್ರಕಟಿಸುತ್ತಾ, “ದೇಶದಲ್ಲೆಲ್ಲಾ ಕೊಂಬೂದಿರಿ, ಕೂಡಿಬನ್ನಿರಿ ಕೋಟೆಕೊತ್ತಲಗಳ ಊರುಗಳನ್ನು ಸೇರೋಣ ಎಂದು ಕೂಗಿರಿ.


ಯೆಹೋವನಿಗೆ ಸ್ತೋತ್ರ! ನನ್ನ ಮನವೇ, ಯೆಹೋವನನ್ನು ಸ್ತುತಿಸು.


ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿಮಿತ್ತ, ನನ್ನ ಕಣ್ಣೀರು ಪ್ರವಾಹವಾಗಿ ಹರಿಯುತ್ತದೆ. ಸಾದ್ದಿ.


ನಿನ್ನ ಧರ್ಮಶಾಸ್ತ್ರ ಭ್ರಷ್ಟರಾದ ದುಷ್ಟರಿಗಾಗಿ, ಕೋಪಗೊಂಡಿದ್ದೇನೆ.


ನನ್ನ ಮನವೇ, ಯೆಹೋವನನ್ನು ಕೊಂಡಾಡು; ನನ್ನ ಸರ್ವೇಂದ್ರಿಯಗಳೇ, ಆತನ ಪವಿತ್ರ ನಾಮವನ್ನು ಕೀರ್ತಿಸಿರಿ.


ನಾನು ಯೆಹೋವನನ್ನು ಕುರಿತು, “ನೀನೇ ನನ್ನ ಒಡೆಯನು; ನನ್ನ ಸುಖವು ನಿನ್ನಲ್ಲಿಯೇ ಹೊರತು ಬೇರೆ ಇಲ್ಲ” ಎಂದು ಹೇಳುವೆನು.


ಪೂರ್ವಪ್ರಸಿದ್ಧವಾದ ಕೀಷೋನ್ ಹೊಳೆಯು ಶತ್ರುಗಳನ್ನು ಕೊಚ್ಚಿಕೊಂಡು ಹೋಯಿತು. ನನ್ನ ಮನವೇ ನೀನು ಧೈರ್ಯದಿಂದ ಮುಂದಕ್ಕೆ ಹೊರಡು.


ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮನ್ನು ಉಪದ್ರವಪಡಿಸುವ ಶತ್ರುಗಳನ್ನು ಎದುರಿಸುವುದಕ್ಕಾಗಿ ಯುದ್ಧಕ್ಕೆ ಹೊರಡುವಾಗ ಆ ತುತ್ತೂರಿಗಳನ್ನು ಆರ್ಭಟವಾಗಿ ಊದಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಜ್ಞಾಪಕಕ್ಕೆ ತಂದುಕೊಂಡು ಶತ್ರುಗಳ ಕೈಯಿಂದ ರಕ್ಷಿಸುವನು.


ನನ್ನ ಪ್ರಾಣವೇ ಅವರ ಗುಪ್ತವಾದ ದುರಾಲೋಚನೆಗಳಿಗೆ ನೀನು ಒಳಪಡಬಾರದು. ನನ್ನ ಮನವೇ ಅವರ ಗುಂಪಿಗೆ ನೀನು ಸೇರಬೇಡ. ಆದುದರಿಂದ ನನ್ನ ಹೃದಯವು ಸಂತೋಷಿಸುತ್ತದೆ. ಅವರು ಕೋಪೋದ್ರೆಕದಿಂದ ಮನುಷ್ಯರನ್ನು ಸಂಹರಿಸಿದರು. ಮದದಿಂದ ಎತ್ತುಗಳನ್ನು ದುರ್ಬಲಗೊಳಿಸಿದರು.


ತುತ್ತೂರಿಯು ಅಸ್ಪಷ್ಟ ಶಬ್ದವನ್ನು ಮೊಳಗಿಸಿದರೆ ಯಾರು ಯುದ್ಧಕ್ಕೆ ಸಿದ್ಧಮಾಡಿಕೊಳ್ಳುವರು?


ನಾವು ಅದರ ಸುದ್ದಿಯನ್ನು ಕೇಳಿದೆವು, ನಮ್ಮ ಕೈಗಳು ಜೋಲುಬಿದ್ದವು, ಪ್ರಸವವೇದನೆಯಂತಿರುವ ಯಾತನೆಯು ನಮ್ಮನ್ನು ಹಿಡಿದಿದೆ.


ನನ್ನ ಪ್ರಜೆಯೆಂಬಾಕೆಯ ವೇದನೆಯಿಂದ ನನಗೆ ಮನೋಯಾತನೆಯಾಯಿತು, ನಾನು ಶೋಕಿಸಿದೆನು, ಭಯವು ನನ್ನನ್ನು ಹಿಡಿದಿದೆ.


ಬೇಡವೇ ಬೇಡ; ನಾವು ಯುದ್ಧ ಕಾಣದೆ, ತುತ್ತೂರಿಯ ಶಬ್ದ ಕೇಳದೆ, ಅನ್ನದ ಕೊರತೆಯಿಂದ ಹಸಿವಾಗದೆ ಇರುವ ಐಗುಪ್ತ ದೇಶಕ್ಕೆ ಹೋಗಿ ಅಲ್ಲೇ ವಾಸಿಸುವೆವು’ ಎಂದುಕೊಂಡರೆ,


ಆದುದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು, ಯುದ್ಧ ಘೋಷಿಸುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು; ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಯೆಹೋವನ ನುಡಿ.”


ಯುದ್ಧದ ಆರ್ಭಟವೂ ಮಹಾನಾಶನದ ಶಬ್ದವೂ ದೇಶದೊಳಗೆ ಕೇಳಿಸುತ್ತವೆ.


ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದನ್ನು ಕಂಡು ಭಯಪಟ್ಟು ಸ್ವಲ್ಪ ಸಮಯ ಸ್ತಬ್ಧನಾದನು. ರಾಜನು ಇದನ್ನು ನೋಡಿ, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ” ಎಂದು ಹೇಳಲು ಬೇಲ್ತೆಶಚ್ಚರನು, “ನನ್ನ ಒಡೆಯನೇ, ಆ ಕನಸು ನಿನ್ನ ಶತ್ರುಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!


ಅಲ್ಲಿದ್ದಾಗ ಅವನು ಪಕ್ಕನೆ, “ಅಪ್ಪಾ, ನನ್ನ ತಲೆ, ನನ್ನ ತಲೆ” ಎಂದು ಕೂಗಲು, ತಂದೆಯು ಒಬ್ಬ ಸೇವಕನನ್ನು ಕರೆದು ಅವನಿಗೆ, “ಇವನನ್ನು ತಾಯಿಯ ಹತ್ತಿರ ಕರೆದುಕೊಂಡು ಹೋಗು” ಎಂದು ಆಜ್ಞಾಪಿಸಿದನು.


ಸ್ಥಿರ ದೃಷ್ಟಿಯಿಂದ ಹಜಾಯೇಲನನ್ನು ದಿಟ್ಟಿಸಿ ನೋಡಿ ಅಳತೊಡಗಿದನು.


ನನ್ನ ಹೃದಯವು ಬಡಿದುಕೊಳ್ಳುತ್ತಿದೆ, ನಡುಕವು ನನ್ನನ್ನು ಆವರಿಸಿಕೊಂಡಿದೆ, ನಾನು ಅಪೇಕ್ಷಿಸುತ್ತಿದ್ದ ರಾತ್ರಿಯು ನನಗೆ ಭಯವಾಗಿ ಪರಿಣಮಿಸಿದೆ.


ಅಯ್ಯೋ, ನನ್ನ ದುಃಖಕ್ಕೆ ಕೊನೆಯಿಲ್ಲವೇ? ನನ್ನ ಹೃದಯವು ನನ್ನೊಳಗೆ ಕುಂದಿಹೋಗಿದೆ.


ಯೆಹೋವನೇ, ಕಟಾಕ್ಷಿಸು; ನಾನು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ, ನನ್ನ ಕರುಳು ಕುದಿಯುತ್ತಿದೆ. ನಾನು ಕೇವಲ ದ್ರೋಹಮಾಡಿದ್ದರಿಂದ ನನ್ನ ಹೃದಯವು ನನ್ನೊಳಗೆ ಕುಂದಿಹೋಗಿದೆ; ಮನೆಯ ಹೊರಗೆ ಸಂಹಾರ, ಒಳಗೆ ಪ್ರಾಣಸಂಕಟ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು