Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ‘ಯೆಹೋವನ ಜೀವದಾಣೆ’ ಎಂದು ಸತ್ಯ, ನ್ಯಾಯ ಮತ್ತು ಧರ್ಮಾನುಸಾರವಾಗಿ ನೀನು ಪ್ರಮಾಣ ಮಾಡಿದರೆ, ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ‘ಸರ್ವೇಶ್ವರ ಸ್ವಾಮಿಯ ಜೀವದಾಣೆ’ ಎಂದು ಸತ್ಯ, ನ್ಯಾಯ, ನೀತಿಗೆ ಅನುಗುಣವಾಗಿ ಪ್ರಮಾಣಮಾಡಿರಿ, ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯಲು ಆಶಿಸುವರು, ನನ್ನಲ್ಲೇ ಹೆಮ್ಮೆಪಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನ ಜೀವದಾಣೆ ಎಂದು ಸತ್ಯನ್ಯಾಯ ಧರ್ಮಾನುಸಾರವಾಗಿ ನೀನು ಪ್ರಮಾಣಮಾಡಿದರೆ ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀನು ಹೀಗೆ ಮಾಡಿದರೆ ನನ್ನ ಹೆಸರಿನ ಮೇಲೆ ಪ್ರಮಾಣ ಮಾಡಲು ಶಕ್ತಳಾಗುವೆ. ‘ಹಾದು, ಯೆಹೋವನಾಣೆ’ ಎಂದು ಹೇಳಶಕ್ತಳಾಗುವೆ. ನೀನು ಆ ಪದಗಳನ್ನು ಸತ್ಯವಾಗಿಯೂ ಪ್ರಾಮಾಣಿಕವಾಗಿಯೂ ಸರಿಯಾಗಿ ಉಪಯೋಗಿಸಲು ಸಾಧ್ಯವಾಗುತ್ತದೆ. ನೀನು ಹೀಗೆ ಮಾಡಿದರೆ, ಎಲ್ಲಾ ಜನಾಂಗಗಳು ಯೆಹೋವನ ಆಶೀರ್ವಾದವನ್ನು ಪಡೆಯುತ್ತವೆ. ಆತನ ಕಾರ್ಯಗಳಿಗಾಗಿ ಆತನಿಗೆ ಸ್ತೋತ್ರ ಮಾಡುತ್ತವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿಯಿಂದಲೂ, ‘ಯೆಹೋವ ದೇವರ ಜೀವದಾಣೆ,’ ಎಂದು ಪ್ರಮಾಣ ಮಾಡುವೆ. ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯ ಬಯಸುವರು. ನನ್ನಲ್ಲಿಯೇ ಹೆಮ್ಮೆಪಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:2
30 ತಿಳಿವುಗಳ ಹೋಲಿಕೆ  

ನಿಮ್ಮ ಪೂರ್ವದ ಕಷ್ಟಗಳು ಇನ್ನು ನನ್ನ ಕಣ್ಣಿಗೆ ಬೀಳದೆ ಮರೆತು ಹೋಗಿರುವುದರಿಂದ ಲೋಕದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವ ಪ್ರತಿಯೊಬ್ಬನೂ ಸತ್ಯಸಂಧನಾದ ದೇವರ ಹೆಸರಿನಿಂದ ಆಶೀರ್ವದಿಸಿಕೊಳ್ಳುವನು; ಲೋಕದಲ್ಲಿ ಆಣೆಯಿಡುವ ಪ್ರತಿಯೊಬ್ಬನೂ ಸತ್ಯವಂತನಾದ ದೇವರ ಮೇಲೆ ಆಣೆಯಿಡುವನು.


ಹೆಚ್ಚಳಪಡುವವನು ತಾನು ನನ್ನನ್ನು ತಿಳಿದು, ನಾನು ಲೋಕದಲ್ಲಿ ಪ್ರೀತಿ, ನೀತಿ ಮತ್ತು ನ್ಯಾಯಗಳನ್ನು ತೋರ್ಪಡಿಸುವ ಯೆಹೋವನಾಗಿರುವೆನು ಎಂದು ಗ್ರಹಿಸಿಕೊಂಡಿದ್ದೇನೆ ಎಂಬುವುದಕ್ಕೇ ಹೆಚ್ಚಳಪಡಲಿ; ಪ್ರೀತಿ, ನೀತಿ ಮತ್ತು ನ್ಯಾಯಗಳೇ ನನಗೆ ಆನಂದ” ಎಂದು ಯೆಹೋವನು ನುಡಿಯುತ್ತಾನೆ.


ನೀನು ನನ್ನ ಮಾತಿಗೆ ವಿಧೇಯನಾಗಿ ಭೂಮಿಯ ಎಲ್ಲಾ ಜನಾಂಗಗಳಿಗೆ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಯೆಹೋವನು ವಾಗ್ದಾನ ಮಾಡಿದ್ದಾನೆ.” ಎಂದನು.


“ಹೆಚ್ಚಳಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ.”


“ಹೆಚ್ಚಳಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ” ಎಂಬ ವೇದೋಕ್ತಿ ನೆರವೇರುವುದಕ್ಕಾಗಿಯೇ ಹೀಗಾಯಿತು.


ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಆತನನ್ನೇ ಸೇವಿಸಬೇಕು; ಆತನನ್ನು ಹೊಂದಿಕೊಂಡು, ಆತನ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.


ದೇವರು ಅನ್ಯಜನರನ್ನು ನಂಬಿಕೆಯ ನಿಮಿತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬುದಾಗಿರುವ ವೇದವಾಕ್ಯವನ್ನು ಮೊದಲೇ ಕಂಡು ಅಬ್ರಹಾಮನಿಗೆ, “ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವುದೆಂಬ” ಸುವಾರ್ತೆಯನ್ನು ಮುಂಚಿತವಾಗಿಯೇ ತಿಳಿಸಿತು.


ಇವರು ಮೊದಲು ಬಾಳನ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ನನ್ನ ಜನರಿಗೆ ಕಲಿಸಿಕೊಟ್ಟ ಪ್ರಕಾರ, ಈಗ ನನ್ನ ಹೆಸರನ್ನೆತ್ತಿ ‘ಯೆಹೋವನ ಜೀವದಾಣೆ’ ಎಂದು ಪ್ರಮಾಣಮಾಡುವ ನನ್ನ ಜನರ ಅಭ್ಯಾಸವನ್ನು ಮಾಡಿಕೊಂಡರೆ ನನ್ನ ಜನರ ಮಧ್ಯದಲ್ಲಿ ನೆಲೆಗೊಂಡು ವೃದ್ಧಿಯಾಗುವರು.


ಇಸ್ರಾಯೇಲಿನ ಸಮಸ್ತ ಸಂತತಿಯವರೂ ಯೆಹೋವನ ಮೂಲಕ ಸತ್ಯವಂತರಾಗಿ ಆತನಲ್ಲಿ ಆನಂದಿಸುವರು” ಎಂದು ನನ್ನ ವಿಷಯವಾಗಿ ಜನರು ಅಂದುಕೊಳ್ಳುತ್ತಾರೆ.


ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.


ಅವರು ಯೆರೂಸಲೇಮಿನೊಳಗೆ ವಾಸಿಸುವರು; ಸತ್ಯಸಂಧತೆಯಿಂದಲೂ ಮತ್ತು ಸದ್ಧರ್ಮದಿಂದಲೂ ಅವರು ನನಗೆ ಪ್ರಜೆಯಾಗಿರುವರು. ಹಾಗೆಯೇ ನಾನು ಅವರಿಗೆ ದೇವರಾಗಿರುವೆನು.”


ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ಸತ್ಯದ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು. ಎಲ್ಲರೂ ನನಗೆ ಅಡ್ಡಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆಮಾಡುವರು.


“ನಿನಗೆ ನಂಬಿಗಸ್ತನಾಗಿಯೂ, ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ನೀನು ಮಹಾ ಕೃಪೆಯನ್ನು ತೋರಿಸಿದ್ದೀ. ಅವನ ಮೇಲೆ ಬಹಳವಾಗಿ ಕೃಪೆಯಿಟ್ಟು ಈಹೊತ್ತು ಅವನ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿದ್ದರಲ್ಲಿ ಅದನ್ನು ಸಂಪೂರ್ಣಗೊಳಿಸಿರುವೆ.


ನಿಜವಾದ ಸುನ್ನತಿಯವರು ಯಾರೆಂದರೆ, ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವುಗಳೇ.


ನಾನು ನಿನ್ನನ್ನು ಶಾಶ್ವತವಾಗಿ ವರಿಸುವೆನು; ಹೌದು, ನೀತಿ, ನ್ಯಾಯ, ಪ್ರೀತಿ ಮತ್ತು ದಯೆಗಳಿಂದ ನಿನ್ನನ್ನು ವರಿಸುವೆನು.


ಜನರು, “ಯೆಹೋವನ ಜೀವದಾಣೆ” ಎಂದರೂ ಆ ಆಣೆಯು ಸುಳ್ಳೇ ಸುಳ್ಳು ಎಂದು ಯೆಹೋವನು ನುಡಿಯುತ್ತಾನೆ.


ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ; ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ, ಯಾಕೋಬ್ಯರಲ್ಲಿ ನ್ಯಾಯ, ನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ.


ಮೇಲೆ ಹೇಳಿದ ಎಲ್ಲಾ ಕಷ್ಟಗಳು ನಿಮಗೆ ಸಂಭವಿಸಿ, ನೀವು ಸಂಕಟದಲ್ಲಿರುವಾಗ ಅಂತ್ಯದಲ್ಲಿ ನೀವು ಆತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ಕಿವಿಗೊಡುವಿರಿ.


ಈ ರಾತ್ರಿ ಇಲ್ಲೇ ಇರು; ನಾಳೆ ಅವನು ಮೈದುನಧರ್ಮವನ್ನು ನೆರವೇರಿಸಿದರೆ ಸರಿ; ಇಲ್ಲವಾದರೆ ಯೆಹೋವನಾಣೆ, ನಾನೇ ಅದನ್ನು ನೆರವೇರಿಸುವೆನು. ಬೆಳಗಾಗುವ ತನಕ ಇಲ್ಲೇ ಮಲಗಿಕೋ” ಎಂದು ಹೇಳಿದನು.


ಆ ಕಾಲದಲ್ಲಿ ಯೆರೂಸಲೇಮನ್ನು ಯೆಹೋವನ ಸಿಂಹಾಸನವೆಂದು ಕರೆಯುವರು; ಯೆಹೋವನ ನಾಮಮಹತ್ವದ ಸ್ಥಾನವಾದ ಯೆರೂಸಲೇಮಿಗೆ ಸಕಲ ಜನಾಂಗಗಳವರು ನೆರೆದು ಬರುವರು; ಅವರು ಇನ್ನು ಮೇಲೆ ತಮ್ಮ ದುಷ್ಟ ಹೃದಯದ ಹಟದಂತೆ ನಡೆಯರು.


ನೀವು ನಿಮ್ಮ ನಡತೆಯನ್ನು ಮತ್ತು ಕೃತ್ಯಗಳನ್ನು ಸಂಪೂರ್ಣವಾಗಿ ತಿದ್ದಿಕೊಂಡು ಕಕ್ಷಿ ಪ್ರತಿಕಕ್ಷಿಗಳಿಗೆ ಕೇವಲ ನ್ಯಾಯವನ್ನೇ ತೀರಿಸಿರಿ.


ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.


ನೋಡಿರಿ, ನಾನು ಅವರನ್ನು ಕಿತ್ತುಹಾಕಿದ ಮೇಲೆ ತಿರುಗಿ ಅವರ ಮೇಲೆ ಕನಿಕರಪಟ್ಟು ಪ್ರತಿಯೊಬ್ಬನನ್ನೂ ಅವನವನ ಸ್ವತ್ತಿಗೂ, ಅವನವನ ದೇಶಕ್ಕೂ ಪುನಃ ಬರಮಾಡುವೆನು.


ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ, “ನಮ್ಮ ಪೂರ್ವಿಕರು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ” ಎಂದು ಅರಿಕೆ ಮಾಡುವರು.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖ ಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ, ಮಹಿಮೆಯೂ ಮತ್ತು ಆನಂದದ ಬಿರುದು ಆಗುವುದು.’”


ಯೆಹೋವನು ಹೀಗೆ ಹೇಳುತ್ತಾನೆ, “ಈಗಲಾದರೂ, ನೀವು ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ. ಉಪವಾಸಮಾಡಿರಿ, ಅಳಿರಿ, ಗೋಳಾಡಿರಿ.”


ನಿಮ್ಮ ದೇವರಾದ ಯೆಹೋವನಲ್ಲಿಯೇ ಭಯಭಕ್ತಿಯುಳ್ಳವರಾಗಿರಬೇಕು, ಆತನನ್ನೇ ಸೇವಿಸಬೇಕು ಮತ್ತು ಆತನ ಹೆಸರು ಹೇಳಿ ಪ್ರಮಾಣಮಾಡಬೇಕು.


ಅದಕ್ಕೆ ದಾವೀದನು, “ನಿನ್ನ ಕಣ್ಣುಮುಂದೆ ನನಗೆ ದಯೆ ದೊರಕುತ್ತದೆಂಬುದನ್ನು ನಿನ್ನ ತಂದೆಯು ಬಲ್ಲನು. ಆದ್ದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವುದೆಂದು ಮರೆಮಾಡುತ್ತಾನೆ. ನಿನ್ನ ಜೀವದಾಣೆ, ಯೆಹೋವನ ಆಣೆ, ನನಗೂ ಮರಣಕ್ಕೂ ಒಂದು ಗೇಣು ಅಂತರವಿದೆ” ಎಂದು ಖಂಡಿತವಾಗಿ ಹೇಳಿದನು.


“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು