Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೆಹೋವನು, “ದೇಶವೆಲ್ಲಾ ಬಟ್ಟಬರಿದಾಗುವುದು, ಆದರೆ ನಾನು ಸಂಪೂರ್ಣವಾಗಿ ಲಯಮಾಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಸರ್ವೇಶ್ವರ ಸ್ವಾಮಿ ಹೀಗೆಂದಿದ್ದಾರೆ : ನಾಡೆಲ್ಲ ಬಟ್ಟಬರಿದಾಗುವುದು; ಆದರೆ ನಾನು ಅದನ್ನು ಸಂಪೂರ್ಣವಾಗಿ ಲಯಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯೆಹೋವನು ಹೀಗನ್ನುತ್ತಾನೆ - ದೇಶವೆಲ್ಲಾ ಬಟ್ಟಬರಿದಾಗುವದು, ಆದರೆ ನಾನು ಸಂಪೂರ್ಣವಾಗಿ ಲಯಮಾಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೆಹೋವನು ಹೀಗೆ ಹೇಳುತ್ತಾನೆ: “ಇಡೀ ದೇಶವು ಹಾಳಾಗುವುದು. ಆದರೆ ನಾನು ಭೂಮಿಯನ್ನು ಸಂಪೂರ್ಣವಾಗಿ ನಾಶಮಾಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಏಕೆಂದರೆ ಯೆಹೋವ ದೇವರು ಹೀಗೆ ಹೇಳಿದ್ದಾರೆ: “ದೇಶವೆಲ್ಲಾ ಹಾಳಾಗುವುದು. ಆದರೂ ನಾನು ಅದನ್ನು ಪೂರ್ಣ ನಾಶ ಮಾಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:27
29 ತಿಳಿವುಗಳ ಹೋಲಿಕೆ  

ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ, ನಾನು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿದ್ದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು; ನಿನ್ನನ್ನೋ ನಿರ್ಮೂಲಮಾಡೆನು. ಮಿತಿಮೀರಿ ಶಿಕ್ಷಿಸೆನು, ಆದರೆ ಶಿಕ್ಷಿಸದೆ ಬಿಡುವುದಿಲ್ಲ. ಇದು ಯೆಹೋವನ ನುಡಿ.”


ಆದರೆ ಆ ದಿನಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣವಾಗಿ ನಿರ್ಮೂಲಮಾಡೆನು, ಇದು ಯೆಹೋವನೆಂಬ ನನ್ನ ನುಡಿ” ಎಂದು ಹೇಳುತ್ತಾನೆ.


“ಚೀಯೋನೆಂಬ ದ್ರಾಕ್ಷಿ ತೋಟದ ಸಾಲುಗಿಡಗಳ ಮೇಲೆ ಬಿದ್ದು ಹಾಳುಮಾಡಿರಿ, ಆದರೆ ನಿರ್ಮೂಲಮಾಡಬೇಡಿರಿ. ಅದರ ರೆಂಬೆಗಳನ್ನು ತೆಗೆದುಹಾಕಿರಿ, ಅವು ಯೆಹೋವನವುಗಳಲ್ಲ.


ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಓಡಿಸಿಬಿಟ್ಟು ಚದರಿಸಿದೆನೋ, ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು. ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವುದಿಲ್ಲ.”


ನಾನು ಈ ಮಾತನ್ನು ನುಡಿಯುತ್ತಿರುವಾಗಲೇ ಬೆನಾಯನ ಮಗನಾದ ಪೆಲತ್ಯನು ಸತ್ತುಹೋದನು. ಆಗ ನಾನು ಅಡ್ಡಬಿದ್ದು ಗಟ್ಟಿಯಾಗಿ ಕೂಗಿಕೊಂಡೆ, “ಅಯ್ಯೋ, ಕರ್ತನಾದ ಯೆಹೋವನೇ, ಇಸ್ರಾಯೇಲಿನಲ್ಲಿ ಉಳಿದವರನ್ನು ಸಂಪೂರ್ಣವಾಗಿ ನಿರ್ಮೂಲಮಾಡುವಿಯೋ?” ಎಂದು ಮೊರೆಯಿಟ್ಟೆನು.


ಆದರೂ ಅವರು ಶತ್ರುಗಳ ದೇಶದಲ್ಲಿರುವಾಗಲೂ ನಾನು ಅವರನ್ನು ಬೇಡವೆನ್ನುವುದಿಲ್ಲ, ತಾತ್ಸಾರಮಾಡುವುದಿಲ್ಲ; ನಾನು ಅವರಿಗೆ ಮಾಡಿದ ಒಡಂಬಡಿಕೆಯನ್ನು ಮೀರುವುದಿಲ್ಲ, ಅವರನ್ನು ಇಲ್ಲದಂತೆ ಮಾಡುವುದಿಲ್ಲ; ನಾನು ಅವರ ದೇವರಾದ ಯೆಹೋವನಲ್ಲವೇ.


ನಾನು ದೇಶವನ್ನು ಹಾಳುಮಾಡುವೆನು, ಅದರ ಶಕ್ತಿಯ ಅಹಂಕಾರವು ಇಳಿದು ಹೋಗುವುದು; ಇಸ್ರಾಯೇಲಿನ ಪರ್ವತಗಳು ಹಾಳಾಗಿರುವುದರಿಂದ ಯಾರೂ ಅಲ್ಲಿ ಹಾದು ಹೋಗುವುದಿಲ್ಲ.


ನಾನು ಅವರ ಮೇಲೆ ಕೈಯೆತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಅರಣ್ಯದಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.’”


ಆದಕಾರಣ ಬೆರಗಿನ ಸಿಳ್ಳಿಗೆ ಅವರ ದೇಶವು ನಿತ್ಯ ಗುರಿಯಾಗುವುದು; ಹಾದುಹೋಗುವವರೆಲ್ಲರೂ ಬೆರಗಾಗಿ ತಲೆದೂಗುವರು.


ಯೆಹೂದದ ಪಟ್ಟಣಗಳಲ್ಲಿಯೂ ಮತ್ತು ಯೆರೂಸಲೇಮಿನ ಬೀದಿಗಳಲ್ಲಿಯೂ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ ನಿಲ್ಲಿಸಿಬಿಡುವೆನು, ದೇಶವು ಹಾಳೇ ಹಾಳಾಗುವುದು” ಇದು ಯೆಹೋವನ ನುಡಿ.


ಜನಾಂಗದ ನಾಶಕ್ಕೆ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದು, ಹೊರಟಿದೆ, ಅದರ ಸ್ಥಳದಿಂದ ತೆರಳಿದೆ. ಅದು ನಿನ್ನ ದೇಶವನ್ನು ಹಾಳುಮಾಡುವುದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ಜನ ಪ್ರದೇಶಗಳಾಗುವುವು.


ಇಗೋ, ಯೆಹೋವನು ಭೂಮಿಯನ್ನು ಬರಿದುಮಾಡಿ, ಎಲ್ಲಾ ಪ್ರದೇಶವನ್ನು ನಿರ್ಜನಮಾಡಿ, ಅದನ್ನು ವಿಕಾರಪಡಿಸಿ, ಅದರ ನಿವಾಸಿಗಳನ್ನು ಚದುರಿಸಿಬಿಡುವವನಾಗಿದ್ದಾನೆ.


ಈ ಪ್ರಕಾರ ಯೆರೆಮೀಯನ ಮುಖಾಂತರ ಹೇಳಿಸಿದ ಯೆಹೋವನ ಮಾತು ನೆರವೇರಿತು; ದೇಶವು ತನ್ನ ಸಬ್ಬತ್ ಕಾಲವನ್ನು ಅನುಭವಿಸುವವರೆಗೂ ಸಮಾಧಾನವಾಗಿತ್ತಷ್ಟೇ. ದೇಶವು ಎಪ್ಪತ್ತು ವರ್ಷಗಳು ಪೂರ್ಣವಾಗುವವರೆಗೂ ಅದು ಶೂನ್ಯವಾಗಿದ್ದ ಸಬ್ಬತ್ತನ್ನು ಅನುಭವಿಸಿತು.


ಆದರೆ ನೀನು ದಯೆಯೂ ಕನಿಕರವೂ ಉಳ್ಳ ದೇವರಾಗಿರುವುರಿಂದ ನಿನ್ನ ಮಹಾಕೃಪಾನುಸಾರವಾಗಿ ಅವರನ್ನು ನಾಶಮಾಡಲಿಲ್ಲ, ಕೈಬಿಡಲೂ ಇಲ್ಲ.


ನಾಶದ ಮೇಲೆ ನಾಶವು, ಒಂದರ ಮೇಲೊಂದು ನಾಶದ ಸುದ್ದಿಬರುತ್ತಿದೆ; ದೇಶವೆಲ್ಲಾ ಹಾಳಾಯಿತು; ತಟ್ಟನೆ ನಮ್ಮ ಗುಡಾರಗಳು, ಕ್ಷಣಮಾತ್ರದಲ್ಲಿ ನಮ್ಮ ಡೇರೆಗಳು ಭಗ್ನವಾದವು.


ನಾನು ಯೆರೂಸಲೇಮನ್ನು ಹಾಳು ದಿಬ್ಬವನ್ನಾಗಿಯೂ, ನರಿಗಳ ಹಕ್ಕೆಯನ್ನಾಗಿಯೂ ಮಾಡುವೆನು ಮತ್ತು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ಯೆಹೋವನು ಹೇಳಿದ್ದಾನಲ್ಲಾ.


ಈ ದೇಶವೆಲ್ಲಾ ಹಾಳಾಗಿ ಬೆರಗಿಗೆ ಈಡಾಗುವುದು; ಮತ್ತು ಈ ಜನಾಂಗಗಳು ಎಪ್ಪತ್ತು ವರ್ಷ ಬಾಬೆಲಿನ ಅರಸನ ಅಡಿಯಾಳಾಗಿ ಬಿದ್ದಿರುವವು.


ಆದಕಾರಣ ನನ್ನ ಉಗ್ರರೋಷಾಗ್ನಿಯು ಸುರಿದು ಯೆಹೂದದ ಊರುಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಧಗಧಗಿಸಿತು; ಅವು ಈಗಲೂ ಹಾಳು ಪಾಳಾಗಿವೆ.


ಆದರೂ ನಾನು ಅವರನ್ನು ನಾಶ ಮಾಡಲಿಲ್ಲ; ನನ್ನ ಕಟಾಕ್ಷವು ಅವರನ್ನು ಉಳಿಸಿತು; ನಾನು ಅವರನ್ನು ಅರಣ್ಯದಲ್ಲಿ ನಿರ್ಮೂಲಮಾಡಲಿಲ್ಲ.’”


ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು. ನಿಮ್ಮ ದೇವಸ್ಥಾನಗಳನ್ನು ನಾಶಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಪರಿಮಳವನ್ನು ನಾನು ಮೂಸಿಯೂ ನೋಡುವುದಿಲ್ಲ.


ಆದರೂ ಎಣ್ಣೆಯ ಮರದ ಕಾಯಿಗಳನ್ನು ಉದುರಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿಯಲ್ಲಿ, ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲುಹಣ್ಣುಗಳು ಅದರಲ್ಲಿ ಉಳಿದಿರುವುದು” ಎಂದು ಇಸ್ರಾಯೇಲರ ದೇವರಾದ ಯೆಹೋವನು ನುಡಿಯುತ್ತಾನೆ.


ಕರ್ತನು ತನ್ನ ಯಜ್ಞವೇದಿಯನ್ನು ತಿರಸ್ಕರಿಸಿ, ತನ್ನ ಪವಿತ್ರಾಲಯಕ್ಕೆ ಅಸಹ್ಯಪಟ್ಟು, ಚೀಯೋನಿನ ಅರಮನೆಗಳ ಗೋಡೆಗಳನ್ನು ಶತ್ರು ವಶಮಾಡಿದ್ದಾನೆ; ಉತ್ಸವದಿನದಲ್ಲಿ ಘೋಷಿಸುವಂತೆ ಶತ್ರುಗಳು ಯೆಹೋವನ ಮಂದಿರದಲ್ಲಿ ಜಯಘೋಷವೆತ್ತಿದ್ದಾರೆ.


ಯೆಹೋವನ ರೌದ್ರದ ದಿನದಲ್ಲಿ ಅವರ ಬೆಳ್ಳಿ, ಬಂಗಾರಗಳೂ ಕೂಡಾ ಅವರನ್ನು ರಕ್ಷಿಸಲಾರವು; ಆತನ ರೋಷಾಗ್ನಿಯು ದೇಶವನ್ನೆಲ್ಲಾ ನುಂಗಿಬಿಡುವುದು; ಆತನು ದೇಶನಿವಾಸಿಗಳೆಲ್ಲರನ್ನೂ ಕೊನೆಗಾಣಿಸುವನು, ಹೌದು, ಘೋರವಾಗಿ ನಿರ್ಮೂಲಮಾಡುವನು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು