ಯೆರೆಮೀಯ 4:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಇದಕ್ಕಾಗಿ ಭೂಲೋಕವು ಪ್ರಲಾಪಿಸುವುದು, ಮೇಲೆ ಆಕಾಶವು ಕಪ್ಪಾಗುವುದು; ನಾನು ನುಡಿದಿದ್ದೇನೆ, ಪಶ್ಚಾತ್ತಾಪಪಡೆನು; ಇದರಿಂದ, ಹಿಂದೆಗೆಯನು” ಎಂದು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಲೋಕ ದುಃಖಿಸುವುದು ಆಕಾಶ ಕಪ್ಪಗಾಗುವುದು ಇದು ಸರ್ವೇಶ್ವರ ಆಡಿದ ಮಾತು. ಇದನ್ನು ಬದಲಾಯಿಸುವಂತಿಲ್ಲ. ಇದು ಅವರ ತೀರ್ಮಾನ; ಇದನ್ನು ರದ್ದುಗೊಳಿಸುವಂತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಇದಕ್ಕಾಗಿ ಭೂಲೋಕವು ಪ್ರಲಾಪಿಸುವದು, ಮೇಲೆ ಆಕಾಶವು ಕಪ್ಪಾಗುವದು; ನಾನು ನುಡಿದಿದ್ದೇನೆ, ಪಶ್ಚಾತ್ತಾಪಪಡೆನು; ಉದ್ದೇಶಿಸಿದ್ದೇನೆ, ಹಿಂದೆಗೆಯೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಈ ಪ್ರದೇಶದ ಜನರು ಸತ್ತವರಿಗಾಗಿ ಅಳುವರು. ಆಕಾಶವು ಕಪ್ಪಾಗುವುದು. ನಾನು ಹೇಳಿದ್ದೇನೆ, ಅದು ಬದಲಾಗುವುದಿಲ್ಲ. ನಾನು ಒಂದು ನಿರ್ಣಯ ತೆಗೆದುಕೊಂಡಿದ್ದೇನೆ, ನಾನು ನನ್ನ ಮನಸ್ಸನ್ನು ಬದಲಾಯಿಸುವದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಇದರ ನಿಮಿತ್ತ ಭೂಮಿಯು ದುಃಖಿಸುವುದು. ಮೇಲಿರುವ ಆಕಾಶವು ಕಪ್ಪಾಗುವುದು. ಏಕೆಂದರೆ ನಾನು ಅದನ್ನು ಹೇಳಿದ್ದರಿಂದ ನಿಶ್ಚಯಿಸಿದ್ದೇನೆ. ಮಾನಸಾಂತರ ಪಡುವುದಿಲ್ಲ. ಇಲ್ಲವೆ ಅದರಿಂದ ಹಿಂದಿರುಗುವುದಿಲ್ಲ.” ಅಧ್ಯಾಯವನ್ನು ನೋಡಿ |