Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನು ಯೆಹೂದದವರಿಗೂ ಮತ್ತು ಯೆರೂಸಲೇಮಿನವರಿಗೂ, “ಪಾಳು ಬಿದ್ದಿರುವ ನಿಮ್ಮ ಭೂಮಿಯನ್ನು ಉತ್ತು ಹದಮಾಡಿ, ಮುಳ್ಳುಗಳಲ್ಲಿ ಬಿತ್ತಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಜುದೇಯದವರಿಗೂ ಜೆರುಸಲೇಮಿನವರಿಗೂ ಸರ್ವೇಶ್ವರ ಹೇಳುವುದೇನೆಂದರೆ - “ಪಾಳುಬಿದ್ದ ನಿಮ್ಮ ಹೊಲಗದ್ದೆಗಳನ್ನು ಉತ್ತು ಹದಮಾಡಿ, ಮುಳ್ಳುಗಳ ನಡುವೆ ಬಿತ್ತಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನು ಯೆಹೂದದವರಿಗೂ ಯೆರೂಸಲೇವಿುನವರಿಗೂ ಹೀಗೆ ಹೇಳುತ್ತಾನೆ - ಗೆಯ್ಯದ ನಿಮ್ಮ ಭೂವಿುಯನ್ನು ಗೆಯ್ಯಿರಿ, ಮುಳ್ಳುಗಳಲ್ಲಿ ಬಿತ್ತಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೂದ ಜನಾಂಗದ ಜನರಿಗೂ ಜೆರುಸಲೇಮ್ ನಗರದ ಜನರಿಗೂ ಯೆಹೋವನು ಹೀಗೆ ಹೇಳುತ್ತಾನೆ: “ನಿಮ್ಮ ಹೊಲಗಳಲ್ಲಿ ನೇಗಿಲು ಹೊಡೆದಿಲ್ಲ, ಆ ಹೊಲಗಳನ್ನು ನೇಗಿಲು ಹೊಡೆದು ಸ್ವಚ್ಛಮಾಡಿರಿ. ಮುಳ್ಳುಗಳಲ್ಲಿ ಬೀಜಗಳನ್ನು ಬಿತ್ತಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ಯೆಹೋವ ದೇವರು ಯೆಹೂದದ ಮತ್ತು ಯೆರೂಸಲೇಮಿನ ಜನರಿಗೆ ಹೀಗೆ ಹೇಳುತ್ತಾರೆ: “ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನಿಮ್ಮ ಬಂಜರು ಭೂಮಿಯನ್ನು ಗೆಯ್ಯಿರಿ. ಮುಳ್ಳುಗಳಲ್ಲಿ ಬೀಜ ಬಿತ್ತಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:3
10 ತಿಳಿವುಗಳ ಹೋಲಿಕೆ  

ನೀತಿಯ ಬೀಜವನ್ನು ಬಿತ್ತಿರಿ, ಪ್ರೀತಿಯ ಫಲವನ್ನು ಕೊಯ್ಯಿರಿ, ಹಾಳಾದ ನಿಮ್ಮ ಭೂಮಿಯನ್ನು ಫಲವತ್ತಾಗಿಸಿ; ಯೆಹೋವನು ಬಂದು ನಮ್ಮ ಮೇಲೆ ನೀತಿಯನ್ನು ವರ್ಷಿಸಲೆಂದು ಆತನಿಗೆ ಶರಣುಹೋಗುವ ಸಮಯವು ಒದಗಿದೆ.


ಇನ್ನು ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವನದಲ್ಲಿ ಆಗುವ ಚಿಂತೆ, ಐಶ್ವರ್ಯ ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಕೊಡಲಾರದವರು, ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು.


ಮತ್ತೆ ಕೆಲವು ಬೀಜಗಳು ಮುಳ್ಳುಪೊದೆಗಳೊಳಗೆ ಬಿದ್ದವು. ಮುಳ್ಳುಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅದುಮಿಬಿಟ್ಟವು.


ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು, ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.


ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು; ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟದ್ದರಿಂದ ಅವು ಫಲಕೊಡಲಿಲ್ಲ.


ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ.


ಆ ಭೂಮಿಯಲ್ಲಿ ಮುಳ್ಳುಗಿಡಗಳೂ ಕಳೆಗಳೂ ಬಹಳವಾಗಿ ಬೆಳೆಯುವವು, ಹೊಲದ ಬೆಳೆಗಳು ನಿನಗೆ ಆಹಾರವಾಗಿರುವವು.


ಆದರೆ ಏಳನೆಯ ವರ್ಷದಲ್ಲಿ ಆ ಭೂಮಿಯನ್ನು ಉಳದೆ ಬೀಳುಬಿಡಬೇಕು. ನಿಮ್ಮ ದೇಶದ ಬಡವರು ಅದರಲ್ಲಿ ಬೆಳೆಯುವುದನ್ನು ತಿನ್ನಲಿ. ಮಿಕ್ಕದ್ದನ್ನು ಕಾಡುಮೃಗಗಳು ಮೇಯಲಿ. ನಿಮ್ಮ ದ್ರಾಕ್ಷಿತೋಟಗಳ ಮತ್ತು ಎಣ್ಣೇ ಮರಗಳ ತೋಪುಗಳ ವಿಷಯದಲ್ಲಿಯೂ ಇದೇ ರೀತಿಯಲ್ಲಿ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು