Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಚೀಯೋನ್ ನಗರವು ಬೇನೆತಿನ್ನುವವಳಂತೆ, ಚೊಚ್ಚಲಹೆರಿಗೆಯ ವೇದನೆಯನ್ನು ಅನುಭವಿಸುವವಳ ಹಾಗೆ ಕೂಗಿಕೊಳ್ಳುವುದನ್ನು ನಾನು ಕೇಳಿದ್ದೇನೆ; ಏದುಸಿರುಬಿಡುತ್ತಾ ಕೈಚಾಚಿ, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ಕೊಲೆಗಾರರಿಂದ ನನ್ನ ಪ್ರಾಣವು ಬಳಲುತ್ತದೆ” ಎಂದು ಅರಚಿಕೊಳ್ಳುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಸಿಯೋನ್ ನಗರಿ ಪ್ರಸವವೇದನೆ ಪಡುವವಳಂತೆ ಚೊಚ್ಚಲ ಹೆರಿಗೆಯ ವೇದನೆಯನ್ನು ಅನುಭವಿಸುವವಳಂತೆ ಕಿರಿಚಿಕೊಳ್ಳುವ ಕೂಗನ್ನು ನಾನು ಕೇಳಿದ್ದೇನೆ. ಉಬ್ಬಸಪಡುತ್ತಾ ಎರಡು ಕೈಗಳನ್ನೂ ಚಾಚಿ ‘ಅಯ್ಯೋ ನನಗೆ ಕೇಡು, ಕೊಲೆಗಡುಕನ ಮುಂದೆ ನನ್ನ ಪ್ರಾಣ ಉಡುಗುತ್ತಿದೆ’ ಎಂದು ಅರುಚಿಕೊಳ್ಳುತ್ತಿಹಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಚೀಯೋನ್ ನಗರಿಯು ಬೇನೆ ತಿನ್ನುವವಳಂತೆ, ಚೊಚ್ಚಲಹೆರಿಗೆಯ ವೇದನೆಯನ್ನು ಅನುಭವಿಸುವವಳ ಹಾಗೆ ಕೂಗಿಕೊಳ್ಳುವದನ್ನು ನಾನು ಕೇಳಿದ್ದೇನೆ; ಏದುತ್ತಾ ಕೈಚಾಚಿ - ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ಕೊಲೆಗಾರರಿಂದ ನನ್ನ ಆತ್ಮವು ಉಡುಗುತ್ತದೆ ಎಂದು ಬಡುಕೊಳ್ಳುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಮೊದಲನೆ ಹೆರಿಗೆಯ ಸಮಯದಲ್ಲಿ ವೇದನೆಪಡುವ ಹೆಂಗಸಿನ ಸ್ವರದಂತಿರುವ ಒಂದು ಧ್ವನಿಯನ್ನು ನಾನು ಕೇಳಿದೆ, ಇದು ಚೀಯೋನ್ ನಗರಿಯ ಮಗಳ ಕೂಗಾಟ. ಅವಳು ತನ್ನ ಎರಡೂ ಕೈಗಳನ್ನು ಮೇಲಕ್ಕೆ ಎತ್ತಿ ಪ್ರಾರ್ಥಿಸುತ್ತಾ, “ಅಯ್ಯೋ, ನಾನು ಮೂರ್ಛೆ, ಹೋಗುವುದರಲ್ಲಿದ್ದೇನೆ, ನನ್ನ ಸುತ್ತಲೆಲ್ಲ ಕೊಲೆಗಡುಕರಿದ್ದಾರೆ” ಎಂದು ಹೇಳುತ್ತಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಏಕೆಂದರೆ ಪ್ರಸವವೇದನೆ ಪಡುವವಳಂತೆ, ಚೊಚ್ಚಲನ್ನು ಹೆರುವವಳ ಸಂಕಟಕ್ಕೆ ಸಮಾನವಾಗಿರುವ ಚೀಯೋನಿನ ಮಗಳ ಕಿರಿಚುವ ಕೂಗನ್ನು ಕೇಳಿದ್ದೇನೆ. ಆಕೆಯು ಗೋಳಾಡುತ್ತಾಳೆ, ಕೈಗಳನ್ನು ಚಾಚಿ, “ಅಯ್ಯೋ, ನನಗೀಗ ಕಷ್ಟ! ಕೊಲೆಗಾರರ ನಿಮಿತ್ತ ನನ್ನ ಪ್ರಾಣವು ಬೇಸರಗೊಳ್ಳುತ್ತದೆ,” ಎಂದು ಅರಚಿಕೊಳ್ಳುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:31
35 ತಿಳಿವುಗಳ ಹೋಲಿಕೆ  

ಚೀಯೋನ್ ನಗರಿಯು ಕೈಚಾಚಿ ಅಂಗಲಾಚಿದರೂ ಯಾರೂ ಸಂತೈಸರು; ಯಾಕೋಬಿನ ನೆರೆಹೊರೆಯವರು ಅದಕ್ಕೆ ವಿರೋಧಿಗಳಾಗಿರಲಿ ಎಂದು ಯೆಹೋವನು ತೀರ್ಮಾನಿಸಿದ್ದಾನೆ; ಯೆರೂಸಲೇಮು ಅವರ ನಡುವೆ ಹೊಲೆಯಾಗಿ ಬಿದ್ದಿದೆ.


ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.


ನಿನ್ನೊಡನೆ ಗೆಳೆಯರಂತೆ ಬಾಳಲು ನೀನು ಅಭ್ಯಾಸಮಾಡಿಸಿದವರನ್ನು ಯೆಹೋವನು ನಿನಗೆ ತಲೆಯಾಗಿ ನೇಮಿಸುವಾಗ ಏನು ಹೇಳುವಿ? ವೇದನೆಯು ನಿನ್ನನ್ನು ಹೆರುವವಳನ್ನೋ ಎಂಬಂತೆ ಹಿಡಿಯುವುದಲ್ಲವೇ.


“ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು” ಜನರು ಹೇಳುತ್ತಿರುವಾಗಲೇ ನಾಶನವು ಅವರ ಮೇಲೆ ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಕೊಳ್ಳುವುದಕ್ಕೆ ನನಗೇನೂ ಆಸ್ಪದವಿಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲಿದೆ, ನಾನು ಸುವಾರ್ತೆಯನ್ನು ಸಾರದಿದ್ದರೆ ನನ್ನ ಗತಿಯನ್ನು ಏನೆಂದು ಹೇಳಲಿ!


“ಚೀಯೋನ್ ಪುತ್ರಿಯೇ, ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಿದ್ದಾನೆ; ಆತನು ಸಾತ್ವಿಕ ಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆಂದು” ಹೇಳಿರಿ ಎಂಬುದು.


ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ. ಮಾಗಿದ ಹಣ್ಣನ್ನು ಕೊಯ್ದು, ದ್ರಾಕ್ಷಿಯ ಹಕ್ಕಲನ್ನು ಆಯ್ದ ತೋಟದ ಸ್ಥಿತಿಗೆ ಬಂದಿದ್ದೇನೆ. ತಿನ್ನುವುದಕ್ಕೆ ಗೊಂಚಲೇ ಇಲ್ಲ. ನನಗೆ ಪ್ರಿಯವಾದ ಮೊದಲು ಮಾಗಿದ ಅಂಜೂರದ ಹಣ್ಣು ಸಿಕ್ಕದು.


ಅದಕ್ಕೆ ಪ್ರಸವವೇದನೆಯಾಗುತ್ತಾ ಇದೆ; ಅದು ಮಂಕು ಮಗುವಿನಂತಿದೆ; ಈ ಸಮಯವು ಗರ್ಭದ್ವಾರದಲ್ಲಿ ನಿಲ್ಲತಕ್ಕ ಸಮಯವಲ್ಲ.


ಯುವಕರು ಮತ್ತು ವೃದ್ಧರು ಬೀದಿಗಳಲ್ಲಿ ನೆಲದ ಮೇಲೆ ಬಿದ್ದಿರುತ್ತಾರೆ, ನನ್ನ ತರುಣಿಯರು ಹಾಗು ತರುಣರು ಖಡ್ಗದಿಂದ ಹತರಾಗಿದ್ದಾರೆ; ನೀನು ಕೋಪತೀರಿಸಿಕೊಳ್ಳುವ ದಿನದಲ್ಲಿ ಅವರನ್ನು ಕೊಂದುಹಾಕಿದಿ, ಕನಿಕರಿಸದೆ ಸಂಹರಿಸಿದಿ.


ಯೆಹೋವನೇ, ಕಟಾಕ್ಷಿಸು; ನಾನು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ, ನನ್ನ ಕರುಳು ಕುದಿಯುತ್ತಿದೆ. ನಾನು ಕೇವಲ ದ್ರೋಹಮಾಡಿದ್ದರಿಂದ ನನ್ನ ಹೃದಯವು ನನ್ನೊಳಗೆ ಕುಂದಿಹೋಗಿದೆ; ಮನೆಯ ಹೊರಗೆ ಸಂಹಾರ, ಒಳಗೆ ಪ್ರಾಣಸಂಕಟ.


ಬಾಬೆಲಿನ ಅರಸನು ಅದರ ಸುದ್ದಿಯನ್ನು ಕೇಳಿದನು, ಅವನ ಕೈಗಳು ಜೋಲುಬಿದ್ದವು, ಪ್ರಸವವೇದನೆಯಂತಿರುವ ಯಾತನೆಯು ಅವನನ್ನು ಹಿಡಿದಿದೆ.


ದಮಸ್ಕವು ಕುಂದಿದೆ, ಓಡಿಹೋಗಲು ಹಿಂದಿರುಗಿದೆ; ಅದಕ್ಕೆ ನಡುಕ ಹಿಡಿದಿದೆ, ಪ್ರಸವವೇದನೆಯಂತಿರುವ ಯಾತನೆ ಮತ್ತು ವ್ಯಥೆಗಳಿಗೆ ಒಳಗಾಗಿದೆ.


ಇಗೋ, ಬೊಚ್ರದ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ತನ್ನ ರೆಕ್ಕೆಗಳನ್ನು ಹರಡಿ ಹಾರಿ ಏರುವನು; ಆ ದಿನದಲ್ಲಿ ಎದೋಮಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು.


ಪಟ್ಟಣಗಳನ್ನು ಹಿಡಿದಿದ್ದಾನೆ, ಕೋಟೆಗಳನ್ನು ಆಕ್ರಮಿಸಿದ್ದಾನೆ; ಆ ದಿನಗಳಲ್ಲಿ ಮೋವಾಬಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು.


“ಬಾರೂಕನೇ, ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಹೀಗೆ ಹೇಳುತ್ತಾನೆ, ‘ನನ್ನ ಗತಿಯನ್ನು ಏನು ಹೇಳಲಿ?


ವಿಚಾರಿಸಿ ನೋಡಿರಿ, ಗಂಡಸು ಪ್ರಸವವೇದನೆ ಪಡುವುದುಂಟೆ? ಪ್ರತಿಯೊಬ್ಬನು ಹೆರುವವಳಂತೆ ಸೊಂಟವನ್ನು ಹಿಸಕಿಕೊಳ್ಳುವುದು, ಎಲ್ಲಾ ಮುಖಗಳು ಬಿಳಿಚಿಕೊಂಡಿರುವುದು, ಇವು ಏಕೆ ನನ್ನ ಕಣ್ಣಿಗೆ ಬೀಳುತ್ತವೆ?


ಲೆಬನೋನಿನಲ್ಲಿ ವಾಸಿಸುವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡಿರುವವಳೇ, ಪ್ರಸವವೇದನೆಯಂತಿರುವ ಸಂಕಟವು ನಿನಗೆ ಸಂಭವಿಸುವಾಗ ನಿನ್ನ ಸ್ಥಿತಿಯು ಎಷ್ಟೋ ದುಃಖಕರವಾಗಿರುವುದು!


ಆದಕಾರಣ ಅವರ ಮಕ್ಕಳನ್ನು ಕ್ಷಾಮಕ್ಕೆ ಗುರಿಮಾಡಿ, ಕತ್ತಿಯ ಬಾಯಿಗೆ ಒಪ್ಪಿಸು; ಅವರ ಹೆಂಡತಿಯರು ಮಕ್ಕಳ್ಳಿಲ್ಲದವರಾಗಿಯೂ, ವಿಧವೆಯರಾಗಿಯೂ ಇರಲಿ; ಮೃತ್ಯುವು ಅವರ ಗಂಡಂದಿರನ್ನು ಸಂಹರಿಸಲಿ. ಯುದ್ಧದಲ್ಲಿ ಖಡ್ಗವು ಅವರ ಯುವಕರನ್ನು ವಧಿಸಲಿ.


ಏಕೆ ನನ್ನ ವ್ಯಥೆಯು ನಿರಂತರವಾಗಿದೆ? ನನ್ನ ಗಾಯವು ಗಡುಸಾಗಿ ಗುಣಹೊಂದದೆ ಇರುವುದು ಏಕೆ? ನೀನು ನನಗೆ ನೀರು ಬತ್ತುವ ಕಳ್ಳತೊರೆಯಂತಿರಬೇಕೋ?” ಎಂದು ಅರಿಕೆಮಾಡಿಕೊಂಡೆನು.


ನಾನು ಊರ ಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು, ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ ಎಂಬ ಮಾತುಗಳನ್ನು ಹೇಳು” ಎಂದನು.


ಅಯ್ಯೋ, ನನ್ನ ಗಾಯ! ನನಗೆ ಬಿದ್ದ ಪೆಟ್ಟು ಭೀಕರ! ಆದರೂ ನಾನು, “ಇದು ನನಗೆ ವ್ಯಾಧಿಯೇ ಸರಿ, ಸಹಿಸಬೇಕು” ಅಂದುಕೊಂಡಿದ್ದೇನೆ.


ಚೀಯೋನ್ ನಗರಿಯು ಸೊಂಪಾದ ಹಸುರುಗಾವಲಿಗೆ ಸಮಾನವಾಗಿ ನನಗೆ ಕಾಣುತ್ತದೆ.


ನಾನು ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನು ಬಿಗಿ ಹಿಡಿದಿದ್ದೆನು. ಈಗ ಹೆರುವವಳಂತೆ ಕೂಗುವೆನು. ನಿಟ್ಟುಸಿರಿನೊಡನೆ ಏದುವೆನು.


ಆದುದ್ದರಿಂದ ನನ್ನ ಸೊಂಟದಲ್ಲಿ ನೋವು ತುಂಬಿದೆ, ಪ್ರಸವವೇದನೆಯಂತಿರುವ ವೇದನೆಯು ನನ್ನನ್ನು ಹಿಡಿದಿದೆ, ಕಿವಿ ಕಿವುಡಾಗುವಷ್ಟು ಸಂಕಟಪಡುತ್ತೇನೆ, ಕಣ್ಣು ಕುರುಡಾಗುವಷ್ಟು ತತ್ತರಗೊಂಡಿದ್ದೇನೆ.


ಅವರು ಭಯಪಡುವರು. ಪ್ರಸವ ವೇದನೆಯಲ್ಲಿರುವ ಸ್ತ್ರೀಯಂತೆ ಯಾತನೆ, ಸಂಕಟಗಳನ್ನು ಅನುಭವಿಸುವರು. ಒಬ್ಬರನ್ನೊಬ್ಬರು ನೋಡಿ ವಿಸ್ಮಯಪಡುವರು. ಅವರ ಮುಖಗಳು ತಲ್ಲಣಗೊಂಡು ಬೆಂಕಿಯಿಂದ ಉರಿಯುವವು.


ಆಗ ನಾನು, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು,


ಅಯ್ಯೋ, ನಾನು ಮೇಷೆಕಿನವರಲ್ಲಿ ತಂಗಬೇಕಲ್ಲಾ! ಕೇದಾರಿನವರ ಪಾಳೆಯಗಳಲ್ಲಿ ವಾಸಿಸಬೇಕಾಯಿತಲ್ಲಾ!


ನನ್ನ ಜೀವವೇ ನನಗೆ ಬೇಸರವಾಗಿದೆ. ಎದೆಬಿಚ್ಚಿ ಮೊರೆಯಿಡುವೆನು; ಮನೋವ್ಯಥೆಯಿಂದ ನುಡಿಯುವೆನು.


ರೆಬೆಕ್ಕಳು ಇಸಾಕನಿಗೆ, “ಹಿತ್ತಿಯರಾದ ಈ ಸ್ತ್ರೀಯರ ದೆಸೆಯಿಂದ ನನಗೆ ಬೇಸರವಾಗಿದೆ, ಯಾಕೋಬನೂ ಈ ದೇಶದಲ್ಲಿರುವ ಹಿತ್ತಿಯ ಸ್ತ್ರೀಯನ್ನು ಆರಿಸಿಕೊಂಡು ಮದುವೆ ಮಾಡಿಕೊಂಡರೆ, ನಾನು ಇನ್ನೂ ಬದುಕುವುದರಿಂದ ಪ್ರಯೋಜನವೇನು?” ಎಂದು ಹೇಳಿದಳು.


ಹೆರಿಗೆ ಹತ್ತಿರವಾದ ಗರ್ಭಿಣಿಯು ಯಾತನೆಪಡುತ್ತಾ, ಬೇನೆಯಿಂದ ಕೂಗಿ ಅಳುವಂತೆ ಯೆಹೋವನೇ, ನಾವು ನಿನ್ನ ಮುಂದೆ ಸಹಾಯಕ್ಕಾಗಿ ಕೂಗಿ ದುಃಖಿಸಿದ್ದೇವೆ.


ನೀನೀಗ ರೋದಿಸುತ್ತಿರುವುದೇಕೆ? ಪ್ರಸವವೇದನೆಯಷ್ಟು ಕಠಿಣವಾದ ಯಾತನೆಯು ನಿನ್ನನ್ನು ಬಾಧಿಸುತ್ತಿರುವುದಕ್ಕೆ ಕಾರಣವೇನು? ನಿನ್ನಲ್ಲಿ ರಾಜನಿಲ್ಲವೋ? ನಿನ್ನ ಆಲೋಚನಾಕರ್ತನು ನಾಶವಾದನೋ?


ಚೀಯೋನ್ ಯುವತಿಯೇ, ಹೆರುವವಳಂತೆ ವೇದನೆಗೆ ಒಳಗಾಗು, ಯಾತನೆಪಡು. ನೀನೀಗ ಪಟ್ಟಣದಿಂದ ಹೊರಟು ಕಾಡಿನಲ್ಲಿ ವಾಸಿಸುತ್ತಾ ಬಾಬೆಲಿಗೆ ಸೇರುವಿ. ಅಲ್ಲೇ ನಿನಗೆ ಉದ್ಧಾರವಾಗುವುದು. ಅಲ್ಲೇ ಯೆಹೋವನು ಶತ್ರುಗಳ ಕೈಯಿಂದ ನಿನ್ನನ್ನು ಬಿಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು