ಯೆರೆಮೀಯ 4:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೂದದಲ್ಲಿ ಸಾರಿರಿ, ಯೆರೂಸಲೇಮಿನೊಳಗೆ ಪ್ರಕಟಿಸುತ್ತಾ, “ದೇಶದಲ್ಲೆಲ್ಲಾ ಕೊಂಬೂದಿರಿ, ಕೂಡಿಬನ್ನಿರಿ ಕೋಟೆಕೊತ್ತಲಗಳ ಊರುಗಳನ್ನು ಸೇರೋಣ ಎಂದು ಕೂಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಜುದೇಯದಲ್ಲಿ ಸಾರಿರಿ; ಜೆರುಸಲೇಮಿನಲ್ಲಿ ಪ್ರಕಟಿಸಿರಿ. ನಾಡಿನಲ್ಲೆಲ್ಲ ಕೊಂಬೂದುತ್ತಾ ಆಜ್ಞಾಪಿಸಿರಿ. ‘ಕೂಡಿಬನ್ನಿ, ಕೋಟೆಕೊತ್ತಲಗಳುಳ್ಳ ಊರುಗಳನ್ನು ಸೇರಿಕೊಳ್ಳೋಣ’ ಎಂದು ಕೂಗಿ ಹೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೆಹೂದದಲ್ಲಿ ಸಾರಿರಿ, ಯೆರೂಸಲೇವಿುನೊಳಗೆ ಪ್ರಕಟಿಸಿರಿ; ದೇಶದಲ್ಲೆಲ್ಲಾ ಕೊಂಬೂದುವಂತೆ ಅಪ್ಪಣೆಕೊಡಿರಿ; ಕೂಡಿಕೊಂಡು ಕೋಟೆಕೊತ್ತಲಗಳ ಊರುಗಳನ್ನು ಸೇರೋಣ ಎಂದು ಕೂಗಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ಈ ಸಂದೇಶವನ್ನು ಯೆಹೂದ ಜನರಲ್ಲಿ ಸಾರಿರಿ: ಜೆರುಸಲೇಮ್ ನಗರದ ಪ್ರತಿಯೊಬ್ಬನಿಗೂ ದೇಶದಲ್ಲೆಲ್ಲಾ ತುತ್ತೂರಿಗಳನ್ನು ಊದಿರಿ ಎಂದು ಹೇಳಿರಿ. ದೊಡ್ಡ ಧ್ವನಿಯಲ್ಲಿ ‘ಒಂದು ಕಡೆ ಸೇರೋಣ ಬನ್ನಿ, ರಕ್ಷಣೆಗಾಗಿ ಭದ್ರವಾದ ನಗರಗಳಿಗೆ ಓಡಿಹೋಗೋಣ ಬನ್ನಿ’ ಎಂದು ಕೂಗಿ ಹೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ಯೆಹೂದದಲ್ಲಿ ಪ್ರಚಾರಪಡಿಸಿರಿ, ಯೆರೂಸಲೇಮಿನಲ್ಲಿ ಪ್ರಕಟಿಸಿರಿ, ‘ಇಡೀ ದೇಶದಲ್ಲಿ ತುತೂರಿ ಊದಿರಿ!’ ಎಂದು ಹೇಳಿರಿ. ಗಟ್ಟಿಯಾಗಿ ಹೀಗೆ ಕೂಗಿರಿ, ‘ಕೂಡಿಕೊಂಡು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ!’ ಎಂದು ಹೇಳಿರಿ. ಅಧ್ಯಾಯವನ್ನು ನೋಡಿ |