Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 40:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ವರ್ತಮಾನವನ್ನು ಕೇಳಿ ತಾವು ಅಟ್ಟಲ್ಪಟ್ಟು ಸೇರಿದ್ದ ಎಲ್ಲಾ ಸ್ಥಳಗಳಿಂದಲೂ ಯೆಹೂದಕ್ಕೆ ಹಿಂದಿರುಗಿ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಬಂದು ದ್ರಾಕ್ಷಾರಸವನ್ನೂ, ಹಣ್ಣುಗಳನ್ನೂ ಸಮೃದ್ಧಿಯಾಗಿ ಸಂಗ್ರಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ತಾವು ಹೊರದೂಡಲ್ಪಟ್ಟು ವಾಸಮಾಡುತ್ತಿದ್ದ ಎಲ್ಲಾ ಊರುಗಳಿಂದ ಜುದೇಯಕ್ಕೆ ಹಿಂದಿರುಗಿದರು. ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಬಂದು ಸೇರಿಕೊಂಡರು. ದ್ರಾಕ್ಷಾರಸವನ್ನೂ ಹಣ್ಣುಹಂಪಲುಗಳನ್ನೂ ಹೇರಳವಾಗಿ ಕೂಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ತಾವು ಅಟ್ಟಲ್ಪಟ್ಟು ಸೇರಿದ್ದ ಎಲ್ಲಾ ಸ್ಥಳಗಳಿಂದಲೂ ಯೆಹೂದಕ್ಕೆ ಹಿಂದಿರುಗಿ ವಿುಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಬಂದು ದ್ರಾಕ್ಷಾರಸವನ್ನೂ ಹಣ್ಣುಗಳನ್ನೂ ಸಮೃದ್ಧಿಯಾಗಿ ಸಂಗ್ರಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೂದದ ಆ ಜನರು ಈ ಸಮಾಚಾರವನ್ನು ಕೇಳಿದ ಕೂಡಲೆ ತಾವು ಚದುರಿಹೋಗಿದ್ದ ಎಲ್ಲಾ ದೇಶಗಳಿಂದ ಯೆಹೂದ ಪ್ರದೇಶಕ್ಕೆ ಹಿಂತಿರುಗಿ ಮಿಚ್ಫದಲ್ಲಿ ಗೆದಲ್ಯನ ಬಳಿಗೆ ಬಂದರು. ಅವರು ದ್ರಾಕ್ಷಾರಸವನ್ನು ಮತ್ತು ಹಣ್ಣುಗಳನ್ನು ಸಮೃದ್ಧಿಯಾಗಿ ಸಂಗ್ರಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೂದ್ಯರೆಲ್ಲರೂ, ಅವರು ಓಡಿಸಲಾಗಿದ್ದ ಎಲ್ಲಾ ಸ್ಥಳಗಳಿಂದ ತಿರುಗಿಕೊಂಡು, ಯೆಹೂದ ದೇಶಕ್ಕೆ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು, ಬಹು ಅಧಿಕವಾಗಿ ದ್ರಾಕ್ಷಾರಸವನ್ನೂ, ಬೇಸಿಗೆ ಕಾಲದ ಹಣ್ಣುಗಳನ್ನೂ ಕೂಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 40:12
8 ತಿಳಿವುಗಳ ಹೋಲಿಕೆ  

ಆಗ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿದ ಜನರು, ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಯೆಹೂದದಲ್ಲಿ ವಾಸಿಸುವುದಕ್ಕೆ ಹಿಂದಿರುಗಿ ಬಂದಿದ್ದ ಯೆಹೂದದ ಉಳಿದ ಜನರು, ಪ್ರವಾದಿಯಾದ ಯೆರೆಮೀಯನು,


ಹುಲ್ಲನ್ನು ಕೊಯ್ದು ಹೊತ್ತುಕೊಂಡು ಬಂದ ಮೇಲೆ ಹಸಿಹುಲ್ಲು ತಲೆದೋರುವುದು, ಬೆಟ್ಟಗಳ ಸೊಪ್ಪನ್ನೂ ಕೂಡಿಸಿಡುವರು.


ಹೀಗಿರಲು ಸಿಬ್ಮದ ದ್ರಾಕ್ಷಾಲತೆಯ ನಿಮಿತ್ತ ಯಜ್ಜೇರಿನವರೊಂದಿಗೆ ನಾನು ಅಳುವೆನು. ಹೆಷ್ಬೋನೇ, ಎಲ್ಲಾಲೇ ನನ್ನ ಕಣ್ಣೀರಿನಿಂದ ನಿಮ್ಮನ್ನು ತೋಯಿಸುವೆನು. ನಿಮ್ಮ ಹಣ್ಣಿನ ಮೇಲೆಯೂ, ನಿಮ್ಮ ಬೆಳೆಯ ಮೇಲೆಯೂ ಬಿದ್ದು ಆರ್ಭಟಿಸುವುದನ್ನು ನಿಲ್ಲಿಸಿಬಿಟ್ಟಿದ್ದೇನೆ.


ನಾನಂತು ಮಿಚ್ಪದಲ್ಲಿ ವಾಸವಾಗಿದ್ದು ನಮ್ಮ ಬಳಿಗೆ ಬರುವ ಕಸ್ದೀಯರ ಮುಂದೆ ನಿಮ್ಮ ಪಕ್ಷವನ್ನು ವಹಿಸುವೆನು; ನೀವು ದ್ರಾಕ್ಷಾರಸ, ಹಣ್ಣು, ಎಣ್ಣೆ, ಇವುಗಳನ್ನು ಸಂಗ್ರಹಿಸಿ ನಿಮ್ಮ ಪಾತ್ರೆಗಳಲ್ಲಿ ತುಂಬಿಸಿಟ್ಟು ನೀವು ಹಿಡಿದ ಪಟ್ಟಣಗಳಲ್ಲಿ ವಾಸಿಸಿರಿ” ಎಂದು ಖಂಡಿತವಾಗಿ ಹೇಳಿದನು.


ಆಮೇಲೆ ಕಾರೇಹನ ಮಗನಾದ ಯೋಹಾನಾನನೂ, ಕಾಡುಮೇಡುಗಳಲ್ಲಿದ್ದ ಸಕಲ ಸೇನಾಪತಿಗಳೂ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು.


ಆ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನು ರಾಜಕುಮಾರ್ತೆಯರನ್ನು, ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ, ಮಿಚ್ಪದ ಉಳಿದ ಜನರನ್ನು ಸೆರೆಹಿಡಿದು ಅಮ್ಮೋನ್ಯರ ಸೀಮೆಗೆ ಹೊರಟನು.


ಆದರೆ ನಾವು ಗಗನದ ಒಡತಿಗೆ ಧೂಪಹಾಕುವುದನ್ನೂ ಪಾನವನ್ನು ನೈವೇದ್ಯವಾಗಿ ಸುರಿಯುವುದನ್ನೂ ನಿಲ್ಲಿಸಿಬಿಟ್ಟಂದಿನಿಂದ ಎಲ್ಲಾ ಕೊರತೆಗೂ ಗುರಿಯಾಗಿ ಖಡ್ಗ, ಕ್ಷಾಮಗಳಿಂದ ನಾಶವಾಗುತ್ತಿದ್ದೇವೆ.


ನನ್ನ ಕುರಿಗಳು ಪರ್ವತಗಳ ಮೇಲೆಯೂ, ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದುರಿಹೋಗಿದೆ; ಯಾರೂ ಅವುಗಳ ಹಿಂದೆ ಹೋಗಿ ಹುಡುಕಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು