Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 40:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಕಾರೇಹನ ಮಗನಾದ ಯೋಹಾನಾನ ಮಿಚ್ಪದಲ್ಲಿದ್ದ ಗೆದಲ್ಯನಿಗೆ, “ನಾನು ಹೋಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕೊಲ್ಲಲಿಕ್ಕೆ ಅಪ್ಪಣೆಯಾಗಲಿ; ಇದು ನಿನ್ನ ಅಪ್ಪಣೆ ಎಂದು ಯಾರಿಗೂ ತಿಳಿದು ಬರುವುದಿಲ್ಲ; ಅವನು ನಿನ್ನನ್ನು ಕೊಂದರೆ ನಿನ್ನ ಆಶ್ರಯದ ಯೆಹೂದ್ಯರೆಲ್ಲರೂ ದಿಕ್ಕಾಪಾಲಾಗಿ ಯೆಹೂದದ ಶೇಷವು ನಿಶ್ಶೇಷವಾಗುವುದಲ್ಲಾ; ಏಕೆ ಹೀಗಾಗಬೇಕು?” ಎಂದು ರಹಸ್ಯವಾಗಿ ವಿಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಗ ಕಾರೇಹನ ಮಗ ಯೋಹಾನಾನನು ಮಿಚ್ಪದಲ್ಲಿದ್ದ ಗೆದಲ್ಯನಿಗೆ, “ನಾನು ಹೋಗಿ ನೆತನ್ಯನ ಮಗ ಇಷ್ಮಾಯೇಲನನ್ನು ಕೊಲ್ಲಲು ಅಪ್ಪಣೆಯಾಗಬೇಕು. ಇದು ನಿಮ್ಮ ಅಪ್ಪಣೆಯೆಂದು ಯಾರಿಗೂ ತಿಳಿದುಬರುವುದಿಲ್ಲ. ಅವನು ನಿಮ್ಮನ್ನು ಕೊಂದರೆ ನಿಮ್ಮ ಆಶ್ರಯದ ಯೆಹೂದ್ಯರೆಲ್ಲರು ದಿಕ್ಕಾಪಾಲಾಗಿ ಜುದೇಯದ ಶೇಷವೂ ನಿಶ್ಶೇಷವಾಗುವುದು. ಹೀಗೆ ಆಗುವುದು ಸರಿಯೇ?” ಎಂದು ಗುಟ್ಟಾಗಿ ವಿನಂತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ಕಾರೇಹನ ಮಗನಾದ ಯೋಹಾನಾನನು ವಿುಚ್ಪದಲ್ಲಿ ಗೆದಲ್ಯನಿಗೆ - ನಾನು ಹೋಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕೊಲ್ಲಲಿಕ್ಕೆ ಅಪ್ಪಣೆಯಾಗಲಿ; ಇದು ನಿನ್ನ ಅಪ್ಪಣೆ ಎಂದು ಯಾರಿಗೂ ತಿಳಿದು ಬರುವದಿಲ್ಲ; ಅವನು ನಿನ್ನನ್ನು ಕೊಂದರೆ ನಿನ್ನ ಆಶ್ರಯದ ಯೆಹೂದ್ಯರೆಲ್ಲರೂ ದಿಕ್ಕಾಪಾಲಾಗಿ ಯೆಹೂದದ ಶೇಷವು ನಿಶ್ಶೇಷವಾಗುವದಲ್ಲಾ; ಏಕೆ ಹೀಗಾಗಬೇಕು ಎಂದು ರಹಸ್ಯವಾಗಿ ವಿಜ್ಞಾಪಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ಕಾರೇಹನ ಮಗನಾದ ಯೋಹಾನಾನನು ಮಿಚ್ಫದಲ್ಲಿ ಗೆದಲ್ಯನೊಂದಿಗೆ ರಹಸ್ಯವಾಗಿ ಮಾತನಾಡಿದನು. ಯೋಹಾನಾನನು ಗೆದಲ್ಯನಿಗೆ ಹೀಗೆ ಹೇಳಿದನು: “ನಾನು ಹೋಗಿ ನೆತನ್ಯನ ಮಗನಾದ ಇಷ್ಮಾಯೇಲನ ಕೊಲೆ ಮಾಡುವೆನು. ಯಾರಿಗೂ ಆ ವಿಷಯ ತಿಳಿಯುವುದಿಲ್ಲ. ನಾವು ಇಷ್ಮಾಯೇಲನಿಗೆ ನಿನ್ನನ್ನು ಕೊಲ್ಲುವ ಅವಕಾಶ ಕೊಡಬಾರದು. ಅದರಿಂದ ನಿನ್ನ ಆಶ್ರಯದಲ್ಲಿ ಬಂದು ನೆಲೆಸಿದ ಎಲ್ಲಾ ಯೆಹೂದ್ಯರು ಮತ್ತೆ ಬೇರೆಬೇರೆ ದೇಶಗಳಲ್ಲಿ ಚದುರಿ ಹೋಗಬೇಕಾಗುತ್ತದೆ. ಆಗ ಅಳಿದುಳಿದ ಕೆಲವೇ ಜನ ಯೆಹೂದಿಗಳು ಸಹ ಇಲ್ಲವಾಗುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಕಾರೇಹನ ಮಗ ಯೋಹಾನಾನನು ಮಿಚ್ಪದಲ್ಲಿ ರಹಸ್ಯವಾಗಿ ಗೆದಲ್ಯನ ಸಂಗಡ ಮಾತನಾಡಿ, “ನನ್ನನ್ನು ಹೋಗಗೊಡಿಸು, ನಾನು ನೆತನ್ಯನ ಮಗ ಇಷ್ಮಾಯೇಲನನ್ನು ಯಾರಿಗೂ ತಿಳಿಯದ ಹಾಗೆ ಕೊಂದು ಹಾಕುತ್ತೇನೆ. ಅವನು ನಿನ್ನನ್ನು ಕೊಂದರೆ, ನಿನ್ನ ಬಳಿಗೆ ಕೂಡಿಕೊಳ್ಳುವ ಯೆಹೂದ್ಯರೆಲ್ಲರು ಚದರಿಹೋಗಿ, ಯೆಹೂದದಲ್ಲಿ ಉಳಿದವರು ನಾಶವಾಗುತ್ತಾರಲ್ಲಾ. ಏಕೆ ಹೀಗೆ ಆಗಬೇಕು?” ಎಂದು ವಿಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 40:15
10 ತಿಳಿವುಗಳ ಹೋಲಿಕೆ  

ಆದರೆ ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು, ಆ ಫಿಲಿಷ್ಟಿಯನನ್ನು ಕೊಂದು ಹಾಕಿದನು. ಆಗ ಜನರು ದಾವೀದನಿಗೆ, “ಇಸ್ರಾಯೇಲರ ದೀಪವು ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು” ಎಂದು ಖಂಡಿತವಾಗಿ ಹೇಳಿದನು.


ಅಬೀಷೈಯು ದಾವೀದನಿಗೆ, “ದೇವರು ಈ ಹೊತ್ತು ನಿನ್ನ ವೈರಿಯನ್ನು ನಿನ್ನ ಕೈಗೆ ಒಪ್ಪಿಸಿದ್ದಾನೆ, ಅಪ್ಪಣೆಯಾಗಲಿ ನಾನು ಬರ್ಜಿಯಿಂದ ಒಂದೇ ಪೆಟ್ಟಿನಲ್ಲಿ ಅವನನ್ನು ನೆಲಕ್ಕೆ ಹತ್ತಿಕೊಳ್ಳುವಂತೆ ತಿವಿಯುವೆನು. ಎರಡನೆಯ ಸಾರಿ ಹೊಡೆಯುವಂತ ಅವಕಾಶವಿರುವುದಿಲ್ಲ” ಎಂದು ಹೇಳಿದನು.


ಇಡೀ ರಾಷ್ಟ್ರವೇ ನಾಶವಾಗುವುದಕ್ಕಿಂತ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವುದು ನಿಮಗೆ ಹಿತವೆಂದು ನೀವು ಆಲೋಚಿಸುವುದೂ ಇಲ್ಲ” ಎಂಬುದಾಗಿ ಹೇಳಿದನು.


ಅವರು ಅವನಿಗೆ, “ದಯಮಾಡು, ನಮ್ಮ ಬಿನ್ನಹವನ್ನು ಲಾಲಿಸು; ನಿನ್ನ ಕಣ್ಣಿಗೆ ಕಾಣುವ ಪ್ರಕಾರ ಅಪಾರ ಜನರಲ್ಲಿ ನಾವು ಕೆಲವರು ಮಾತ್ರ ಉಳಿದಿದ್ದೇವೆ.


ನನ್ನ ಗುಡಾರದ ಆಳುಗಳು, ‘ನಮ್ಮ ಯಜಮಾನ ಬಡಿಸಿದ ಮಾಂಸದಿಂದ ತೃಪ್ತರಾಗದವರು ಎಲ್ಲಿಯೂ ಸಿಕ್ಕಲಾರರು’ ಎಂದು ಹೇಳಿಕೊಳ್ಳುತ್ತಿರಲಿಲ್ಲವೋ?


ಆಗ ಸೈನ್ಯದವರು ಅವನಿಗೆ, “ನೀನು ಬರಬಾರದು. ನಾವು ಸೋತು ಓಡಿಹೋದರೆ ಶತ್ರುಗಳು ಅದನ್ನು ಗಮನಿಸುವುದಿಲ್ಲ. ನಮ್ಮಲ್ಲಿ ಅರ್ಧ ಜನರು ಸತ್ತುಹೋದರೂ ಅದು ಅವರಿಗೆ ದೊಡ್ಡ ಲಾಭವಲ್ಲ. ನಮ್ಮಂಥ ಹತ್ತು ಸಾವಿರ ಜನರಿಗಿರುವ ಬೆಲೆ ನಿನ್ನೊಬ್ಬನಿಗೆ ಉಂಟು. ನೀನು ಊರಲ್ಲಿದ್ದುಕೊಂಡು ಅಲ್ಲಿಂದಲೇ ನಮಗೆ ಬೇಕಾದ ಸಹಾಯ ಮಾಡಬಹುದು” ಎಂದನು.


ಜನರು ದಾವೀದನಿಗೆ “ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು, ಆಗ ನೀನು ಅವನನ್ನು ಮನಸ್ಸಿಗೆ ಬಂದಂತೆ ನಡೆಸಬಹುದು ಎಂದು ಯೆಹೋವನು ನಿನಗೆ ಹೇಳಿದ ಮಾತು ನೆರವೇರುವ ದಿನ ಇದೇ” ಅಂದಾಗ ಅವನೆದ್ದು ಮೆಲ್ಲನೆ ಹೋಗಿ ಸೌಲನ ನಿಲುವಂಗಿಯ ತುದಿಯನ್ನು ಕತ್ತರಿಸಿಕೊಂಡನು.


ಆ ಸೇನಾಪತಿಗಳು ಯಾರೆಂದರೆ, ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಮತ್ತು ಯೋನಾಥಾನ, ತನ್ಹುಮೆತನ ಮಗನಾದ ಸೆರಾಯ, ಮಾಕಾ ಊರಿನವನ ಮಗನಾದ ಯೆಜನ್ಯ, ನೆಟೋಫದವನಾದ ಏಫಯನ ಮಕ್ಕಳು ಇವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು