Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 40:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು ಇವರಿಗೂ ಇವರ ಸೈನಿಕರಿಗೂ, “ಕಸ್ದೀಯರಿಗೆ ಅಧೀನರಾಗಿರಲಿಕ್ಕೆ ಹೆದರಬೇಡಿರಿ; ಬಾಬೆಲಿನ ಅರಸನಿಗೆ ಅಧೀನರಾಗಿ ಇಲ್ಲಿಯೇ ವಾಸಿಸಿರಿ; ಆಗ ನಿಮಗೆ ಸುಖವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇವರಿಗೂ ಇವರ ಜನರಿಗೂ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು, “ಬಾಬಿಲೋನಿಯರಿಗೆ ಅಧೀನರಾಗಿರಲು ಹೆದರಬೇಡಿ, ಬಾಬಿಲೋನಿನ ಅರಸನಿಗೆ ಅಧೀನರಾಗಿ ಅಲ್ಲಿಯೇ ವಾಸಮಾಡಿ. ಆಗ ನಿಮಗೆ ಒಳ್ಳೆಯದಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು ಇವರಿಗೂ ಇವರ ಸೈನಿಕರಿಗೂ - ಕಸ್ದೀಯರಿಗೆ ಅಧೀನರಾಗಿರಲಿಕ್ಕೆ ಹೆದರಬೇಡಿರಿ; ಬಾಬೆಲಿನ ಅರಸನಿಗೆ ಅಧೀನರಾಗಿ ಇಲ್ಲಿಯೇ ವಾಸಿಸಿರಿ; ಆಗ ನಿಮಗೆ ಸುಖವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು, ಆ ಸೈನಿಕರು ಮತ್ತು ಅವರ ಜನರು ಈಗ ಅಲ್ಲಿ ಹೆಚ್ಚು ಸುರಕ್ಷಿತರೆಂದು ನಂಬಿಕೆಹುಟ್ಟುವ ಹಾಗೆ ಆಣೆಮಾಡಿ ಹೇಳಿದನು. ಗೆದಲ್ಯನು ಹೀಗೆ ಹೇಳಿದನು. “ಸೈನಿಕರೇ, ಬಾಬಿಲೋನಿನ ಜನರ ಸೇವೆಮಾಡಲು ಭಯಪಡಬೇಡಿ. ಈ ಪ್ರದೇಶದಲ್ಲಿ ನೆಲೆಸಿ ಬಾಬಿಲೋನಿನ ರಾಜನ ಸೇವೆಮಾಡಿರಿ. ನೀವು ಹೀಗೆ ಮಾಡಿದರೆ ನಿಮಗೆಲ್ಲ ಒಳ್ಳೆಯದಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಶಾಫಾನನ ಮಗ ಅಹೀಕಾಮನ ಮಗ ಗೆದಲ್ಯನು ಅವರಿಗೂ, ಅವರ ಜನರಿಗೂ ಪ್ರಮಾಣಮಾಡಿ, “ ‘ಬಾಬಿಲೋನಿಯರಿಗೆ ಸೇವೆ ಮಾಡುವುದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು, ಬಾಬಿಲೋನಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೆಯದಾಗುವುದು,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 40:9
9 ತಿಳಿವುಗಳ ಹೋಲಿಕೆ  

ಯಾವ ಜನಾಂಗವು ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನ ಅಡಿಯಾಳಾಗುವುದೋ, ಆ ಜನಾಂಗದವರನ್ನು ನಾನು ಅವರ ದೇಶದಲ್ಲಿ ನೆಲೆಗೊಳಿಸುವೆನು; ಅವರು ಅಲ್ಲಿ ಭೂಮಿಯನ್ನು ವ್ಯವಸಾಯಮಾಡಿ ವಾಸಿಸುವರು. ಯೆಹೋವನೇ ಇದನ್ನು ನುಡಿದಿದ್ದಾನೆ.”


ಗೆದಲ್ಯನು ಇವರಿಗೂ ಇವರ ಜನರಿಗೂ, “ಕಸ್ದೀಯರ ಸೈನ್ಯದವರಿಗೆ ಹೆದರಬೇಡಿರಿ, ಬಾಬೆಲಿನ ಅರಸನಿಗೆ ವಿಧೇಯರಾಗಿದ್ದು ಸೇವೆಮಾಡಿಕೊಂಡು ಇಲ್ಲಿಯೇ ವಾಸಮಾಡಿರಿ. ಆಗ ನಿಮಗೆ ಒಳಿತಾಗುವಾಗುವುದು” ಎಂದು ಹೇಳಿದನು.


ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ, ನೀನು ಧನ್ಯನು, ನಿನಗೆ ಶುಭವಿರುವುದು.


ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.


ತಾನು ಸೇರಿದ ಪ್ರದೇಶವು ವಿಶ್ರಾಂತಿಗೆ ಅನುಕೂಲವೂ ಸುಖಾಸ್ಪದವೂ ಆಗಿರುವುದನ್ನು ಕಂಡನು. ಅವನು ಹೊರೆಯನ್ನು ಹೊರುವುದಕ್ಕೆ ಬೆನ್ನು ಬಗ್ಗಿಸಿಕೊಂಡು ಬಿಟ್ಟೀ ಸೇವೆಮಾಡುವನು.


ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ! ಜನಾಂಗಗಳಲ್ಲಿ ರತ್ನವಾಗಿದ್ದವಳು ವಿಧವೆಯಾದಳು, ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವಳು ಗುಲಾಮಳಾದಳು.


ಆಹಾರಕ್ಕೋಸ್ಕರ ಬೆಳೆಯನ್ನು ಕೊಯ್ಯುತ್ತಿರುವಾಗ ಅರಣ್ಯದವರ ಕತ್ತಿಯಿಂದ ಪ್ರಾಣಾಪಾಯಕ್ಕೆ ಗುರಿಯಾಗಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು