ಯೆರೆಮೀಯ 41:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ನೆತನ್ಯನ ಮಗನಾದ ಇಷ್ಮಾಯೇಲನೂ ಅವನೊಂದಿಗಿದ್ದ ಹತ್ತು ಜನರೂ ಎದ್ದು ಅಹೀಕಾಮನ ಮಗ ಶಾಫಾನನ ಮೊಮ್ಮಗ ಬಾಬೆಲಿನ ಅರಸನಿಂದ ದೇಶಾಧಿಪತಿಯಾಗಿ ನೇಮಿಸಲ್ಪಟ್ಟವನೂ ಆದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನೆತಲ್ಯನ ಮಗ ಇಷ್ಮಾಯೇಲನು ಮತ್ತು ಅವನೊಂದಿಗಿದ್ದ ಹತ್ತು ಜನರು ಎದ್ದು ಅಹೀಕಾಮನ ಮಗ, ಶಾಫಾನನ ಮೊಮ್ಮಗ, ಹಾಗು ಬಾಬಿಲೋನಿಯದ ಅರಸನಿಂದ ನಾಡಿನ ರಾಜ್ಯಪಾಲನಾಗಿ ನೇಮಕಗೊಂಡಿದ್ದ ಆ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಗ ನೆತನ್ಯನ ಮಗನಾದ ಇಷ್ಮಾಯೇಲನೂ ಅವನೊಂದಿಗಿದ್ದ ಹತ್ತು ಜನರೂ ಎದ್ದು ಅಹೀಕಾಮನ ಮಗ ಶಾಫಾನನ ಮೊಮ್ಮಗ ಬಾಬೆಲಿನ ಅರಸನಿಂದ ದೇಶಾಧಿಪತಿಯಾಗಿ ನೇವಿುಸಲ್ಪಟ್ಟವನೂ ಆದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅವರು ಒಟ್ಟಿಗೆ ಊಟ ಮಾಡುತ್ತಿದ್ದಾಗ, ಇಷ್ಮಾಯೇಲ್ ಮತ್ತು ಅವನ ಹತ್ತು ಜನರು ಎದ್ದು ಅಹೀಕಾಮನ ಮಗನಾದ ಗೆದಲ್ಯನನ್ನು ಖಡ್ಗದಿಂದ ಕೊಂದರು. ಗೆದಲ್ಯನನ್ನು ಬಾಬಿಲೋನಿನ ರಾಜನು ಯೆಹೂದದ ಅಧಿಪತಿಯಾಗಿ ನೇಮಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನೆತನ್ಯನ ಮಗ ಇಷ್ಮಾಯೇಲನು ತನ್ನ ಸಂಗಡ ಇದ್ದ ಹತ್ತು ಜನರಸಹಿತವಾಗಿ ಎದ್ದು, ಬಾಬಿಲೋನಿನ ಅರಸನು ದೇಶದ ಮೇಲೆ ನೇಮಿಸಿದ್ದ ಶಾಫಾನನ ಮೊಮ್ಮಗ ಅಹೀಕಾಮನ ಮಗನಾದ ಗೆದಲ್ಯನನ್ನು ಖಡ್ಗದಿಂದ ಹೊಡೆದು ಕೊಂದುಹಾಕಿದನು. ಅಧ್ಯಾಯವನ್ನು ನೋಡಿ |
ಯೆರೆಮೀಯನು ಇನ್ನೂ ಹಿಂದಿರುಗದಿರುವಲ್ಲಿ ನೆಬೂಜರದಾನನು ಅವನಿಗೆ, “ಬಾಬೆಲಿನ ಅರಸನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಯೆಹೂದದ ಪಟ್ಟಣಗಳಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನಲ್ಲಾ; ಅವನ ಕಡೆಗೆ ನೀನು ಹಿಂದಿರುಗಿ ಅವನ ಹತ್ತಿರ ಜನರ ಮಧ್ಯೆ ವಾಸಿಸು; ಇಲ್ಲವೆ ಎಲ್ಲಿ ಬೇಕಾದರೂ ಹೋಗು” ಎಂದು ಹೇಳಿ ಬುತ್ತಿಯನ್ನೂ ಮತ್ತು ಬಹುಮಾನವನ್ನೂ ಕೊಡಿಸಿ ಅವನನ್ನು ಕಳುಹಿಸಿಬಿಟ್ಟನು.