ಯೆರೆಮೀಯ 41:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಗ ನೆತನ್ಯನ ಮಗನಾದ ಇಷ್ಮಾಯೇಲನು ಮಿಚ್ಪದಿಂದ ಅವರ ಕಡೆಗೆ ಹೊರಟು ದಾರಿಯುದ್ದಕ್ಕೂ ಅಳುತ್ತಾ ನಡೆದು ಅವರನ್ನು ಎದರುಗೊಂಡು, “ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ಬನ್ನಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆಗ ನೆತನ್ಯನ ಮಗ ಇಷ್ಮಾಯೇಲನು ಮಿಚ್ಪದಿಂದ ಅವರ ಕಡೆಗೆ ಹೊರಟು ದಾರಿಯುದ್ದಕ್ಕೂ ಅಳುತ್ತಾ ನಡೆದುಬಂದನು. ಅವರನ್ನು ಎದುರುಗೊಂಡು, ‘ಅಹೀಕಾಮನ ಮಗ ಗೆದಲ್ಯನ ಬಳಿಗೆ ಬನ್ನಿ’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆಗ ನೆತನ್ಯನ ಮಗನಾದ ಇಷ್ಮಾಯೇಲನು ವಿುಚ್ಪದಿಂದ ಅವರ ಕಡೆಗೆ ಹೊರಟು ದಾರಿಯುದ್ದಕ್ಕೂ ಅಳುತ್ತಾ ನಡೆದು ಅವರನ್ನು ಎದುರುಗೊಂಡು ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ಬನ್ನಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಇಷ್ಮಾಯೇಲನು ಈ ಎಂಭತ್ತು ಜನರನ್ನು ಕಾಣುವದಕ್ಕಾಗಿ ಮಿಚ್ಫ ಪಟ್ಟಣದ ಹೊರಗಡೆ ಹೋದನು. ಅವರನ್ನು ಕಾಣುವದಕ್ಕೆ ಹೋಗುವಾಗ ಅವನು ಅಳುತ್ತಿದ್ದನು. ಇಷ್ಮಾಯೇಲನು ಆ ಎಂಭತ್ತು ಜನರನ್ನು ಎದುರುಗೊಂಡು, “ಅಹೀಕಾಮನ ಮಗನಾದ ಗೆದಲ್ಯನನ್ನು ಭೇಟಿ ಮಾಡುವದಕ್ಕೆ ನನ್ನೊಂದಿಗೆ ಬನ್ನಿ” ಎಂದು ಕರೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ನೆತನ್ಯನ ಮಗ ಇಷ್ಮಾಯೇಲನು ಮಿಚ್ಪದಿಂದ ಹೊರಟು, ಅಳುತ್ತಲೇ ಅವರ ಎದುರಿಗೆ ಹೋದನು. ಅವರನ್ನು ಎದುರುಗೊಂಡ ಮೇಲೆ ಅವರಿಗೆ, “ಅಹೀಕಾಮನ ಮಗ ಗೆದಲ್ಯನ ಬಳಿಗೆ ಬನ್ನಿ,” ಎಂದನು. ಅಧ್ಯಾಯವನ್ನು ನೋಡಿ |