Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 41:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ಆ ಎಂಭತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಲ್ಲಬೇಡ; ಗೋದಿ, ಜವೆಗೋದಿ, ಎಣ್ಣೆ, ಜೇನುತುಪ್ಪ, ಇವುಗಳನ್ನು ಕಾಡಿನಲ್ಲಿ ಬಹಳವಾಗಿ ಬಚ್ಚಿಟ್ಟಿದ್ದೇವೆ” ಎಂದು ಬಿನ್ನೈಸಲು ಅವನು ಅವರನ್ನು ಅವರ ಜೊತೆಯವರಂತೆ ಕೊಲ್ಲದೆ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದರೆ ಆ ಎಂಬತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಲ್ಲಬೇಡಿ; ಗೋದಿ, ಜವೆಗೋದಿ, ಎಣ್ಣೆ, ಜೇನುತುಪ್ಪ ಇವುಗಳನ್ನು ಕಾಡಿನಲ್ಲಿ ರಾಶಿಯಾಗಿ ಬಚ್ಚಿಟ್ಟಿದ್ದೇವೆ,” ಎಂದು ಬಿನ್ನವಿಸಿದರು. ಈ ಕಾರಣ ಅವರನ್ನು ಅವರ ಜೊತೆಯವರಂತೆ ಕೊಲ್ಲದೆ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೆ ಆ ಎಂಭತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ - ನಮ್ಮನ್ನು ಕೊಲ್ಲಬೇಡ; ಗೋದಿ, ಜವೆಗೋದಿ, ಎಣ್ಣೆ, ಜೇನುತುಪ್ಪ, ಇವುಗಳನ್ನು ಕಾಡಿನಲ್ಲಿ ಬಹಳವಾಗಿ ಬಚ್ಚಿಟ್ಟಿದ್ದೇವೆ ಎಂದು ಬಿನ್ನೈಸಲು ಅವನು ಅವರನ್ನು ಅವರ ಜೊತೆಯವರಂತೆ ಕೊಲ್ಲದೆ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಉಳಿದ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಲ್ಲಬೇಡ, ನಮ್ಮಲ್ಲಿ ಗೋಧಿ, ಜವೆಗೋಧಿ, ಎಣ್ಣೆ ಮತ್ತು ಜೇನುತುಪ್ಪ ಇವೆ. ನಾವು ಆ ವಸ್ತುಗಳನ್ನು ಒಂದು ಹೊಲದಲ್ಲಿ ಬಚ್ಚಿಟ್ಟಿದ್ದೇವೆ” ಎಂದು ಹೇಳಿದರು. ಆದ್ದರಿಂದ ಇಷ್ಮಾಯೇಲನು ಆ ಹತ್ತು ಮಂದಿಯನ್ನು ಬಿಟ್ಟುಬಿಟ್ಟನು. ಅವನು ಬೇರೆಯವರೊಂದಿಗೆ ಅವರನ್ನು ಕೊಲ್ಲಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ಆ ಎಂಬತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಂದು ಹಾಕಬೇಡ. ಏಕೆಂದರೆ ನಮಗೆ ಹೊಲದಲ್ಲಿ ಗೋಧಿ, ಜವೆಗೋಧಿ, ಎಣ್ಣೆ, ಜೇನು ಇವುಗಳನ್ನು ಬಚ್ಚಿಟ್ಟಿದ್ದೇವೆ” ಎಂದು ಬಿನ್ನವಿಸಿದರು. ಆದ್ದರಿಂದ ಅವನು ಹಿಂದೆಗೆದು ಅವರನ್ನು, ಅವರ ಸಹೋದರರ ಮಧ್ಯದಲ್ಲಿ ಕೊಂದುಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 41:8
9 ತಿಳಿವುಗಳ ಹೋಲಿಕೆ  

ಧನವಂತನ ಪ್ರಾಣರಕ್ಷಣೆಗೆ ಅವನ ಧನವೇ ಕ್ರಯ, ಬಡವನಿಗೆ ಯಾವ ಬೆದರಿಕೆಯೂ ಇಲ್ಲ.


ಯೆಹೋವನ ಆ ಮಾತಿಗೆ ಸೈತಾನನು, “ಚರ್ಮಕ್ಕೆ ಚರ್ಮ ಎಂಬಂತೆ ಒಬ್ಬ ಮನುಷ್ಯನು ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೋಸ್ಕರ ತನ್ನ ಸರ್ವಸ್ವವನ್ನೂ ಕೊಡುವನು.


ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?


“ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ.


ನಿನ್ನ ಹೆಸರು ಹಿಡಿದು ಕರೆಯುವ ಯೆಹೋವನು ನಾನೇ. ಇಸ್ರಾಯೇಲರ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಆಸ್ತಿಯನ್ನೂ, ಗುಪ್ತಸ್ಥಳಗಳಲ್ಲಿ ಮರೆಮಾಡಿದ ನಿಧಿನಿಕ್ಷೇಪವನ್ನೂ ನಿನಗೆ ಕೊಡುವೆನು.


ಇಷ್ಮಾಯೇಲನು ತಾನು ಗೆದಲ್ಯನ ಸಂಗಡ ಕೊಂದ ಇತರರ ಶವಗಳನ್ನು ಹಾಕಿದ ಬಾವಿಯು, ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ಅರಸನಾದ ಆಸನು ತೋಡಿಸಿದ್ದ ಬಾವಿಯೇ. ಆ ಬಾವಿಯನ್ನು ನೆತನ್ಯನ ಮಗನಾದ ಇಷ್ಮಾಯೇಲನು ಹತರಾದವರ ಶವಗಳಿಂದ ತುಂಬಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು