Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 42:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಸಕಲ ಸೇನಾಧಿಪತಿಗಳು, ಕಾರೇಹನ ಮಗನಾದ ಯೋಹಾನಾನನೂ ಮತ್ತು ಹೋಷಾಯನ ಮಗನಾದ ಯೆಜನ್ಯನೂ ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲಾ ಜನರೂ ಪ್ರವಾದಿಯಾದ ಯೆರೆಮೀಯನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇದಾದ ಬಳಿಕ ಎಲ್ಲ ಸೇನಾಪತಿಗಳು, ಕಾರೇಹನ ಮಗ ಯೋಹಾನಾನನು, ರೋಷಾಯನ ಮಗ ಯೆಜನ್ಯನು, ಹಾಗು ಚಿಕ್ಕವರು ಮೊದಲ್ಗೊಂಡು ದೊಡ್ಡವರ ತನಕ ಎಲ್ಲ ಜನರು ಪ್ರವಾದಿ ಯೆರೆಮೀಯನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಗ ಸಕಲ ಸೇನಾಪತಿಗಳೂ ಕಾರೇಹನ ಮಗನಾದ ಯೋಹಾನಾನನೂ ಹೋಷಾಯನ ಮಗನಾದ ಯೆಜನ್ಯನೂ ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅವರು ಗೇರುಥ್ ಕಿಮ್ಹಾಮಿನಲ್ಲಿಇಳಿದುಕೊಂಡಿದ್ದಾಗ ಯೋಹಾನಾನನೂ ಹೋಷಾಯನ ಮಗನಾದ ಯೆಜನ್ಯನೂ ಪ್ರವಾದಿಯಾದ ಯೆರೆಮೀಯನಲ್ಲಿಗೆ ಹೋದರು. ಯೋಹಾನಾನ ಮತ್ತು ಯೆಜನ್ಯನ ಸಂಗಡ ಎಲ್ಲಾ ಅಧಿಕಾರಿಗಳೂ ಅಪ್ರಮುಖರಿಂದ ಅತಿ ಪ್ರಮುಖವರೆಗಿನ ಎಲ್ಲಾ ಜನರೂ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಸೈನ್ಯಾಧಿಪತಿಗಳೆಲ್ಲರೂ ಕಾರೇಹನ ಮಗನಾದ ಯೋಹಾನಾನನೂ, ಹೋಷಾಯನ ಮಗನಾದ ಎಜನೀಯನೂ, ಕಿರಿಯರು ಮೊದಲುಗೊಂಡು ಹಿರಿಯರವರೆಗೆ ಜನರೆಲ್ಲರು ಹತ್ತಿರ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 42:1
25 ತಿಳಿವುಗಳ ಹೋಲಿಕೆ  

ಕಾರೇಹನ ಮಗನಾದ ಯೋಹಾನಾನನೂ ಅವನೊಂದಿಗಿದ್ದ ಸಕಲ ಸೇನಾಪತಿಗಳೂ ನೆತನ್ಯನ ಮಗನಾದ ಇಷ್ಮಾಯೇಲನು ಮಾಡಿದ ಎಲ್ಲಾ ಕೆಡುಕನ್ನು ಕೇಳಿ,


ಆಮೇಲೆ ಕಾರೇಹನ ಮಗನಾದ ಯೋಹಾನಾನನೂ, ಕಾಡುಮೇಡುಗಳಲ್ಲಿದ್ದ ಸಕಲ ಸೇನಾಪತಿಗಳೂ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು.


ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲುಗೊಂಡು ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ.


ಐಗುಪ್ತಕ್ಕೆ ಹೋಗಿ ಅಲ್ಲಿ ಪ್ರವಾಸಿಸಲು ಹಟಹಿಡಿದ ಯೆಹೂದದ ಉಳಿದ ಜನರನ್ನು ನಾನು ಹಿಡಿದು ನಾಶಮಾಡುವೆನು; ಐಗುಪ್ತದಲ್ಲೇ ಒರಗಿ ಹೋಗುವರು; ಖಡ್ಗ ಮತ್ತು ಕ್ಷಾಮಗಳಿಂದ ನಾಶವಾಗುವರು; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಖಡ್ಗ ಮತ್ತು ಕ್ಷಾಮಗಳಿಂದ ಸತ್ತು ಅಪವಾದ, ಶಾಪ, ನಿಂದೆಗೆ ಮತ್ತು ದೂಷಣೆಗಳಿಗೆ ಗುರಿಯಾಗುವರು.


ಆಗ ಅವನು ಕಾರೇಹನ ಮಗನಾದ ಯೋಹಾನಾನನನ್ನೂ, ಅವನೊಂದಿಗಿದ್ದ ಸಕಲ ಸೇನಾಧಿಪತಿಗಳನ್ನೂ, ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲಾ ಜನರನ್ನೂ ಕರೆದು,


ಆ ಸೇನಾಪತಿಗಳು ಯಾರೆಂದರೆ, ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಮತ್ತು ಯೋನಾಥಾನ, ತನ್ಹುಮೆತನ ಮಗನಾದ ಸೆರಾಯ, ಮಾಕಾ ಊರಿನವನ ಮಗನಾದ ಯೆಜನ್ಯ, ನೆಟೋಫದವನಾದ ಏಫಯನ ಮಕ್ಕಳು ಇವರೇ.


ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೂ ಎಲ್ಲರೂ, “ಇವನು ಮಹಾಶಕ್ತಿ ಎನಿಸಿಕೊಂಡಿರುವ ದೇವರ ಶಕ್ತಿಯೇ” ಎಂದು ಹೇಳುತ್ತಾ ಅವನಿಗೆ ಲಕ್ಷ್ಯಕೊಡುತ್ತಿದ್ದರು.


ಅವರ ಜ್ಞಾನವು ಎಷ್ಟರದು? ಆದುದರಿಂದ ನಾನು ಇವರ ಹೆಂಡತಿಯರನ್ನು ಅನ್ಯರಿಗೂ ಮತ್ತು ಇವರ ಹೊಲಗದ್ದೆಗಳನ್ನು ಆಕ್ರಮಿಸುವವರಿಗೂ ಕೊಟ್ಟುಬಿಡುವೆನು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳಿಂದ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.


“ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.


ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.


ಆ ಮೇಲೆ ದೇವರಾತ್ಮವು ನನ್ನನ್ನು ಎತ್ತಿ ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಯೆಹೋವನ ಆಲಯದ ಮೂಡಣ ಬಾಗಿಲಿಗೆ ತಂದುಬಿಟ್ಟಿತು; ಇಗೋ, ಬಾಗಿಲ ಮುಂದೆ ಇಪ್ಪತ್ತೈದು ಜನರು ನಿಂತಿದ್ದರು; ಅವರ ಮಧ್ಯದಲ್ಲಿ ಅಜ್ಜೂರನ ಮಗನಾದ ಯಾಜನ್ಯ, ಬೆನಾಯನ ಮಗನಾದ ಪೆಲತ್ಯ ಎಂಬ ಜನನಾಯಕರನ್ನು ನಾನು ನೋಡಿದೆ.


ಇಸ್ರಾಯೇಲ್ ವಂಶದ ಎಪ್ಪತ್ತು ಮಂದಿ ಹಿರಿಯರೂ ಮತ್ತು ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು; ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು.


ನಿಮ್ಮನ್ನು ನೀವೇ ಮೋಸಪಡಿಸಿಕೊಂಡಿದ್ದೀರಿ; ನೀವು ನನ್ನ ಬಳಿಗೆ ಬಂದು, ‘ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು; ನಮ್ಮ ದೇವರಾದ ಯೆಹೋವನು ಯಾವ ಅಪ್ಪಣೆ ಕೊಡುತ್ತಾನೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು’ ಎಂಬುದಾಗಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನನ್ನನ್ನು ಕಳುಹಿಸಿದಿರಲ್ಲಾ.


ಆಗ ಕಾರೇಹನ ಮಗನಾದ ಯೋಹಾನಾನನೂ ಅವನೊಂದಿಗಿದ್ದ ಸಮಸ್ತ ಸೇನಾಧಿಪತಿಗಳೂ ತಾವು ನೆತನ್ಯನ ಮಗನಾದ ಇಷ್ಮಾಯೇಲನ ಕೈಯಿಂದ ತಪ್ಪಿಸಿ ಗಿಬ್ಯೋನಿನಿಂದ ತಂದಿದ್ದ ಭಟರು, ಹೆಂಗಸರು, ಮಕ್ಕಳು, ಕಂಚುಕಿಗಳು, ಅಂತು ಇಷ್ಮಾಯೇಲನು ಅಹೀಕಾಮನ ಮಗನಾದ ಗೆದಲ್ಯನನ್ನು ಕೊಂದ ಮೇಲೆ ಮಿಚ್ಪದಿಂದ ಒಯ್ದ ಉಳಿದ ಜನರನ್ನೆಲ್ಲಾ ಕರೆದುಕೊಂಡು ಹೋದರು.


ಇಸ್ರಾಯೇಲೆಂಬ ಹೆಸರಿನವರೂ, ಯೆಹೂದ ವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ, ನೀವು ಯೆಹೋವನ ನಾಮದ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ, ನಿಜ. ಆದರೆ ಈ ನಿಮ್ಮ ಕಾರ್ಯಗಳು ಸತ್ಯಕ್ಕೂ, ಧರ್ಮಕ್ಕೂ ಅನುಸಾರವಾಗಿಲ್ಲ.


ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.


ತಪ್ಪಿಸಿಕೊಂಡು ಉಳಿದಿದ್ದ ಯೆಹೂದ ಸೇನಾಧಿಪತಿಗಳು ಗೆದಲ್ಯನು ಬಾಬೆಲಿನ ಅರಸನಿಂದ ಅಧಿಪತಿಯಾಗಿ ನೇಮಿಸಲ್ಪಟ್ಟಿದ್ದಾನೆಂಬ ವರ್ತಮಾನವನ್ನು ಕೇಳಿ, ತಮ್ಮ ಜನರೊಡನೆ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು. ಅವರು ಯಾರೆಂದರೆ, ನೆತನ್ಯನ ಮಗನಾದ ಇಷ್ಮಾಯೇಲನು, ಕಾರೇಹನ ಮಗನಾದ ಯೋಹಾನಾನ್, ನೆಟೋಫದವನಾದ, ತನ್ಹುಮೆತನ ಮಗನಾದ ಸೆರಾಯನು, ಮಾಕಾ ಊರಿನವನಾದ ಯಾಜನ್ಯನು ಇವರೇ.


ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲ, ಯಾಜಕ ಮಾಸೇಯನ ಮಗನಾದ ಚೆಫನ್ಯ ಇವರ ಮೂಲಕ, “ದಯಮಾಡಿ ನಮಗಾಗಿ ನಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸು” ಎಂದು ಪ್ರವಾದಿಯಾದ ಯೆರೆಮೀಯನಿಗೆ ಹೇಳಿಕಳುಹಿಸಿದನು.


ಬಾಬೆಲಿನ ಅರಸನಿಂದ ದೇಶಕ್ಕೆ ಅಧಿಪತಿಯಾಗಿ ನೇಮಿಸಲ್ಪಟ್ಟವನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ್ದರಿಂದ ಕಸ್ದೀಯರಿಗೆ ಅಂಜಿದರು.


ಆಮೇಲೆ ಹೋಷಾಯನ ಮಗನಾದ ಅಜರ್ಯನೂ, ಕಾರೇಹನ ಮಗನಾದ ಯೋಹಾನಾನನೂ, ಸೊಕ್ಕೇರಿದವರೆಲ್ಲರೂ ಅವನಿಗೆ, “ನಿನ್ನ ಮಾತು ಸುಳ್ಳು, ‘ಐಗುಪ್ತಕ್ಕೆ ಹೋಗಿ ವಾಸಮಾಡಬಾರದು’ ಎಂದು ತಿಳಿಸುವಂತೆ ನಮ್ಮ ದೇವರಾದ ಯೆಹೋವನು ನಿನ್ನನ್ನು ಕಳುಹಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು