Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 42:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೂದ್ಯರಲ್ಲಿ ಉಳಿದವರೇ, ಯೆಹೋವನ ವಾಕ್ಯವನ್ನು ಈಗ ಕೇಳಿರಿ, ‘ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀವು ಐಗುಪ್ತಕ್ಕೆ ಹೋಗಬೇಕೆಂದು ಹಟಹಿಡಿದು ಅಲ್ಲಿಗೆ ಸೇರಿ ವಾಸಮಾಡುವುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಯೆಹೂದ್ಯರಲ್ಲಿ ಅಳಿದು ಉಳಿದವರೇ, ಸರ್ವೇಶ್ವರನ ವಾಕ್ಯವನ್ನು ಈಗ ಕೇಳಿ: ಇಸ್ರಯೇಲಿನ ದೇವರೂ ಸರ್ವೇಶ್ವರರೂ ಆದ ಸರ್ವೇಶ್ವರ ಹೇಳುವುದು ಇದು - ‘ನೀವು ಈಜಿಪ್ಟಿಗೆ ಹೋಗಬೇಕೆಂದು ಹಟಹಿಡಿದು ಅಲ್ಲಿಗೆ ಸೇರಿ ವಾಸಮಾಡುವುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೂದ್ಯರಲ್ಲಿ ಉಳಿದವರೇ, ಯೆಹೋವನ ವಾಕ್ಯವನ್ನು ಈಗ ಕೇಳಿರಿ; ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನೀವು ಐಗುಪ್ತಕ್ಕೆ ಹೋಗಬೇಕೆಂದು ಹಟಹಿಡಿದು ಅಲ್ಲಿಗೆ ಸೇರಿ ವಾಸಮಾಡುವದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೂದದ ಶ್ರೇಷ್ಠ ಜನಗಳೇ, ನೀವು ಒಂದುವೇಳೆ ಹಾಗೆ ಹೇಳುವುದಾದರೆ ಯೆಹೋವನ ಸಂದೇಶವನ್ನು ಕೇಳಿರಿ: ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: ‘ನೀವು ಈಜಿಪ್ಟಿಗೆ ಹೋಗಿ ಅಲ್ಲಿ ವಾಸಮಾಡಬೇಕೆಂದು ತೀರ್ಮಾನಿಸಿದ್ದರೆ ಪರಿಸ್ಥಿತಿ ಹೀಗಾಗುವುದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆಹೂದದ ಶೇಷವೇ, ಹಾಗಾದರೆ ಈಗ ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀವು ನಿಶ್ಚಯವಾಗಿ ನಿಮ್ಮ ಮುಖಗಳನ್ನು ಈಜಿಪ್ಟಿಗೆ ಹೋಗುವಹಾಗೆ ಇಟ್ಟರೆ ಮತ್ತು ನೀವು ಅಲ್ಲಿ ತಂಗುವುದಕ್ಕೆ ಹೋದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 42:15
8 ತಿಳಿವುಗಳ ಹೋಲಿಕೆ  

ಅವನು ಕುದುರೆಯ ದಂಡನ್ನು ಕೂಡಿಸಿಕೊಳ್ಳಬಾರದು. ಕುದುರೆಗಳನ್ನು ಕೊಂಡುಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಐಗುಪ್ತದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಬಾರದು ಎಂದು ಯೆಹೋವನು ಆಜ್ಞಾಪಿಸಿದ್ದಾನಲ್ಲಾ.


ಐಗುಪ್ತಕ್ಕೆ ಹೋಗಿ ಅಲ್ಲಿ ವಾಸಿಸಲು ಹಟಹಿಡಿಯುವ ಎಲ್ಲಾ ಜನರಿಗೂ ಇದೇ ಗತಿಯಾಗುವುದು; ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವರು. ನಾನು ಅವರಿಗೆ ಬರಮಾಡುವ ವಿಪತ್ತಿನಿಂದ ಯಾರೂ ತಪ್ಪಿಸಿಕೊಳ್ಳರು, ಯಾರೂ ಉಳಿಯರು.


ಯೇಸು ತಾನು ಪರಲೋಕಕ್ಕೆ ಏರಿಹೋಗುವ ದಿನಗಳು ಸಮೀಪಿಸುತ್ತಿರುವಾಗ ಯೆರೂಸಲೇಮಿಗೆ ಹೋಗುವುದಕ್ಕೆ ಮನಸ್ಸನ್ನು ದೃಢಮಾಡಿಕೊಂಡನು.


ದಕ್ಷಿಣ ದಿಕ್ಕಿನ ರಾಜನ ಮೇಲೆ ಬೀಳಬೇಕೆಂದು ನಿರ್ಧರಿಸಿ ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು, ಅವನ ಸಂಗಡ ಒಪ್ಪಂದ ಮಾಡಿಕೊಳ್ಳುವನು. ಅವನ ರಾಜ್ಯದ ಹಾನಿಗಾಗಿ ಅವನಿಗೆ ಹೆಣ್ಣು ಮಗಳನ್ನು ಕೊಡುವನು. ಆದರೆ ಆ ಉಪಾಯವೂ ನಿಲ್ಲದು, ತನಗೆ ಅನುಕೂಲವಾಗುವುದಿಲ್ಲ.


ಹೀಗೆ ಅವನು ತನ್ನ ಆಸ್ತಿಯನ್ನೆಲ್ಲಾ ತೆಗೆದುಕೊಂಡು ಯೂಫ್ರೆಟಿಸ್ ಮಹಾ ನದಿಯನ್ನು ದಾಟಿ ಗಿಲ್ಯಾದೆಂಬ ಬೆಟ್ಟದ ಸೀಮೆಯ ದಾರಿಯನ್ನು ಹಿಡಿದನು.


ಯಾವ ಜನಾಂಗ, ಯಾವ ರಾಜ್ಯ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಅಡಿಯಾಳಾಗಲಿಕ್ಕೂ, ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಡಲಿಕ್ಕೂ ಒಪ್ಪದೆ ಇರುವನೋ ಆ ಜನಾಂಗವನ್ನು ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ದಂಡಿಸುತ್ತಾ ಬಂದು, ಕಡೆಯಲ್ಲಿ ಅವನ ಕೈಯಿಂದಲೇ ನಿರ್ಮೂಲ ಮಾಡಿಸುವೆನು’ ಇದು ಯೆಹೋವನ ನುಡಿ.


ಇದಲ್ಲದೆ ಯೆರೆಮೀಯನು ಹೆಂಗಸರಿಗೂ, ಎಲ್ಲಾ ಜನರಿಗೂ ಹೀಗೆ ಹೇಳಿದನು, “ಐಗುಪ್ತದಲ್ಲಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು