Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 42:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಐಗುಪ್ತಕ್ಕೆ ಹೋಗಿ ಅಲ್ಲಿ ವಾಸಿಸಲು ಹಟಹಿಡಿಯುವ ಎಲ್ಲಾ ಜನರಿಗೂ ಇದೇ ಗತಿಯಾಗುವುದು; ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವರು. ನಾನು ಅವರಿಗೆ ಬರಮಾಡುವ ವಿಪತ್ತಿನಿಂದ ಯಾರೂ ತಪ್ಪಿಸಿಕೊಳ್ಳರು, ಯಾರೂ ಉಳಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಈಜಿಪ್ಟಿಗೆ ಹೋಗಿ ಅಲ್ಲೆ ವಾಸಿಸಲು ಹಟಹಿಡಿಯುವ ಎಲ್ಲ ಜನರಿಗೂ ಇದೇ ಗತಿಯಾಗುವುದು. ಖಡ್ಗ-ಕ್ಷಾಮ-ವ್ಯಾಧಿಯಿಂದ ಅವರು ಸಾಯುವರು. ನಾನು ಬರಮಾಡುವ ವಿಪತ್ತಿನಿಂದ ಅವರಾರೂ ತಪ್ಪಿಸಿಕೊಳ್ಳರು, ಯಾರೂ ಉಳಿಯರು’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಐಗುಪ್ತಕ್ಕೆ ಹೋಗಿ ಅಲ್ಲಿ ವಾಸಿಸಲು ಹಟಹಿಡಿಯುವ ಎಲ್ಲಾ ಜನರಿಗೂ ಇದೇ ಗತಿಯಾಗುವದು; ಖಡ್ಗಕ್ಷಾಮವ್ಯಾಧಿಗಳಿಂದ ಸಾಯುವರು; ನಾನು ಅವರಿಗೆ ಬರಮಾಡುವ ವಿಪತ್ತಿನಿಂದ ಯಾರೂ ತಪ್ಪಿಸಿಕೊಳ್ಳರು, ಯಾರೂ ಉಳಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಈಜಿಪ್ಟಿಗೆ ಹೋಗಿ ಅಲ್ಲಿ ನೆಲೆಸಬೇಕೆಂದು ನಿಶ್ಚಯಿಸಿದವರೆಲ್ಲರೂ ಖಡ್ಗದಿಂದಾಗಲಿ ಹಸಿವಿನಿಂದಾಗಲಿ ಭಯಂಕರ ವ್ಯಾಧಿಯಿಂದಾಗಲಿ ಸತ್ತುಹೋಗುವರು. ಈಜಿಪ್ಟಿಗೆ ಹೋದವರಲ್ಲಿ ಒಬ್ಬನೂ ಬದುಕಿರಲಾರ. ನಾನು ಅವರಿಗೆ ಉಂಟುಮಾಡುವ ಪೀಡೆಯಿಂದ ಒಬ್ಬನೂ ತಪ್ಪಿಸಿಕೊಳ್ಳಲಾರ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಈಜಿಪ್ಟಿಗೆ ಹೋಗಿ ಅಲ್ಲಿ ವಾಸಿಸುವ ಹಾಗೆ ತಮ್ಮ ಮುಖಗಳನ್ನಿಡುವ ಮನುಷ್ಯರಿಗೆಲ್ಲಾ ಹೀಗಾಗುವುದು. ಅವರು ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಸಾಯುವರು. ನಾನು ಅವರ ಮೇಲೆ ಬರಮಾಡುವ ಕೇಡಿಗೆ ತಪ್ಪಿಸಿಕೊಂಡು ಉಳಿಯುವವನು ಒಬ್ಬನೂ ಅವರೊಳಗೆ ಇರುವುದಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 42:17
7 ತಿಳಿವುಗಳ ಹೋಲಿಕೆ  

ನೀವು ಯಾವ ಸ್ಥಳದಲ್ಲಿ ವಾಸಮಾಡಲು ಅಪೇಕ್ಷಿಸಿ ಹೋಗುತ್ತೀರೋ ಆ ಸ್ಥಳದಲ್ಲೇ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವಿರಿ ಎಂದು ಖಂಡಿತವಾಗಿ ತಿಳಿಯಿರಿ” ಎಂದು ಹೇಳಿದನು.


ಖಡ್ಗಕ್ಕೆ ತಪ್ಪಿಸಿಕೊಂಡವರು ಸ್ವಲ್ಪ ಜನ ಮಾತ್ರವೇ ಆಗಿ ಐಗುಪ್ತದಿಂದ ಯೆಹೂದಕ್ಕೆ ಹಿಂದಿರುಗುವರು; ಆಗ ಐಗುಪ್ತಕ್ಕೆ ಹೋಗಿ ಪ್ರವಾಸಿಸುತ್ತಿರುವ ಯೆಹೂದದ ಉಳಿದ ಜನರೆಲ್ಲರೂ ನನ್ನ ಮಾತು ನಡೆಯುವುದೋ ಅಥವಾ ತಮ್ಮ ಮಾತು ನಡೆಯುವುದೋ ಎಂದು ತಿಳಿದುಕೊಳ್ಳುವರು.


ನಾನು ಅವರಿಗೂ ಅವರ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗಿಂದ ಅವರು ನಿರ್ಮೂಲರಾಗುವ ತನಕ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು” ಎಂದು ಹೇಳುತ್ತಾನೆ.


ಯೆರೆಮೀಯನು ಸಮಸ್ತ ಜನರಿಗೆ, “ಯೆಹೋವನು ಇಂತೆನ್ನುತ್ತಾನೆ, ಪಟ್ಟಣದಲ್ಲಿ ನಿಲ್ಲುವವನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವನು; ಪಟ್ಟಣವನ್ನು ಬಿಟ್ಟುಹೋಗಿ ಕಸ್ದೀಯರನ್ನು ಮೊರೆಹೋಗುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಉಳಿಸಿಕೊಂಡು ಹೋಗಿ ಬದುಕುವನು.


ಯೆಹೂದ್ಯರಲ್ಲಿ ಉಳಿದವರೇ, ಯೆಹೋವನ ವಾಕ್ಯವನ್ನು ಈಗ ಕೇಳಿರಿ, ‘ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀವು ಐಗುಪ್ತಕ್ಕೆ ಹೋಗಬೇಕೆಂದು ಹಟಹಿಡಿದು ಅಲ್ಲಿಗೆ ಸೇರಿ ವಾಸಮಾಡುವುದಾದರೆ,


ಖಡ್ಗಕ್ಕೆ ಹೆದರಿದ ನಿಮ್ಮನ್ನೇ ಖಡ್ಗಕ್ಕೆ ಗುರಿಮಾಡುವೆನು’” ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು