Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 42:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರು ಅವನಿಗೆ, “ದಯಮಾಡು, ನಮ್ಮ ಬಿನ್ನಹವನ್ನು ಲಾಲಿಸು; ನಿನ್ನ ಕಣ್ಣಿಗೆ ಕಾಣುವ ಪ್ರಕಾರ ಅಪಾರ ಜನರಲ್ಲಿ ನಾವು ಕೆಲವರು ಮಾತ್ರ ಉಳಿದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ದಯಮಾಡಿ ನಮ್ಮ ಬಿನ್ನಹವನ್ನು ಆಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಎಲ್ಲಾ ಜನರೂ ಪ್ರವಾದಿಯಾದ ಯೆರೆಮೀಯನ ಬಳಿಗೆ ಬಂದು ಅವನಿಗೆ - ದಯಮಾಡು, ನಮ್ಮ ಬಿನ್ನಹವನ್ನು ಲಾಲಿಸು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವರೆಲ್ಲರೂ ಅವನಿಗೆ, “ಯೆರೆಮೀಯನೇ, ನಮ್ಮ ಬೇಡಿಕೆಯನ್ನು ದಯವಿಟ್ಟು ಕೇಳು. ಯೆಹೂದ ಕುಲದಲ್ಲಿ ಅಳಿದುಳಿದ ಎಲ್ಲಾ ಜನರಿಗಾಗಿ ನಿನ್ನ ದೇವರಾದ ಯೆಹೋವನನ್ನು ಪ್ರಾರ್ಥಿಸು. ಯೆರೆಮೀಯನೇ, ನಮ್ಮಲ್ಲಿ ಈಗ ಬಹಳ ಜನ ಉಳಿದಿಲ್ಲವೆಂಬುದು ನಿನಗೆ ಗೊತ್ತಿದೆ. ಒಂದು ಕಾಲದಲ್ಲಿ ನಾವು ಬಹಳ ಜನರಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಪ್ರವಾದಿಯಾದ ಯೆರೆಮೀಯನಿಗೆ, “ನಮ್ಮ ವಿಜ್ಞಾಪನೆ ನಿಮ್ಮ ಮುಂದೆ ಬರಲಿ. ನಿನ್ನ ಕಣ್ಣುಗಳು ನಮ್ಮನ್ನು ನೋಡುವ ಪ್ರಕಾರ, ನಾವು ಅನೇಕರೊಳಗಿಂದ ಕೆಲವರೇ ಉಳಿದಿದ್ದೇವಲ್ಲಾ? ನಮಗೋಸ್ಕರವೂ ಎಂದರೆ ಈ ಸಮಸ್ತ ಶೇಷಕ್ಕೋಸ್ಕರವೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 42:2
34 ತಿಳಿವುಗಳ ಹೋಲಿಕೆ  

ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪ ಮತ್ತು ರೋಷಗಳು ಅಪಾರವಾಗಿವೆ” ಎಂದು ಅಪ್ಪಣೆಕೊಟ್ಟನು.


ನಿಮ್ಮ ಮೇಲೆ ಕಾಡುಮೃಗಗಳನ್ನು ಬರಮಾಡುವೆನು; ಅವು ನಿಮ್ಮ ಮಕ್ಕಳನ್ನು ಕದ್ದುಕೊಂಡು ಹೋಗುವವು, ನಿಮ್ಮ ಪಶುಗಳನ್ನು ಕೊಲ್ಲುವವು, ನಿಮ್ಮನ್ನು ಸ್ವಲ್ಪ ಜನರನ್ನಾಗಿ ಮಾಡುವವು; ನಿಮ್ಮ ದಾರಿಗಳು ಪಾಳು ಬೀಳುತ್ತದೆ.


ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.


ಅದಕ್ಕೆ ಸೀಮೋನನು, “ನೀವು ಹೇಳಿರುವ ಸಂಗತಿಗಳಲ್ಲಿ ಯಾವುದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ಕರ್ತನನ್ನು ಬೇಡಿಕೊಳ್ಳಿರಿ” ಎಂದು ಹೇಳಿದನು.


ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ! ಜನಾಂಗಗಳಲ್ಲಿ ರತ್ನವಾಗಿದ್ದವಳು ವಿಧವೆಯಾದಳು, ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವಳು ಗುಲಾಮಳಾದಳು.


ನಿನ್ನ ದೇವರಾದ ಯೆಹೋವನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ಕೇಳಿರುವನು, ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿತೀರಿಸಾನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಯೆಹೋವನನ್ನು ಪ್ರಾರ್ಥಿಸು’” ಎಂದು ಹೇಳಿದರು.


ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.


ಸಮುವೇಲನನ್ನು, “ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದ್ದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪ ಸೇರಿಕೊಂಡಿತು; ಆದ್ದರಿಂದ ನಿನ್ನ ಸೇವಕರಾದ ನಾವು ಸಾಯದಂತೆ ನಿನ್ನ ದೇವರಾದ ಯೆಹೋವನನ್ನು ಬೇಡಿಕೋ” ಎಂದು ವಿಜ್ಞಾಪಿಸಲು


“ನಮ್ಮ ದೇವರಾದ ಯೆಹೋವನು ನಮ್ಮನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀನು ನಮಗೋಸ್ಕರ ಆತನಿಗೆ ಮೊರೆಯಿಡು, ಸುಮ್ಮನಿರಬೇಡ” ಅಂದರು.


ಎನ್ನೊಡೆಯನೇ, ಅರಸನೇ, ಈಗ ದಯಮಾಡಿ ಲಾಲಿಸು; ಲೇಖಕನಾದ ಯೆಹೋನಾಥಾನನ ಮನೆಗೆ ನನ್ನನ್ನು ತಿರುಗಿ ಸೇರಿಸಬೇಡ, ಅಲ್ಲೇ ಸತ್ತೇನು, ನನ್ನ ಬಿನ್ನಹವು ನಿನಗೆ ಮುಟ್ಟಲಿ” ಎಂದು ಅರಿಕೆಮಾಡಿದನು.


ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲ, ಯಾಜಕ ಮಾಸೇಯನ ಮಗನಾದ ಚೆಫನ್ಯ ಇವರ ಮೂಲಕ, “ದಯಮಾಡಿ ನಮಗಾಗಿ ನಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸು” ಎಂದು ಪ್ರವಾದಿಯಾದ ಯೆರೆಮೀಯನಿಗೆ ಹೇಳಿಕಳುಹಿಸಿದನು.


ಅರಸನು ಆ ಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನು ಪ್ರಸನನ್ನಾಗುವಂತೆ ಬೇಡಿಕೊಂಡು ನಾನು ನನ್ನ ಕೈಯನ್ನು ಹಿಂತೆಗೆಯುವುದಕ್ಕಾಗುವ ಹಾಗೆ ಆತನನ್ನು ನನಗೋಸ್ಕರ ಪ್ರಾರ್ಥಿಸು” ಎಂದು ಕೇಳಿದನು. ದೇವರ ಮನುಷ್ಯನು ಯೆಹೋವನನ್ನು ಬೇಡಿಕೊಂಡಿದ್ದರಿಂದ ಅರಸನ ಕೈ ವಾಸಿಯಾಗಿ ಮುಂಚಿನಂತೆ ಆಯಿತು.


ನಕ್ಷತ್ರಗಳಷ್ಟು ಅಸಂಖ್ಯರಾಗಿರುವ ನೀವು ನಿಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಡದೆ ಹೋಗುವುದರಿಂದ ಸ್ವಲ್ಪ ಜನರಾಗಿಯೇ ಉಳಿಯುವಿರಿ.


ಅದಕ್ಕೆ ಫರೋಹನು ಅವರಿಗೆ, “ನಿಮ್ಮ ದೇವರಾದ ಯೆಹೋವನಿಗೆ ಅರಣ್ಯದಲ್ಲಿ ಯಜ್ಞಮಾಡುವಂತೆ ನಾನು ನಿಮಗೆ ಅಪ್ಪಣೆ ಕೊಡುತ್ತೇನೆ. ಆದರೆ ಬಹಳ ದೂರ ಹೋಗಬಾರದು. ನನಗೋಸ್ಕರ ಪ್ರಾರ್ಥನೆ ಮಾಡಿರಿ” ಎಂದನು.


ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಬ್ಬ ನರಪ್ರಾಣಿಯಾದರೂ ಉಳಿಯನು; ಆದರೆ ತಾನು ಆರಿಸಿಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು.


ನಾನು ಕೆಲವರನ್ನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಉಳಿಸಿ ಅವರು ತಮ್ಮ ಅಸಹ್ಯ ಕಾರ್ಯಗಳ ವಿಷಯವನ್ನು ತಾವು ಸೇರಿದ ಜನಾಂಗಗಳಲ್ಲಿ ತಿಳಿಸುವುದಕ್ಕೆ ಅವಕಾಶ ಮಾಡುವೆನು; ನಾನೇ ಯೆಹೋವನು ಎಂದು ಆ ಜನಾಂಗಗಳಿಗೂ ಗೊತ್ತಾಗುವುದು.”


ನಿಮ್ಮನ್ನು ನೀವೇ ಮೋಸಪಡಿಸಿಕೊಂಡಿದ್ದೀರಿ; ನೀವು ನನ್ನ ಬಳಿಗೆ ಬಂದು, ‘ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು; ನಮ್ಮ ದೇವರಾದ ಯೆಹೋವನು ಯಾವ ಅಪ್ಪಣೆ ಕೊಡುತ್ತಾನೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು’ ಎಂಬುದಾಗಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನನ್ನನ್ನು ಕಳುಹಿಸಿದಿರಲ್ಲಾ.


“ದಯಮಾಡಿ ಯೆಹೋವನ ಚಿತ್ತವೇನೆಂದು ಆತನನ್ನು ನಮಗೋಸ್ಕರ ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮ್ಮ ವಿರುದ್ಧವಾಗಿ ಯುದ್ಧ ಮಾಡುತ್ತಿದ್ದಾನಲ್ಲಾ; ಒಂದು ವೇಳೆ ಯೆಹೋವನು ತನ್ನ ಸಮಸ್ತ ಅದ್ಭುತಕಾರ್ಯಗಳಿಗೆ ಅನುಗುಣವಾಗಿ ನಮ್ಮ ಪಕ್ಷವನ್ನು ವಹಿಸಿ ಈ ಶತ್ರುವು ನಮ್ಮ ಕಡೆಯಿಂದ ತೊಲಗುವಂತೆ ಮಾಡಿಯಾನು” ಎಂದು ಅವರ ಮೂಲಕ ವಿಜ್ಞಾಪಿಸಿದಾಗ ಯೆಹೋವನಿಂದ ಯೆರೆಮೀಯನಿಗೆ ದೈವೋಕ್ತಿಯು ದೊರೆಯಿತು.


ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.


ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ, ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.


ಯೆಹೋವನು ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸುವನು; ಆತನು ನಿಮ್ಮನ್ನು ಓಡಿಸುವ ದೇಶಗಳ ಜನರ ಮಧ್ಯದಲ್ಲಿ ನೀವು ಸ್ವಲ್ಪ ಜನ ಮಾತ್ರ ಉಳಿಯುವಿರಿ.


ಈ ಭಯಂಕರವಾದ ಗುಡುಗು ಮತ್ತು ಆನೆಕಲ್ಲಿನ ಮಳೆಯೂ ಬಹಳ ಹೆಚ್ಚಾದವು. ಇವುಗಳನ್ನು ನಿಲ್ಲಿಸುವುದಕ್ಕೆ ಯೆಹೋವನನ್ನು ಪ್ರಾರ್ಥಿಸಿರಿ. ಈ ದೇಶವನ್ನು ಬಿಟ್ಟು ಹೊರಡುವುದಕ್ಕೆ ನಿಮಗೆ ಅಪ್ಪಣೆ ಕೊಡುತ್ತೇನೆ. ಇನ್ನು ನಿಮ್ಮನ್ನು ತಡೆಯುವುದಿಲ್ಲ” ಎಂದನು.


ಇದಕ್ಕೆ ಯೆಹೋವನು, “ನಿನಗೆ ಮೇಲಾಗುವಂತೆ ನಿಶ್ಚಯವಾಗಿ ನಿನ್ನನ್ನು ಬಿಡುಗಡೆಮಾಡುವೆನು. ನಿಜನಿಜವಾಗಿ ನಿನ್ನ ಕೇಡಿನಲ್ಲಿಯೂ, ಇಕ್ಕಟ್ಟಿನಲ್ಲಿಯೂ ಶತ್ರುವನ್ನು ನಿನಗೆ ಶರಣಾಗತನನ್ನಾಗಿ ಮಾಡುವೆನು.


ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ಯೆಹೋವನ ಆಲಯದ ಮೂರನೆಯ ಬಾಗಿಲಿಗೆ ಕರೆತರಿಸಿ, “ನಾನು ನಿನ್ನನ್ನು ಒಂದು ಮಾತು ಕೇಳುವೆನು, ನನಗೆ ಸ್ವಲ್ಪವೂ ಮರೆಮಾಡಬೇಡ”


ಆಗ ಕಾರೇಹನ ಮಗನಾದ ಯೋಹಾನಾನ ಮಿಚ್ಪದಲ್ಲಿದ್ದ ಗೆದಲ್ಯನಿಗೆ, “ನಾನು ಹೋಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕೊಲ್ಲಲಿಕ್ಕೆ ಅಪ್ಪಣೆಯಾಗಲಿ; ಇದು ನಿನ್ನ ಅಪ್ಪಣೆ ಎಂದು ಯಾರಿಗೂ ತಿಳಿದು ಬರುವುದಿಲ್ಲ; ಅವನು ನಿನ್ನನ್ನು ಕೊಂದರೆ ನಿನ್ನ ಆಶ್ರಯದ ಯೆಹೂದ್ಯರೆಲ್ಲರೂ ದಿಕ್ಕಾಪಾಲಾಗಿ ಯೆಹೂದದ ಶೇಷವು ನಿಶ್ಶೇಷವಾಗುವುದಲ್ಲಾ; ಏಕೆ ಹೀಗಾಗಬೇಕು?” ಎಂದು ರಹಸ್ಯವಾಗಿ ವಿಜ್ಞಾಪಿಸಿದನು.


ಅದು ಜನಾಂಗಗಳೊಳಗೆ ಜಾರರನ್ನು ಸಂಪಾದಿಸಿದರೂ, ಅದನ್ನು ನಾನು ಈಗ ಸೆರೆಗೆ ಒಳಪಡಿಸುವೆನು. ರಾಜಾಧಿರಾಜನು ಹೊರಿಸುವ ಹೊರೆಯಿಂದ ಅದು ಕುಗ್ಗಿಹೋಗಲಿಕ್ಕೆ ಆರಂಭವಾಗುವುದು.


ಅವು ದೇಶದ ಹುಲ್ಲನ್ನೆಲ್ಲಾ ತಿಂದುಬಿಟ್ಟ ಮೇಲೆ ನಾನು, “ಕರ್ತನಾದ ಯೆಹೋವನೇ, ಲಾಲಿಸು, ನನ್ನನ್ನು ಕ್ಷಮಿಸು. ಯಾಕೋಬ ಜನಾಂಗವು ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗ” ಎಂದು ವಿಜ್ಞಾಪಿಸಿಕೊಂಡೆನು.


ಹೇಗೆ ಯೆಹೋವನು ಈಗ ನಿಮ್ಮನ್ನು ಅಭಿವೃದ್ಧಿಪಡಿಸುವುದರಲ್ಲಿಯೂ, ಹೆಚ್ಚಿಸುವುದರಲ್ಲಿಯೂ ಸಂತೋಷಪಡುತ್ತಾನೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವುದರಲ್ಲಿ ಸಂತೋಷಪಟ್ಟು, ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದೊಳಗಿಂದ ನಿಮ್ಮನ್ನು ಕಿತ್ತುಹಾಕುವನು.


ನನ್ನ ವಿಜ್ಞಾಪನೆಯು ನಿನ್ನ ಸನ್ನಿಧಿಗೆ ಸೇರಲಿ, ನಿನ್ನ ನುಡಿಗೆ ತಕ್ಕಂತೆ ನನ್ನನ್ನು ರಕ್ಷಿಸು.


ನೀನು ಬಹು ವಿಷಯಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ, ಇವನ ಕಿವಿ ತೆರೆದಿದ್ದರೂ ಕೇಳನು.


ಅವರು ನನ್ನ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡಿದ್ದಾರೆ, ಆದರೆ ಅವರಿಗೆ ಕೇಡು ಸಂಭವಿಸಿದಾಗ, “ಎದ್ದು ನಮ್ಮನ್ನು ಉದ್ಧರಿಸು” ಎಂದು ಮೊರೆಯಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು