Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 42:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರು ಯೆರೆಮೀಯನಿಗೆ, “ನಿನ್ನ ದೇವರಾದ ಯೆಹೋವನು ನಿನ್ನ ಮೂಲಕ ನಮಗೆ ಕಳುಹಿಸುವ ಮಾತಿನಂತೆ ನಾವು ನಡೆಯದಿದ್ದರೆ ಯೆಹೋವನು ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಂತು ನಮ್ಮನ್ನು ಖಂಡಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅದಕ್ಕೆ ಅವರು ಯೆರೆಮೀಯನಿಗೆ, “ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮೂಲಕ ನಮಗೆ ಕಳಿಸುವ ಮಾತಿನಂತೆ ನಾವು ನಡೆಯದಿದ್ದರೆ, ಆ ಸರ್ವೇಶ್ವರನೇ ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಂತು, ನಮ್ಮನ್ನು ಖಂಡಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವರು ಯೆರೆಮೀಯನಿಗೆ - ನಿನ್ನ ದೇವರಾದ ಯೆಹೋವನು ನಿನ್ನ ಮೂಲಕ ನಮಗೆ ಕಳುಹಿಸುವ ಮಾತಿನಂತೆ ನಾವು ನಡೆಯದಿದ್ದರೆ ಯೆಹೋವನು ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಂತು ನಮ್ಮನ್ನು ಖಂಡಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಅವರು, “ನಿನ್ನ ದೇವರಾದ ಯೆಹೋವನು ಹೇಳಿದ ಎಲ್ಲವನ್ನು ನಾವು ಮಾಡದಿದ್ದಲ್ಲಿ ಯೆಹೋವನು ಸ್ವತಃ ನಮ್ಮ ವಿರುದ್ಧ ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಲ್ಲಲಿ. ನಾವು ಏನು ಮಾಡಬೇಕೆಂಬುದನ್ನು ತಿಳಿಸಲು ನಿನ್ನ ದೇವರಾದ ಯೆಹೋವನು ನಿನ್ನನ್ನು ಕಳುಹಿಸುತ್ತಾನೆಂದು ನಾವು ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಅವರು ಯೆರೆಮೀಯನಿಗೆ, “ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಯಾವ ವಿಷಯದಲ್ಲಿ ನಮ್ಮ ಬಳಿಗೆ ಕಳುಹಿಸುತ್ತಾರೋ, ಆ ಎಲ್ಲಾ ಮಾತುಗಳ ಪ್ರಕಾರ ನಾವು ಮಾಡದೆ ಹೋದರೆ, ಯೆಹೋವ ದೇವರು ನಮಗೆ ಸತ್ಯವಾದ ನಂಬಿಕೆಯುಳ್ಳ ಸಾಕ್ಷಿಯಾಗಿರಲಿ. ನಾವು ನಮ್ಮ ದೇವರಾದ ಯೆಹೋವ ದೇವರ ಸ್ವರವನ್ನು ಕೇಳುವಾಗ, ನಮಗೆ ಒಳ್ಳೆಯದಾಗುವ ಹಾಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 42:5
17 ತಿಳಿವುಗಳ ಹೋಲಿಕೆ  

ಮತ್ತು ಲಾಬಾನನು, “ನೀನು ನನ್ನ ಇಬ್ಬರು ಹೆಣ್ಣುಮಕ್ಕಳನ್ನು ನೋಯಿಸಿದರೆ ಅಥವಾ ಬೇರೆ ಸ್ತ್ರೀಯರನ್ನು ಮದುವೆ ಮಾಡಿಕೊಂಡರೆ ವಿಚಾರಿಸುವವರು ಮನುಷ್ಯರೊಳಗೆ ಯಾರೂ ಇಲ್ಲದಿದ್ದರೂ ದೇವರೇ ನಮ್ಮ ಒಡಂಬಡಿಕೆಗೆ ಸಾಕ್ಷಿ” ಎಂದನು.


ಅವರು ಅವನಿಗೆ, “ಹಾಗೆಯೇ ಮಾಡುವೆವು; ನಮ್ಮಿಬ್ಬರ ಈ ಮಾತುಗಳಿಗೆ ಯೆಹೋವನೇ ಸಾಕ್ಷಿ” ಎಂದು ಉತ್ತರಕೊಟ್ಟರು.


“ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ, ನಂಬಿಗಸ್ತನೂ, ಸತ್ಯ ಸಾಕ್ಷಿಯೂ, ದೇವರ ಸೃಷ್ಟಿಗೆ ಮೂಲನೂ ಆಗಿರುವ ‘ಆಮೆನ್’ ಎಂಬಾತನು ಹೇಳುವುದೇನಂದರೆ,


ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,


“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


“ಇದಕ್ಕೆ ಕಾರಣವೇನೆಂದು ಕೇಳುತ್ತೀರೋ? ನಿನಗೂ, ನಿನ್ನ ಯೌವನ ಪ್ರಾಯದ ಹೆಂಡತಿಗೂ ಆದ ಒಡಂಬಡಿಕೆಗೆ ಯೆಹೋವನೇ ಸಾಕ್ಷಿಯಾಗಿದ್ದಾನಲ್ಲಾ, ನಿನ್ನ ಸಹಚರಿಣಿಯೂ, ನಿನ್ನ ಒಡಂಬಡಿಕೆಯ ಪತ್ನಿಯಾದ ಆಕೆಗೆ ದ್ರೋಹಮಾಡಿದ್ದೀ.


ಜನಾಂಗಗಳೇ, ನೀವೆಲ್ಲರೂ ಕೇಳಿರಿ. ಭೂಮಂಡಲವೇ, ಭೂಮಿಯಲ್ಲಿರುವ ಸಮಸ್ತರೇ, ಕಿವಿಗೊಡಿರಿ, ಕರ್ತನಾದ ಯೆಹೋವನು ತನ್ನ ಪವಿತ್ರಾಲಯದೊಳಗಿಂದ ನಿಮಗೆ ವಿರುದ್ಧವಾಗಿ ಸಾಕ್ಷಿಕೊಡುತ್ತಾನೆ.


ನಾನು ಪ್ರಾರ್ಥನೆ ಮಾಡುವಾಗೆಲ್ಲಾ ಎಡೆಬಿಡದೆ ನಿಮಗೋಸ್ಕರ ವಿಜ್ಞಾಪನೆ ಮಾಡುತ್ತೇನೆ. ದೇವರ ಮಗನ ಸುವಾರ್ತೆಯನ್ನು ಸಾರುತ್ತಾ ದೈವಸೇವೆಯನ್ನು ಮನಃಪೂರ್ವಕವಾಗಿ ಮಾಡಿಕೊಂಡು ಬರುತ್ತಿರುವ ದೇವರೇ ನನಗೆ ಸಾಕ್ಷಿ.


ಜನರು, “ಯೆಹೋವನ ಜೀವದಾಣೆ” ಎಂದರೂ ಆ ಆಣೆಯು ಸುಳ್ಳೇ ಸುಳ್ಳು ಎಂದು ಯೆಹೋವನು ನುಡಿಯುತ್ತಾನೆ.


ಅನಂತರ ಯೋನಾತಾನನು ದಾವೀದನಿಗೆ, “ಸಮಾಧಾನದಿಂದ ಹೋಗು. ನಾವು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇವಲ್ಲಾ. ಆತನೇ ನನಗೂ ನಿನಗೂ, ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಾಕ್ಷಿಯಾಗಿರಲಿ” ಎಂದು ಹೇಳಿದನು. ತರುವಾಯ ದಾವೀದನು ಹೊರಟುಹೋದನು. ಯೋನಾತಾನನು ಊರೊಳಕ್ಕೆ ಹೋದನು.


ಸಮುವೇಲನು ಪುನಃ “ನೀವು ನನ್ನಲ್ಲಿ ಇಂಥದನ್ನೇನೂ ಕಾಣಲಿಲ್ಲ ಎಂಬುದಕ್ಕೆ ಯೆಹೋವನೂ ಆತನ ಅಭಿಷಿಕ್ತನೂ ಸಾಕ್ಷಿಯಾಗಿದ್ದಾರೆ” ಎಂದನು. ಅವರು, “ಹೌದು, ಯೆಹೋವನೇ ಸಾಕ್ಷಿಯಾಗಿದ್ದಾನೆ” ಎಂದು ಹೇಳಿದರು.


ಅವರು ಮೋಶೆಗೆ, “ನೀನೇ ನಮ್ಮ ಸಂಗಡ ಮಾತನಾಡು, ನಾವು ಕೇಳುತ್ತೇವೆ. ದೇವರು ನಮ್ಮ ಸಂಗಡ ಮಾತನಾಡಿದರೆ ನಾವು ಸತ್ತು ಹೋಗುತ್ತೇವೆ” ಎಂದು ಹೇಳಿದರು.


ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ಆಮೇಲೆ ಹೋಷಾಯನ ಮಗನಾದ ಅಜರ್ಯನೂ, ಕಾರೇಹನ ಮಗನಾದ ಯೋಹಾನಾನನೂ, ಸೊಕ್ಕೇರಿದವರೆಲ್ಲರೂ ಅವನಿಗೆ, “ನಿನ್ನ ಮಾತು ಸುಳ್ಳು, ‘ಐಗುಪ್ತಕ್ಕೆ ಹೋಗಿ ವಾಸಮಾಡಬಾರದು’ ಎಂದು ತಿಳಿಸುವಂತೆ ನಮ್ಮ ದೇವರಾದ ಯೆಹೋವನು ನಿನ್ನನ್ನು ಕಳುಹಿಸಲಿಲ್ಲ.


ಹೀಗೆ ಯೆಹೂದ ದೇಶದಲ್ಲಿಯೇ ವಾಸಮಾಡಿರಿ ಎನ್ನುವ ಯೆಹೋವನ ಮಾತನ್ನು ಕಾರೇಹನ ಮಗನಾದ ಯೋಹಾನಾನನೂ, ಸಮಸ್ತ ಸೇನಾಧಿಪತಿಗಳೂ ಮತ್ತು ಸಕಲಜನರೂ ಕೇಳದೆಹೋದರು.


ನಿಮ್ಮನ್ನು ನೀವೇ ಮೋಸಪಡಿಸಿಕೊಂಡಿದ್ದೀರಿ; ನೀವು ನನ್ನ ಬಳಿಗೆ ಬಂದು, ‘ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು; ನಮ್ಮ ದೇವರಾದ ಯೆಹೋವನು ಯಾವ ಅಪ್ಪಣೆ ಕೊಡುತ್ತಾನೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು’ ಎಂಬುದಾಗಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನನ್ನನ್ನು ಕಳುಹಿಸಿದಿರಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು