Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 42:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ನಿಮ್ಮ ವಿಜ್ಞಾಪನೆಯನ್ನು ಯೆಹೋವನಿಗೆ ಅರಿಕೆಮಾಡುವುದಕ್ಕಾಗಿ ನನ್ನನ್ನು ಕಳುಹಿಸಿದ್ದಿರಲ್ಲಾ; ಅದಕ್ಕೆ ಇಸ್ರಾಯೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ನಿಮ್ಮ ವಿಜ್ಞಾಪನೆಯನ್ನು ಸರ್ವೇಶ್ವರನಿಗೆ ಅರಿಕೆ ಮಾಡುವುದಕ್ಕಾಗಿ ನನ್ನನ್ನು ನೀವು ಕಳುಹಿಸಿದ್ದಿರಲ್ಲವೆ? ಅದಕ್ಕೆ ಇಸ್ರಯೇಲಿನ ದೇವರಾದ ಸರ್ವೇಶ್ವರ ಹೀಗೆನ್ನುತ್ತಾರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿಮ್ಮ ವಿಜ್ಞಾಪನೆಯನ್ನು ಯೆಹೋವನಿಗೆ ಅರಿಕೆ ಮಾಡುವದಕ್ಕಾಗಿ ನನ್ನನ್ನು ಕಳುಹಿಸಿದ್ದಿರಲ್ಲಾ; ಅದಕ್ಕೆ ಇಸ್ರಾಯೇಲಿನ ದೇವರಾದ ಯೆಹೋವನು ಹೀಗನ್ನುತ್ತಾನೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆರೆಮೀಯನು ಅವರಿಗೆ ಹೀಗೆ ಹೇಳಿದನು: “ಇಸ್ರೇಲರ ದೇವರಾದ ಯೆಹೋವನು ಹೀಗೆನ್ನುತ್ತಾನೆ. ನೀವು ನನ್ನನ್ನು ಆತನಲ್ಲಿಗೆ ಕಳುಹಿಸಿದಿರಿ. ನೀವು ಕೇಳೆಂದು ನನಗೆ ಹೇಳಿದ್ದನ್ನು ನಾನು ಯೆಹೋವನಿಗೆ ಕೇಳಿದೆ. ಯೆಹೋವನು ಹೀಗೆ ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರಿಗೆ ಹೇಳಿದ್ದೇನೆಂದರೆ, “ಯಾರ ಮುಂದೆ ನಿಮ್ಮ ವಿಜ್ಞಾಪನೆಯನ್ನು ತರುವುದಕ್ಕೆ ನನ್ನನ್ನು ಕಳುಹಿಸಿದ್ದೀರೋ, ಆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 42:9
6 ತಿಳಿವುಗಳ ಹೋಲಿಕೆ  

ಅವರು ಅವನಿಗೆ, “ದಯಮಾಡು, ನಮ್ಮ ಬಿನ್ನಹವನ್ನು ಲಾಲಿಸು; ನಿನ್ನ ಕಣ್ಣಿಗೆ ಕಾಣುವ ಪ್ರಕಾರ ಅಪಾರ ಜನರಲ್ಲಿ ನಾವು ಕೆಲವರು ಮಾತ್ರ ಉಳಿದಿದ್ದೇವೆ.


ಯೆಶಾಯನು ಅವರಿಗೆ, “ನೀವು ಹಿಂತಿರುಗಿ ಹೋಗಿ ನಿಮ್ಮ ರಾಜನಿಗೆ, ‘ಯೆಹೋವನು ಹೀಗೆ ಹೇಳುತ್ತಾನೆ, ನೀನು ಕೇಳಿದ ಮಾತುಗಳ ದೆಸೆಯಿಂದ ಹೆದರಬೇಡ, ಅಶ್ಶೂರದ ಅರಸನ ಸೇವಕರು ಆ ಮಾತುಗಳಿಂದ ನನ್ನನ್ನೇ ದೂಷಿಸಿದ್ದಾರೆ.


ಜೀವಸ್ವರೂಪನಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದನೆಯ ಮಾತುಗಳನ್ನು, ನಿನ್ನ ದೇವರಾದ ಯೆಹೋವನು ಕೇಳಿರುವನು. ನಿನ್ನ ದೇವರಾದ ಯೆಹೋವನು ತಾನು ಹೇಳಿದ ಮಾತುಗಳ ನಿಮಿತ್ತ ಮುಯ್ಯಿತೀರಿಸುವನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗಾಗಿಯಾದರೂ ಆತನನ್ನು ಪ್ರಾರ್ಥಿಸು ಎಂಬುದಾಗಿ ಹಿಜ್ಕೀಯನು ಹೇಳುತ್ತಾನೆ” ಎಂದು ಹೇಳಿರಿ ಅಂದನು.


ಆಗ ಅವನು ಕಾರೇಹನ ಮಗನಾದ ಯೋಹಾನಾನನನ್ನೂ, ಅವನೊಂದಿಗಿದ್ದ ಸಕಲ ಸೇನಾಧಿಪತಿಗಳನ್ನೂ, ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲಾ ಜನರನ್ನೂ ಕರೆದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು