ಯೆರೆಮೀಯ 43:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಮೇಲೆ ಹೋಷಾಯನ ಮಗನಾದ ಅಜರ್ಯನೂ, ಕಾರೇಹನ ಮಗನಾದ ಯೋಹಾನಾನನೂ, ಸೊಕ್ಕೇರಿದವರೆಲ್ಲರೂ ಅವನಿಗೆ, “ನಿನ್ನ ಮಾತು ಸುಳ್ಳು, ‘ಐಗುಪ್ತಕ್ಕೆ ಹೋಗಿ ವಾಸಮಾಡಬಾರದು’ ಎಂದು ತಿಳಿಸುವಂತೆ ನಮ್ಮ ದೇವರಾದ ಯೆಹೋವನು ನಿನ್ನನ್ನು ಕಳುಹಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅದಾದ ಮೇಲೆ ಹೋಷಾಯನ ಮಗ ಅಜರ್ಯನು, ಕಾರೇಹನ ಮಗ ಯೋಹಾನಾನನು, ಹಾಗು ಅಹಂಕಾರಿಗಳಾದ ಜನರೆಲ್ಲರು ಅವನಿಗೆ, “ನಿನ್ನ ಮಾತು ಸುಳ್ಳು, ಈಜಿಪ್ಟಿಗೆ ಹೋಗಿ ವಾಸಮಾಡಬಾರದು ಎಂದು ತಿಳಿಸುವಂತೆ ನಮ್ಮ ದೇವರಾದ ಸರ್ವೇಶ್ವರ ನಿನ್ನನ್ನು ಕಳಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಸೊಕ್ಕೇರಿದವರೆಲ್ಲರೂ ಅವನಿಗೆ - ನಿನ್ನ ಮಾತು ಸುಳ್ಳು; ಐಗುಪ್ತಕ್ಕೆ ಹೋಗಿ ವಾಸಮಾಡಬಾರದು ಎಂದು ತಿಳಿಸುವಂತೆ ನಮ್ಮ ದೇವರಾದ ಯೆಹೋವನು ನಿನ್ನನ್ನು ಕಳುಹಿಸಲಿಲ್ಲ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಮತ್ತು ಇನ್ನೂ ಕೆಲವರು ದುರಹಂಕಾರಿಗಳಾಗಿದ್ದರು ಮತ್ತು ಹಟಮಾರಿಗಳಾಗಿದ್ದರು. ಈ ಜನರು ಯೆರೆಮೀಯನ ಮೇಲೆ ಕೋಪಗೊಂಡು, “ಯೆರೆಮೀಯನೇ, ನೀನು ಸುಳ್ಳು ಹೇಳುತ್ತಿರುವೆ. ನಮ್ಮ ದೇವರಾದ ಯೆಹೋವನು ನಮಗೆ, ‘ನೀವು ಈಜಿಪ್ಟಿಗೆ ವಾಸಮಾಡಲು ಹೋಗಬಾರದು’ ಎಂದು ಹೇಳುವದಕ್ಕಾಗಿ ನಿನ್ನನ್ನು ಕಳುಹಿಸಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಹೋಷಾಯನ ಮಗನಾದ ಅಜರ್ಯನೂ, ಕಾರೇಹನ ಮಗನಾದ ಯೋಹಾನಾನನೂ, ಗರ್ವಿಷ್ಠ ಮನುಷ್ಯರೆಲ್ಲರೂ ಮಾತನಾಡಿ ಯೆರೆಮೀಯನಿಗೆ, “ನೀನು ಸುಳ್ಳು ಹೇಳುತ್ತೀ, ಅಲ್ಲಿ ಪ್ರವಾಸಿಯಾಗಿರುವುದಕ್ಕೆ ಈಜಿಪ್ಟಿಗೆ ಹೋಗಬಾರದೆಂದು ಹೇಳುವುದಕ್ಕೆ ನಮ್ಮ ದೇವರಾದ ಯೆಹೋವ ದೇವರು ನಿನ್ನನ್ನು ಕಳುಹಿಸಲಿಲ್ಲ. ಅಧ್ಯಾಯವನ್ನು ನೋಡಿ |