Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 43:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆತನು, “ನೀನು ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತೆಗೆದುಕೊಂಡು ಹೋಗಿ ತಹಪನೇಸಿನಲ್ಲಿರುವ ಫರೋಹನ ಮನೆಯ ಬಾಗಿಲ ಮುಂದೆ ಯೆಹೂದ್ಯರ ಕಣ್ಣೆದುರಿಗೆ ನೆಲಗಟ್ಟಿನ ಕೆಳಗೆ ಇಟ್ಟು ಗಾರೆಯಿಂದ ಮುಚ್ಚಿ ಬಿಟ್ಟು ಅವರಿಗೆ ಹೀಗೆ ಹೇಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ನೀನು ದೊಡ್ಡ ಕಲ್ಲುಗಳನ್ನು ಎತ್ತಿಕೊಂಡು ಹೋಗಿ ತಹಪನೇಸಿನಲ್ಲಿರುವ ಫರೋಹನ ಮನೆಯ ಮುಂದೆ, ಯೆಹೂದ್ಯರ ಕಣ್ಣೆದುರಿಗೆ, ನೆಲಗಟ್ಟಿನ ಕೆಳಗೆ ಇಟ್ಟು, ಗಾರೆಯಿಂದ ಮುಚ್ಚಿಬಿಟ್ಟು, ಆ ಜನರಿಗೆ ಹೀಗೆಂದು ಹೇಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀನು ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತೆಗೆದುಕೊಂಡು ಹೋಗಿ ತಹಪನೇಸಿನಲ್ಲಿರುವ ಫರೋಹನ ಮನೆಯ ಬಾಗಿಲ ಮುಂದೆ ಯೆಹೂದ್ಯರ ಕಣ್ಣೆದುರಿಗೆ ನೆಲಗಟ್ಟಿನ ಕೆಳಗೆ ಇಟ್ಟು ಗಾರೆಯಿಂದ ಮುಚ್ಚಿಬಿಟ್ಟು ಅವರಿಗೆ ಹೀಗೆ ಹೇಳು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಯೆರೆಮೀಯನೇ, ನೀನು ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತೆಗೆದುಕೊಂಡು ಹೋಗಿ ತಹಪನೇಸಿನಲ್ಲಿರುವ ಫರೋಹನ ಮನೆಯ ಬಾಗಿಲ ಮುಂದೆ ಹೂಳಿ ಗಾರೆಯಿಂದ ಮುಚ್ಚಿಬಿಡು. ಯೆಹೂದದ ಜನರ ಎದುರಿನಲ್ಲಿಯೇ ಹೀಗೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತೆಗೆದು ತಹಪನೇಸಿನಲ್ಲಿರುವ ಫರೋಹನ ಮನೆಯ ಪ್ರವೇಶದಲ್ಲಿರುವ ಇಟ್ಟಿಗೆ ಭಟ್ಟಿಯ ಮಣ್ಣಿನಲ್ಲಿ ಯೆಹೂದ್ಯರ ಮುಂದೆ ಬಚ್ಚಿಟ್ಟು, ಅವರಿಗೆ ಹೇಳತಕ್ಕದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 43:9
18 ತಿಳಿವುಗಳ ಹೋಲಿಕೆ  

ಆಗ ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ ಒಂದು ಕಲ್ಲನ್ನು ತೆಗೆದುಕೊಂಡು ಸಮುದ್ರದೊಳಗೆ ಬಿಸಾಡಿ, “ಮಹಾಪಟ್ಟಣವಾದ ಬಾಬೆಲನ್ನು ಹೀಗೆ ಹಿಂಸಾಚಾರದಿಂದ ಬಿಸಾಡುವನು. ಅದು ಇನ್ನೆಂದಿಗೂ ಕಾಣಿಸುವುದಿಲ್ಲ.


ತನ್ನ ಕೈಕಾಲುಗಳನ್ನು ಕಟ್ಟಿಕೊಂಡು; “ಈ ನಡುಕಟ್ಟು ಯಾವನದೋ ಅವನನ್ನು ‘ಯೆಹೂದ್ಯರು ಇದೇ ರೀತಿಯಾಗಿ ಯೆರೂಸಲೇಮಿನಲ್ಲಿ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸಿ ಕೊಡುವರು, ಎಂದು ಪವಿತ್ರಾತ್ಮನು ಹೇಳುತ್ತಾನೆಂಬುದಾಗಿ’” ಹೇಳಿದನು.


ಮುತ್ತಿಗೆಯ ಕಾಲಕ್ಕೆ ನೀರನ್ನು ಸೇದಿಟ್ಟುಕೋ, ನಿನ್ನ ಕೋಟೆಗಳನ್ನು ಬಲಪಡಿಸಿಕೋ; ಮಣ್ಣಿಗೆ ಇಳಿ, ಜೇಡಿಮಣ್ಣನ್ನು ತುಳಿ, ಇಟ್ಟಿಗೆಯ ಅಚ್ಚನ್ನು ಹಿಡಿ.


ನಾನು ಪ್ರವಾದಿಗಳಿಗೆ ನುಡಿದಿದ್ದೇನೆ, ಬಹಳ ದಿವ್ಯದರ್ಶನಗಳನ್ನು ದಯಪಾಲಿಸಿದ್ದೇನೆ. ಪ್ರವಾದಿಗಳ ಮೂಲಕ ಸೂಚಕಕಾರ್ಯಗಳನ್ನು ನಡೆಸಿದ್ದೇನೆ.


“ನರಪುತ್ರನೇ, ನೀನು ಒಂದು ಇಟ್ಟಿಗೆಯನ್ನು ತೆಗೆದುಕೊಂಡು ನಿನ್ನ ಮುಂದಿಟ್ಟುಕೊಂಡು, ಅದರ ಮೇಲೆ ಯೆರೂಸಲೇಮ್ ಪಟ್ಟಣದ ನಕ್ಷೆಯನ್ನು ಬರೆ.


ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಮಾಡುವ ಕೆಲಸಮಾಡುವುದಕ್ಕೂ ಇಟ್ಟಿಗೆಗಳನ್ನು ಮಾಡುವುದಕ್ಕೂ ಹಚ್ಚಿದರು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇಮಿಗೆ ಹೋದನು.


ಮಣ್ಣಿನ ಕೆಲಸದಲ್ಲಿಯೂ, ಇಟ್ಟಿಗೆಮಾಡುವ ಕೆಲಸದಲ್ಲಿಯೂ, ವ್ಯವಸಾಯದ ಎಲ್ಲಾ ವಿಧವಾದ ಕೆಲಸದಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಿತವನ್ನೇ ಬೇಸರಪಡಿಸಿದರು. ಐಗುಪ್ತರು ಇಸ್ರಾಯೇಲರಿಂದ ಮಾಡಿಸಿದ ಎಲ್ಲಾ ಕೆಲಸಗಳು ಬಹಳ ಕಠಿಣವಾಗಿದ್ದವು.


ಯೆರೆಮೀಯನು ತಹಪನೇಸಿನಲ್ಲಿರುವಾಗ ಯೆಹೋವನು ಈ ವಾಕ್ಯವನ್ನು ಅವನಿಗೆ ದಯಪಾಲಿಸಿದನು.


‘ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಬಾಬೆಲಿನ ಅರಸನೂ, ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಕರೆಯಿಸಿ, ನಾನು ಮರೆಮಾಡಿಸಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಹಾಕಿಸುವೆನು; ಅವನು ಈ ಕಲ್ಲುಗಳ ಮೇಲೆಯೇ ತನ್ನ ರತ್ನಗಂಬಳಿಯನ್ನು ಹಾಸುವನು.


ಅದೇನೆಂದರೆ, ಇಗೋ ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಪ್ರಾಣ ಹುಡುಕುತ್ತಿದ್ದ ಶತ್ರುವಾದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಕೈಗೆ ಕೊಟ್ಟಂತೆ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣ ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇದು ಯೆಹೋವನಾದ ನನ್ನ ನುಡಿ’” ಎಂಬುದೇ.


ಅದು ಈ ದಿನ ನೆರವೇರಿದೆ. ಇದರೊಂದಿಗೆ ಐಗುಪ್ತದ ಅರಸನಾದ ಫರೋಹನು, ಅವನ ಸೇವಕರು, ಪ್ರಧಾನರು, ಅವನ ಎಲ್ಲಾ ಜನರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು