Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು ಇಂದಿನವರೆಗೂ ತಗ್ಗಲಿಲ್ಲ, ನನಗೆ ಭಯಪಡಲಿಲ್ಲ; ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ನೇಮಿಸಿದ ನಿಯಮನಿಷ್ಠೆಗಳನ್ನು ಅನುಸರಿಸಿ ನಡೆಯಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವರು ಇಂದಿನವರೆಗೂ ಪಶ್ಚಾತ್ತಾಪಪಡಲಿಲ್ಲ. ನನಗೆ ಭಯಪಡಲಿಲ್ಲ. ನಿಮಗೂ ನಿಮ್ಮ ಪೂರ್ವಜರಿಗೂ ನಾನು ನೇಮಿಸಿದ ನಿಯಮನಿಷ್ಠೆಗಳನ್ನು ಅನುಸರಿಸಿ ನಡೆಯಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರು ಇಂದಿನವರೆಗೂ ತಗ್ಗಲಿಲ್ಲ, ನನಗೆ ಭಯಪಡಲಿಲ್ಲ; ನಾನು ನಿಮಗೂ ನಿಮ್ಮ ಪಿತೃಗಳಿಗೂ ನೇವಿುಸಿದ ನಿಯಮನಿಷ್ಠೆಗಳನ್ನು ಅನುಸರಿಸಿ ನಡೆಯಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇಂದಿನವರೆಗೂ ಯೆಹೂದದ ಜನ ತಮ್ಮನ್ನು ವಿನೀತರನ್ನಾಗಿ ಮಾಡಿಕೊಂಡಿಲ್ಲ. ಅವರು ನನ್ನ ಬಗ್ಗೆ ಎಳ್ಳಷ್ಟು ಗೌರವವನ್ನು ತೋರಿಸಿಲ್ಲ. ಆ ಜನರು ನನ್ನ ಉಪದೇಶಗಳಂತೆ ನಡೆದುಕೊಂಡಿಲ್ಲ. ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಧರ್ಮೋಪದೇಶಗಳನ್ನು ಅವರು ಪಾಲಿಸಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಈ ದಿನದವರೆಗೂ ಅವರು ತಗ್ಗಿಸಿಕೊಳ್ಳಲಿಲ್ಲ, ಭಯಪಡಲಿಲ್ಲ. ನಾನು ನಿಮ್ಮ ಮುಂದೆಯೂ, ನಿಮ್ಮ ತಂದೆಗಳ ಮುಂದೆಯೂ ಇಟ್ಟ ನನ್ನ ನಿಯಮದಲ್ಲಿ ನಡೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:10
38 ತಿಳಿವುಗಳ ಹೋಲಿಕೆ  

ಕೆಟ್ಟದನ್ನು ಮಾಡುವುದಕ್ಕೆ ಯಾವಾಗಲೂ ಭಯಪಡುವವನು ಧನ್ಯನು, ಕಠಿಣಹೃದಯನು ಕೇಡಿಗೆ ಸಿಕ್ಕಿಬೀಳುವನು.


ಕರ್ತನೇ, ನಿನಗೆ ಭಯಪಡದವರು ಮತ್ತು ನಿನ್ನ ನಾಮವನ್ನು ಮಹಿಮೆ ಪಡಿಸದವರು ಯಾರಾದರು ಇದ್ದಾರೆಯೇ? ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ನ್ಯಾಯತೀರ್ಪು ಬೆಳಕಿಗೆ ಬಂದುದರಿಂದ ಸರ್ವಜನಾಂಗಗಳು ನಿನ್ನ ಸನ್ನಿಧಾನಕ್ಕೆ ಬಂದು ನಿನ್ನನ್ನು ಆರಾಧಿಸುವರು.”


ಹೀಗಿರುವುದರಿಂದ ದೇವರ ಬಲವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ಎತ್ತುವನು.


ಅಸಹ್ಯ ಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ನುಡಿಯುತ್ತಾನೆ.


ನೀನು ಹೇಳುವುದು ನಿಜ. ಅವರು ನಂಬದೇ ಹೋದ್ದದರಿಂದ ಮುರಿದುಹಾಕಲ್ಪಟ್ಟರು. ನೀನು ನಿಂತಿರುವುದು ನಂಬಿಕೆಯಿಂದಲೇ.


ಅದಕ್ಕೆ ಎರಡನೆಯವನು ಅವನನ್ನು ಗದರಿಸಿ, “ನೀನು ಇದೇ ದಂಡನೆಯಲ್ಲಿರುವಾಗಲೂ ದೇವರಿಗೆ ಹೆದರುವುದಿಲ್ಲವೋ?


ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದೇವಕುಮಾರನಾಗಿದ್ದನು” ಅಂದರು.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.


ಯೆಹೋವನು ಕೂಗಿ ಅವನಿಗೆ, “ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯ ಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು” ಎಂದು ಅಪ್ಪಣೆಕೊಟ್ಟನು.


ಅರಸನಾಗಲಿ ಅಥವಾ ಸುರುಳಿಯ ಮಾತುಗಳನ್ನೆಲ್ಲಾ ಕೇಳಿದ ಅವನ ಸೇವಕರಲ್ಲಿ ಯಾರೇ ಆಗಲಿ ಭಯಪಡಲಿಲ್ಲ, ಬಟ್ಟೆಗಳನ್ನು ಹರಿದುಕೊಳ್ಳಲಿಲ್ಲ.


ಜನಾಂಗಗಳ ಅರಸನೇ, ಯಾರು ನಿನಗೆ ಹೆದರದೆ ಇದ್ದಾರು? ಇದು ನಿನಗೆ ತಕ್ಕದ್ದು; ಜನಾಂಗಗಳ ಜ್ಞಾನಿಗಳಲ್ಲಿಯೂ, ರಾಜಪರಂಪರೆಯಲ್ಲಿಯೂ ನಿನಗೆ ಸಮಾನನು ಯಾರೂ ಇಲ್ಲವಷ್ಟೆ.


ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಕೃಪಾಸತ್ಯತೆಗಳಿಂದ ಪಾಪನಿವಾರಣೆ, ಯೆಹೋವನ ಭಯಭಕ್ತಿಯಿಂದ ಹಾನಿನಿವಾರಣೆ.


ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು, ಜ್ಞಾನಹೀನನು ಸೊಕ್ಕಿನಿಂದ ಭಯವನ್ನು ಲಕ್ಷಿಸನು.


ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.


ಕುಗ್ಗಿದ ಮನಸ್ಸೇ ದೇವರಿಗೆ ಇಷ್ಟವಾದ ಯಜ್ಞ; ದೇವರೇ, ಪಶ್ಚಾತ್ತಾಪದಿಂದ ಜಜ್ಜಿಹೋದ ಮನಸ್ಸನ್ನು ನೀನು ತಿರಸ್ಕರಿಸುವುದಿಲ್ಲ.


ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ.


“ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ; ಈ ದೇಶದ ಮತ್ತು ಅದರ ನಿವಾಸಿಗಳ ವಿಷಯ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದಲೂ, ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.


ಅವನ ದೇವರಿಗೆ ಮಾಡಿದ ಪ್ರಾರ್ಥನೆಯೂ, ಅವನಿಗೆ ದೊರಕಿದ ಸದುತ್ತರವೂ, ಅವನು ತನ್ನನ್ನು ತಗ್ಗಿಸಿಕೊಳ್ಳುವುದಕ್ಕಿಂತ ಮೊದಲು ಮಾಡಿದ ಅಪರಾಧದ್ರೋಹಗಳೂ, ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ನಿರ್ಮಿಸಿ ಅಶೇರ ಸ್ತಂಭ ವಿಗ್ರಹ ಇವುಗಳನ್ನು ನಿಲ್ಲಿಸಿದ್ದೂ ದರ್ಶಕರ ಚರಿತ್ರೆಯಲ್ಲಿ ಬರೆದಿರುತ್ತವೆ.


ಆದರೆ ಆ ಕಷ್ಟದಲ್ಲಿ ಮನಸ್ಸೆಯು ತನ್ನ ದೇವರಾದ ಯೆಹೋವನ ಪ್ರಸನ್ನತೆಯನ್ನು ಬೇಡಿಕೊಂಡನು. ಅವನು ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನನ್ನು ಪ್ರಾರ್ಥಿಸಲು


ಆಗ ಹಿಜ್ಕೀಯನ ತನ್ನ ಗರ್ವವನ್ನು ಬಿಟ್ಟು, ಯೆರೂಸಲೇಮಿನವರೊಡನೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ಅವನ ಉಳಿದ ಜೀವಮಾನದಲ್ಲಿ ಯೆಹೋವನ ಕೋಪವು ಅವನ ಮೇಲೆ ಬರಲಿಲ್ಲ.


‘ನಾನು ಈ ದೇಶವನ್ನೂ, ನಿವಾಸಿಗಳನ್ನೂ, ಶಾಪವಿಸ್ಮಯಗಳಿಗೆ ಗುರಿಮಾಡುವೆನೆಂಬುವುದನ್ನು ನೀನು ಕೇಳಿದಾಗ, ದುಃಖಪಟ್ಟು ಯೆಹೋವನಾದ ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದಲೂ, ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು’


ಅವನು ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದ ನಾನು ಮುಂತಿಳಿಸಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡದೆ ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಅದನ್ನು ಬರಮಾಡುವೆನು” ಎಂದು ಹೇಳಿದನು.


ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವುದೇನೆಂದರೆ, ‘ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವುದು ಇನ್ನು ಎಲ್ಲಿಯವರೆಗೆ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.


ಆದರೂ ನೀನಾಗಲಿ, ನಿನ್ನ ಪರಿವಾರದವರಾಗಲಿ, ದೇವರಾಗಿರುವ ಯೆಹೋವನಿಗೆ ಆಗಲೂ ಭಯಪಡುವುದಿಲ್ಲವೆಂದು ಬಲ್ಲೆನು” ಎಂದನು.


ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ಅವರ ಮುಂದೆ, ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯಾ?


ಅವರು ದೇವರ ನಿಬಂಧನೆಯನ್ನು ಪಾಲಿಸಲಿಲ್ಲ, ಆತನ ಧರ್ಮಶಾಸ್ತ್ರವನ್ನು ಅನುಸರಿಸಲು ಮನಸ್ಸು ಮಾಡಲಿಲ್ಲ.


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು” ಎಂದು ಯೆಹೋವನು ನುಡಿಯುತ್ತಾನೆ.


ನೀನು ಅವರಿಗೆ, ‘ಯೆಹೋವನು ಇಂತೆನ್ನುತ್ತಾನೆ, ನೀವು ನನ್ನ ಕಡೆಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟಿರುವ ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯಬೇಕೆಂಬ ಮಾತನ್ನು ಕೇಳದೆ,


ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ಧರ್ಮಾನುಸಾರ ನಡೆಯಲಿಲ್ಲ; ನೀನು ಆಜ್ಞಾಪಿಸಿದವುಗಳಲ್ಲೆಲ್ಲಾ ಒಂದನ್ನೂ ಮಾಡಲಿಲ್ಲ. ಆದಕಾರಣ ನೀನು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಿ.


ನೀವು ಯೆಹೋವನ ಮಾತನ್ನು ಕೇಳದೆ ಆತನ ಧರ್ಮಶಾಸ್ತ್ರವನ್ನೂ, ನಿಬಂಧನೆಗಳನ್ನೂ, ಕಟ್ಟಳೆಗಳನ್ನೂ ಅನುಸರಿಸದೆ ಆತನಿಗೆ ಪಾಪ ಮಾಡಿ ಅನ್ಯದೇವತೆಗಳಿಗೆ ಧೂಪಹಾಕಿದ್ದರಿಂದಲೇ ಇಂಥಾ ಕೇಡು ನಿಮಗೆ ಸಂಭವಿಸಿದೆ” ಎಂದನು.


ಯಾಕೋಬನ್ನು ಸುಲಿಗೆಗೂ, ಇಸ್ರಾಯೇಲನ್ನು ಕೊಳ್ಳೆಗೂ ಕೊಟ್ಟವನು ಯಾರು? ಯಾರ ವಿರುದ್ಧವಾಗಿ ನಾವು ದ್ರೋಹಮಾಡಿದೆವೋ ಆ ಯೆಹೋವನಲ್ಲವೆ. ಅವರು ಆತನ ಮಾರ್ಗದಲ್ಲಿ ನಡೆಯಲಿಲ್ಲ. ಆತನ ಉಪದೇಶವನ್ನು ಕೇಳಲಿಲ್ಲ


ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ದುಃಖಪಡಲ್ಲಿಲ್ಲ, ಸಂಹರಿಸಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ. ತಮ್ಮ ಮುಖವನ್ನು ಕಲ್ಲಿಗಿಂತ ಕಠಿನಮಾಡಿಕೊಂಡು ಪಶ್ಚಾತ್ತಾಪಪಡದೆ ಹೋಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು