Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ಯೆರೂಸಲೇಮಿನವರನ್ನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ದಂಡಿಸಿದಂತೆ ಐಗುಪ್ತದಲ್ಲಿ ವಾಸಿಸುವವರನ್ನೂ ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಜೆರುಸಲೇಮಿನವರನ್ನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ದಂಡಿಸಿದಂತೆ ಈಜಿಪ್ಟಿನಲ್ಲಿ ವಾಸಿಸುವವರನ್ನೂ ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನು ಯೆರೂಸಲೇವಿುನವರನ್ನು ಖಡ್ಗಕ್ಷಾಮವ್ಯಾಧಿಗಳಿಂದ ದಂಡಿಸಿದಂತೆ ಐಗುಪ್ತದಲ್ಲಿ ವಾಸಿಸುವವರನ್ನೂ ದಂಡಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಈಜಿಪ್ಟಿನಲ್ಲಿ ವಾಸಿಸಲು ಹೋದ ಜನರನ್ನು ನಾನು ದಂಡಿಸುವೆನು. ಅವರನ್ನು ದಂಡಿಸಲು ನಾನು ಖಡ್ಗಗಳನ್ನು, ಹಸಿವನ್ನು ಮತ್ತು ಭಯಂಕರವಾದ ವ್ಯಾಧಿಗಳನ್ನು ಬಳಸುವೆನು. ನಾನು ಜೆರುಸಲೇಮ್ ನಗರವನ್ನು ದಂಡಿಸಿದಂತೆಯೇ ಅವರನ್ನು ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಾನು ಯೆರೂಸಲೇಮನ್ನು ಶಿಕ್ಷಿಸಿದ ಹಾಗೆ ಈಜಿಪ್ಟ್ ದೇಶದಲ್ಲಿ ವಾಸಮಾಡುವವರನ್ನು ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:13
11 ತಿಳಿವುಗಳ ಹೋಲಿಕೆ  

ಅವನು ಬಂದು ಐಗುಪ್ತ ದೇಶವನ್ನು ಹೊಡೆಯುವನು. ಮರಣಕ್ಕೆ ನೇಮಕವಾದವರು ಮರಣಕ್ಕೆ, ಸೆರೆಗೆ ನೇಮಕವಾದವರು ಸೆರೆಗೆ, ಖಡ್ಗಕ್ಕೆ ನೇಮಕವಾದವರು ಖಡ್ಗಕ್ಕೆ ಗುರಿಯಾಗುವರು.


ಇಗೋ, ಅವರನ್ನು ದಂಡಿಸುವೆನು, ಯೌವನಸ್ಥರು ಖಡ್ಗದಿಂದ ನಾಶವಾಗುವರು. ಅವರ ಗಂಡು ಮತ್ತು ಹೆಣ್ಣುಮಕ್ಕಳು ಕ್ಷಾಮದಿಂದ ಸಾಯುವರು.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನನ್ನ ಉಗ್ರರೋಷಾಗ್ನಿಯು ಯೆರೂಸಲೇಮಿನವರ ಮೇಲೆ ಹೇಗೆ ಸುರಿಯಿತೋ ಹಾಗೆಯೇ ನೀವು ಐಗುಪ್ತದಲ್ಲಿ ಕಾಲಿಟ್ಟ ಕೂಡಲೆ ನನ್ನ ರೋಷಾಗ್ನಿಯು ನಿಮ್ಮ ಮೇಲೆಯೂ ಸುರಿಯುವುದು; ನೀವು ಅಪವಾದ, ವಿಸ್ಮಯ, ಶಾಪ ಮತ್ತು ದೂಷಣೆಗಳಿಗೆ ಗುರಿಯಾಗುವಿರಿ; ಈ ಸ್ಥಳವು ಮತ್ತೆ ನಿಮ್ಮ ಕಣ್ಣಿಗೆ ಬೀಳದು.’”


ನಾನು ಅವರಿಗೂ ಅವರ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗಿಂದ ಅವರು ನಿರ್ಮೂಲರಾಗುವ ತನಕ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು” ಎಂದು ಹೇಳುತ್ತಾನೆ.


ಪಟ್ಟಣದಲ್ಲಿ ನಿಲ್ಲುವವನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸಾಯುವನು. ನಿಮ್ಮನ್ನು ಮುತ್ತುವ ಕಸ್ದೀಯರನ್ನು ಮೊರೆಹೋಗಲು ಪಟ್ಟಣವನ್ನು ಬಿಡುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗುವನು.


ಆಗ ನೀವು ಹೆದರುತ್ತಿರುವ ಖಡ್ಗವು ಐಗುಪ್ತದಲ್ಲಿಯೂ ನಿಮ್ಮನ್ನು ಹಿಂದಟ್ಟಿ ಹಿಡಿಯುವುದು, ನೀವು ಅಂಜುತ್ತಿರುವ ಕ್ಷಾಮವು ಅಲ್ಲಿಯೂ ನಿಮ್ಮ ಬೆನ್ನ ಹತ್ತುವುದು; ಅಲ್ಲೇ ಸಾಯುವಿರಿ.


ಐಗುಪ್ತಕ್ಕೆ ಹೋಗಿ ಅಲ್ಲಿ ವಾಸಿಸಲು ಹಟಹಿಡಿಯುವ ಎಲ್ಲಾ ಜನರಿಗೂ ಇದೇ ಗತಿಯಾಗುವುದು; ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವರು. ನಾನು ಅವರಿಗೆ ಬರಮಾಡುವ ವಿಪತ್ತಿನಿಂದ ಯಾರೂ ತಪ್ಪಿಸಿಕೊಳ್ಳರು, ಯಾರೂ ಉಳಿಯರು.


ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಗ್ರಸ್ತರಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು.


ಯೆಹೂದ್ಯರಲ್ಲಿ ಉಳಿದವರೇ, ಯೆಹೋವನ ವಾಕ್ಯವನ್ನು ಈಗ ಕೇಳಿರಿ, ‘ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀವು ಐಗುಪ್ತಕ್ಕೆ ಹೋಗಬೇಕೆಂದು ಹಟಹಿಡಿದು ಅಲ್ಲಿಗೆ ಸೇರಿ ವಾಸಮಾಡುವುದಾದರೆ,


ಆಹಾ, ಅವರು ವಿನಾಶದ ದೇಶವನ್ನು ಬಿಟ್ಟುಹೋಗುವರು; ಐಗುಪ್ತವು ಅವರಿಗೆ ಸ್ಮಶಾನವಾಗುವುದು, ಮೋಫ್ ಪಟ್ಟಣವು ಅವರನ್ನು ಹೂಣಿಡುವುದು; ಅವರ ಇಷ್ಟದ ಬೆಳ್ಳಿಯ ಒಡವೆಗಳು ಮುಳ್ಳು ಪೊದೆಗಳ ಪಾಲಾಗುವವು; ಮುಳ್ಳುಗಿಡಗಳು ಅವರ ಗುಡಾರಗಳಲ್ಲಿ ಹುಟ್ಟಿಕೊಳ್ಳುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು