ಯೆರೆಮೀಯ 44:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆದರೆ ನಾವು ಗಗನದ ಒಡತಿಗೆ ಧೂಪಹಾಕುವುದನ್ನೂ ಪಾನವನ್ನು ನೈವೇದ್ಯವಾಗಿ ಸುರಿಯುವುದನ್ನೂ ನಿಲ್ಲಿಸಿಬಿಟ್ಟಂದಿನಿಂದ ಎಲ್ಲಾ ಕೊರತೆಗೂ ಗುರಿಯಾಗಿ ಖಡ್ಗ, ಕ್ಷಾಮಗಳಿಂದ ನಾಶವಾಗುತ್ತಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆ ಗಗನದೊಡತಿಗೆ ಧೂಪಾರತಿ ಎತ್ತುವುದನ್ನೂ ಪಾನವನ್ನು ನೈವೇದ್ಯವಾಗಿ ಸುರಿಯುವುದನ್ನೂ ನಿಲ್ಲಿಸಿಬಿಟ್ಟಂದಿನಿಂದ ಎಲ್ಲಾ ತರಹದ ಕೊರತೆಗೆ ಗುರಿಯಾಗುತ್ತಿದ್ದೇವೆ, ಖಡ್ಗ-ಕ್ಷಾಮಗಳಿಂದ ನಾಶವಾಗುತ್ತಿದ್ದೇವೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆದರೆ ನಾವು ಗಗನದ ಒಡತಿಗೆ ಧೂಪಹಾಕುವದನ್ನೂ ಪಾನವನ್ನು ನೈವೇದ್ಯವಾಗಿ ಸುರಿಯುವದನ್ನೂ ನಿಲ್ಲಿಸಿಬಿಟ್ಟಂದಿನಿಂದ ಎಲ್ಲಾ ಕೊರತೆಗೂ ಗುರಿಯಾಗಿ ಖಡ್ಗಕ್ಷಾಮಗಳಿಂದ ನಾಶವಾಗುತ್ತಿದ್ದೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆಮೇಲೆ ನಾವು ಸ್ವರ್ಗದ ರಾಣಿಗೆ ನೈವೇದ್ಯ ಅರ್ಪಿಸುವದನ್ನು ಮತ್ತು ಪಾನನೈವೇದ್ಯವನ್ನು ನಿಲ್ಲಿಸಿದೆವು. ಅವಳನ್ನು ಪೂಜಿಸದೆ ಹಾಗೆಲ್ಲ ಮಾಡುವದನ್ನು ನಿಲ್ಲಿಸಿದಂದಿನಿಂದ ನಮಗೆ ಸಮಸ್ಯೆಗಳುಂಟಾದವು. ನಮ್ಮ ಜನರು ಖಡ್ಗ ಮತ್ತು ಹಸಿವುಗಳಿಗೆ ಬಲಿಯಾದರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆದರೆ ನಾವು ಗಗನದ ಒಡತಿಗೆ ಧೂಪ ಸುಡುವುದನ್ನೂ, ಪಾನಾರ್ಪಣೆಗಳನ್ನೂ ಅವಳಿಗೆ ಹೊಯ್ಯುವುದನ್ನೂ ಬಿಟ್ಟಂದಿನಿಂದ ನಮಗೆ ಎಲ್ಲಾ ಸಾಲದೆ ಹೋಯಿತು. ಖಡ್ಗದಿಂದಲೂ ಕ್ಷಾಮದಿಂದಲೂ ನಿರ್ಮೂಲವಾದೆವು.” ಅಧ್ಯಾಯವನ್ನು ನೋಡಿ |