ಯೆರೆಮೀಯ 44:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 “ನೀವು, ನಿಮ್ಮ ಪೂರ್ವಿಕರು, ನಿಮ್ಮ ಅರಸರು, ನಿಮ್ಮ ಪ್ರಧಾನರು, ಸಾಮಾನ್ಯ ಜನರು, ನೀವೆಲ್ಲರೂ ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ಹಾಕಿದ ಧೂಪವು ಯೆಹೋವನ ನೆನಪಿನಲ್ಲಿ ಇಲ್ಲವೋ, ಅದು ಆತನ ಜ್ಞಾಪಕಕ್ಕೆ ಬರಲಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನೀವು, ನಿಮ್ಮ ಪೂರ್ವಜರು, ನಿಮ್ಮ ಅರಸರು, ಅಧಿಕಾರಿಗಳು, ಜನಸಾಮಾನ್ಯರು ಮತ್ತು ನೀವೆಲ್ಲರು ಜುದೇಯದ ಊರುಗಳಲ್ಲೂ ಜೆರುಸಲೇಮಿನ ಬೀದಿಗಳಲ್ಲೂ ಎತ್ತಿದ ಧೂಪಾರತಿ ಸರ್ವೇಶ್ವರನ ನೆನಪಿನಲ್ಲಿ ಇದೆ ಅಲ್ಲವೆ? ಅದನ್ನು ಅವರು ಮರೆತುಬಿಟ್ಟಿದ್ದಾರೆಯೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನೀವು, ನಿಮ್ಮ ಪಿತೃಗಳು, ನಿಮ್ಮ ಅರಸರು, ನಿಮ್ಮ ಪ್ರಧಾನರು, ಸಾಮಾನ್ಯ ಜನರು, ನೀವೆಲ್ಲರೂ ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇವಿುನ ಬೀದಿಗಳಲ್ಲಿ ಹಾಕಿದ ಧೂಪವು ಯೆಹೋವನ ನೆನಪಿನಲ್ಲಿ ಇಲ್ಲವೋ, ಅದು ಆತನ ಜ್ಞಾಪಕಕ್ಕೆ ಬರಲಿಲ್ಲವೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ನೀವು ಯೆಹೂದದ ಪಟ್ಟಣಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ನೈವೇದ್ಯಗಳನ್ನು ಅರ್ಪಿಸಿದ ಸಂಗತಿ ಯೆಹೋವನ ಜ್ಞಾಪಕದಲ್ಲಿದೆ. ಅದನ್ನು ಮಾಡಿದ್ದೇ ನೀವು ಮತ್ತು ನಿಮ್ಮ ಪೂರ್ವಿಕರು, ನಿಮ್ಮ ರಾಜರು, ನಿಮ್ಮ ಅಧಿಕಾರಿಗಳು ಮತ್ತು ನಿಮ್ಮ ಪ್ರದೇಶದ ಜನರು. ನೀವು ಮಾಡಿದ್ದನ್ನೆಲ್ಲಾ ಆತನು ಜ್ಞಾಪಿಸಿಕೊಂಡನು; ತನ್ನ ನೆನಪಿಗೆ ತಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 “ನೀವೂ, ನಿಮ್ಮ ಪಿತೃಗಳೂ, ನಿಮ್ಮ ಅರಸರೂ, ನಿಮ್ಮ ಪ್ರಧಾನರೂ, ದೇಶದ ಜನರೂ ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಸುಟ್ಟ ಧೂಪವನ್ನೇ, ಯೆಹೋವ ದೇವರು ಜ್ಞಾಪಕ ಮಾಡಿಕೊಂಡಿದ್ದು ಅಲ್ಲವೋ? ಅಧ್ಯಾಯವನ್ನು ನೋಡಿ |