Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಐಗುಪ್ತದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ; ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಕರ್ತನಾದ ಯೆಹೋವನ ಜೀವದಾಣೆ ಎಂದು ನನ್ನ ಹೆಸರನ್ನು ಬಾಯಿಂದ ಎತ್ತಲಿಕ್ಕೆ ಐಗುಪ್ತದಲ್ಲಿ ಯಾವ ಯೆಹೂದ್ಯನೂ ಇನ್ನು ಇರುವುದಿಲ್ಲ ಎಂಬುದಾಗಿ ನನ್ನ ಮಹಾನಾಮದ ಮೇಲೆ ಆಣೆಯಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಈಜಿಪ್ಟಿನಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರು ಸರ್ವೇಶ್ವರನಾದ ನಾನು ಹೇಳುವ ಮಾತನ್ನು ಕೇಳಿರಿ: ‘ಸರ್ವೇಶ್ವರನಾದ ದೇವರ ಜೀವದಾಣೆ’ ಎಂದು ನನ್ನ ಹೆಸರನ್ನು ಬಾಯಿಂದ ಉಚ್ಚರಿಸಲಿಕ್ಕೆ ಈಜಿಪ್ಟಿನಲ್ಲಿ ಯಾವ ಯೆಹೂದ್ಯನು ಇನ್ನಿರನು ಎಂಬುದಾಗಿ ನನ್ನ ಮಹಾನಾಮದ ಮೇಲೆ ಆಣೆ ಇಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಐಗುಪ್ತದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ; ಯೆಹೋವನು ಇಂತೆನ್ನುತ್ತಾನೆ - ಆಹಾ, ಕರ್ತನಾದ ಯೆಹೋವನ ಜೀವದಾಣೆ ಎಂದು ನನ್ನ ಹೆಸರನ್ನು ಬಾಯಿಂದ ಎತ್ತಲಿಕ್ಕೆ ಐಗುಪ್ತದಲ್ಲಿ ಯಾವ ಯೆಹೂದ್ಯನೂ ಇನ್ನಿರನು ಎಂಬದಾಗಿ ನನ್ನ ಮಹಾನಾಮದ ಮೇಲೆ ಆಣೆಯಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದರೆ, ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಎಲ್ಲಾ ಯೆಹೂದ್ಯರೇ, ಯೆಹೋವನ ಸಂದೇಶವನ್ನು ಕೇಳಿರಿ. ‘ನಾನು ಆಣೆಮಾಡಿ ಹೀಗೆ ಹೇಳುತ್ತೇನೆ. ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಯೆಹೂದಿಯರಲ್ಲಿ ಯಾರೊಬ್ಬರೂ ಇನ್ನು ಮುಂದೆ ನನ್ನ ಹೆಸರಿನ ಮೇಲೆ ಆಣೆಯಿಟ್ಟು ಹೇಳಲಾರರು ಎಂದು ನಾನು ನನ್ನ ಮಹತ್ತಾದ ನಾಮದ ಮೇಲೆ ಆಣೆಯಿಟ್ಟುಕೊಂಡು ಹೇಳುತ್ತೇನೆ. ಇನ್ನು ಮುಂದೆ ಎಂದೂ ಅವರು “ದೇವರ ಆಣೆಯಾಗಿ” ಎಂದು ಹೇಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದರೆ, ಈಜಿಪ್ಟ್ ದೇಶದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವ ದೇವರ ವಾಕ್ಯವನ್ನು ಕೇಳಿರಿ: ‘ಇಗೋ, ನಾನು ನನ್ನ ಸ್ವಂತ ಹೆಸರಿನಿಂದ ಪ್ರಮಾಣ ಮಾಡಿದ್ದೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ, ‘ಈಜಿಪ್ಟ್‌ನಲ್ಲಿರುವ ಯಾವುದೇ ಯೆಹೂದದ ವ್ಯಕ್ತಿಯು ಪ್ರಮಾಣ ಮಾಡಲು ನನ್ನ ಶ್ರೇಷ್ಠ ಹೆಸರನ್ನು ಬಳಸಲು ಸಾಧ್ಯವಾಗುವುದಿಲ್ಲ. “ಸಾರ್ವಭೌಮ ಯೆಹೋವ ದೇವರ ಜೀವದಾಣೆ,” ಎಂದು ಮತ್ತೆಂದೂ ಅವರು ಹೇಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:26
28 ತಿಳಿವುಗಳ ಹೋಲಿಕೆ  

ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತಲೂ ಹೆಚ್ಚಿನವರು ಯಾರೂ ಇಲ್ಲದ್ದರಿಂದ ತನ್ನ ಮೇಲೆ ಆಣೆಯಿಟ್ಟು,


ಇಸ್ರಾಯೇಲ್ ವಂಶದವರೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಹೋಗಿರಿ, ನಿಮ್ಮ ವಿಗ್ರಹಗಳನ್ನು ಸೇವಿಸಿಕೊಳ್ಳಿರಿ; ಇನ್ನು ಮುಂದೆ ನನ್ನ ಮಾತನ್ನು ಕೇಳಿಯೇ ಕೇಳುವಿರಿ, ಇನ್ನು ಮೇಲಾದರೂ ನನ್ನ ಪರಿಶುದ್ಧ ನಾಮವನ್ನು ನಿಮ್ಮ ಬಲಿಗಳಿಂದಲೂ, ವಿಗ್ರಹಗಳಿಂದಲೂ ನೀವು ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.”


ದುಷ್ಟರಿಗಾದರೋ ದೇವರು ಹೇಳುವುದು ಏನೆಂದರೆ, “ನನ್ನ ವಿಧಿಗಳನ್ನು ಹೇಳುವುದಕ್ಕೆ ನಿಮಗೇನು ಬಾಧ್ಯತೆ ಉಂಟು? ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಚರಿಸುವುದೇಕೆ?


“ನೀನು ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೆ ಹಿಂದೆಗೆಯದೆ ಹೋದುದರಿಂದ, ಯೆಹೋವನಾದ ನಾನು ನಿನಗೆ ಪ್ರಮಾಣವಾಗಿ ಹೇಳುವುದೇನಂದರೆ


ಸೇನಾಧೀಶ್ವರ ದೇವರಾದ ಯೆಹೋವನ ನುಡಿಯನ್ನು ಕೇಳಿರಿ ಕರ್ತನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು ಹೀಗೆಂದಿದ್ದಾನೆ, “ನಾನು ಯಾಕೋಬಿನ ಅಟ್ಟಹಾಸಕ್ಕೆ ಅಸಹ್ಯಪಟ್ಟು; ಅದರ ಕೋಟೆಗಳನ್ನು ಹಗೆಮಾಡುತ್ತೇನೆ. ಆದುದರಿಂದ ನಾನು ರಾಜಧಾನಿಯನ್ನೂ, ಅದರ ಸಕಲ ಸಮೃದ್ಧಿಯನ್ನೂ ಆಪತ್ತಿಗೆ ಗುರಿಮಾಡುವೆನು”


ಜನರು, “ಯೆಹೋವನ ಜೀವದಾಣೆ” ಎಂದರೂ ಆ ಆಣೆಯು ಸುಳ್ಳೇ ಸುಳ್ಳು ಎಂದು ಯೆಹೋವನು ನುಡಿಯುತ್ತಾನೆ.


‘ಯೆಹೋವನ ಜೀವದಾಣೆ’ ಎಂದು ಸತ್ಯ, ನ್ಯಾಯ ಮತ್ತು ಧರ್ಮಾನುಸಾರವಾಗಿ ನೀನು ಪ್ರಮಾಣ ಮಾಡಿದರೆ, ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು” ಎಂದು ಹೇಳುತ್ತಾನೆ.


ದೇವರ ವಾಗ್ದಾನ ಮತ್ತು ಆಣೆ ಇವೆರಡೂ ನಿಶ್ಚಲವಾದ ಆಧಾರಗಳು ಏಕೆಂದರೆ ದೇವರು ಸುಳ್ಳಾಡುವವನಲ್ಲ. ಅದುದರಿಂದ ಆಶ್ರಯವನ್ನು ಹೊಂದಬೇಕೆಂದು ಓಡಿಬಂದು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಬಲವಾದ ಪ್ರೋತ್ಸಾಹ ಉಂಟಾಯಿತು.


ನನ್ನ ವಿಶ್ರಾಂತಿಯಲ್ಲಿ ನೀವು ಸೇರುವುದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನೂ? ಅವಿಧೇಯರನ್ನು ಕುರಿತಲ್ಲವೇ?


ಯೆಹೋವನು ಯಾಕೋಬಿನ ಮಹಿಮೆಯ ಮೇಲೆ ಹೀಗೆ ಆಣೆಯಿಟ್ಟಿದ್ದಾನೆ, “ಖಂಡಿತವಾಗಿ ಅವರ ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ಮರೆತುಬಿಡುವುದಿಲ್ಲ”


ಶವವನ್ನು ಸುಡಲು ಬಂದ ಸಂಬಂಧಿಕರು, ಹೆಣವನ್ನು ಮನೆಯೊಳಗಿಂದ ತೆಗೆದುಕೊಂಡು ಹೋದಾಗ, “ನಿಮ್ಮ ಹತ್ತಿರ ಇನ್ನೂ ಯಾರಾದರೂ ಇದ್ದಾರೋ?” ಎಂದು ಮನೆಯಲ್ಲಿರುವವರನ್ನು ಕೇಳುವಾಗ ಅವನು, “ಇಲ್ಲ” ಎನ್ನುವನು. ಆಗ ಸಂಬಂಧಿಕನು, “ಸುಮ್ಮನಿರು, ನಾವು ಯೆಹೋವನ ಹೆಸರನ್ನು ನೆನಪುಮಾಡಿಕೊಳ್ಳಬಾರದು.”


ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಇಗೋ, ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆಯೂ, ಸಮುದ್ರದಿಂದ ಎದ್ದಿರುವ ಕರ್ಮೆಲ್ ಬೆಟ್ಟದ ಹಾಗೂ ಉನ್ನತನಾದವನೊಬ್ಬನು ಬರುವನು.


ನೀವು ಈ ಮಾತುಗಳನ್ನು ಕೇಳದಿದ್ದರೆ ಈ ಅರಮನೆಯು ಹಾಳುಬೀಳುವುದು ಎಂದು ನನ್ನ ಮೇಲೆ ಆಣೆಯಿಡುತ್ತೇನೆ ಇದು ಯೆಹೋವನ ನುಡಿ” ಎಂಬುದೇ.


ನೀವು ಕಳ್ಳತನ, ಕೊಲೆ ಮತ್ತು ವ್ಯಭಿಚಾರಗಳನ್ನು ಮಾಡಿ ಸುಳ್ಳುಸಾಕ್ಷಿ ಹೇಳಿ, ಬಾಳನಿಗೆ ಹೋಮವನ್ನರ್ಪಿಸಿ, ಕಂಡುಕೇಳದ ಅನ್ಯದೇವತೆಗಳನ್ನು ಹಿಂಬಾಲಿಸಿದ ಮೇಲೆ,


ಯೆಹೋವನು ತನ್ನ ಬಲಗೈಯ ಮೇಲೆಯೂ, ತನ್ನ ಭುಜಬಲದ ಮೇಲೆಯೂ ಆಣೆಯಿಟ್ಟು, “ನಿನ್ನ ದವಸವನ್ನು ನಿನ್ನ ಶತ್ರುಗಳ ಆಹಾರಕ್ಕೆ ಇನ್ನು ಕೊಡುವುದೇ ಇಲ್ಲ. ನೀನು ಶ್ರಮಿಸಿ ಪಡೆದು ದ್ರಾಕ್ಷಾರಸವನ್ನು ಅನ್ಯರು ಕುಡಿಯುವುದೇ ಇಲ್ಲ;


ನನ್ನ ಒಡಂಬಡಿಕೆಯನ್ನು ಭಂಗಪಡಿಸುವುದಿಲ್ಲ; ನನ್ನ ಮಾತನ್ನು ಬದಲಿಸುವುದಿಲ್ಲ.


ನೀನು ಅವರಿಗೆ ಹೀಗೆ ಹೇಳಬೇಕು, ‘ಯೆಹೋವನು ಹೇಳುವುದೇನೆಂದರೆ, ನನ್ನ ಜೀವದಾಣೆ, ನೀವು ನನಗೆ ಕೇಳಿಸುವಂತೆ ಅಂದುಕೊಂಡ ಪ್ರಕಾರವೇ ನಾನು ಮಾಡುತ್ತೇನೆ; ನಿಮ್ಮ ಶವಗಳು ಈ ಅರಣ್ಯದಲ್ಲಿಯೇ ಬೀಳುವವು.


ಇದಲ್ಲದೆ ಯೆಹೋವನು, “ಯೆಹೂದದ ಅರಸನಾದ ಚಿದ್ಕೀಯ, ಅವನ ಪ್ರಧಾನರು, ಈ ದೇಶದಲ್ಲಿ ನಿಂತಿರುವ ಯೆರೂಸಲೇಮಿನವರ ಶೇಷ, ಐಗುಪ್ತ ದೇಶಕ್ಕೆ ವಲಸೆಯಾದವರು, ಕೆಟ್ಟು ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಇವರನ್ನು ತರುವೆನು.


ಇದಲ್ಲದೆ ಯೆರೆಮೀಯನು ಹೆಂಗಸರಿಗೂ, ಎಲ್ಲಾ ಜನರಿಗೂ ಹೀಗೆ ಹೇಳಿದನು, “ಐಗುಪ್ತದಲ್ಲಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ.


ಬೊಚ್ರವು ಹಾಳುಬಿದ್ದು ಪರಿಹಾಸ್ಯಕ್ಕೂ, ನಿಂದೆಗೂ ಶಾಪಕ್ಕೂ ಗುರಿಯಾಗಿದೆ. ಅದಕ್ಕೆ ಸೇರಿದ ಊರುಗಳೆಲ್ಲಾ ನಿತ್ಯನಾಶವನ್ನು ಹೊಂದುವವು ಎಂದು ನನ್ನ ಮೇಲೆ ಆಣೆಯಿಟ್ಟಿದ್ದೇನೆ. ಇದು ಯೆಹೋವನ ನುಡಿ.”


ಇಸ್ರಾಯೇಲೇ, ನೀನು ವ್ಯಭಿಚಾರಿಯಾಗಿ ನಡೆದರೂ ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ. ಯೆಹೂದ್ಯರೇ, ಗಿಲ್ಗಾಲಿಗೆ ಸೇರಬೇಡಿರಿ, ಬೇತ್ ಅವೆನಿಗೆ ಯಾತ್ರೆ ಹೋಗಬೇಡಿರಿ, “ಯೆಹೋವನ ಜೀವದಾಣೆ” ಎಂದು ಶಪಥ ಮಾಡಬಾರದು.


“ಆದಕಾರಣ ಇಸ್ರಾಯೇಲಿನ ದೇವರೂ, ಸೇನಾಧೀಶ್ವರನು ಆದ ಯೆಹೋವನು ಹೀಗೆನ್ನುತ್ತಾನೆ, ಆಹಾ, ಯೆಹೂದವನ್ನೆಲ್ಲಾ ನಿರ್ಮೂಲಮಾಡುವೆನು, ಕೇಡಿಗಾಗಿಯೇ ನಿಮ್ಮ ಮೇಲೆ ದೃಷ್ಟಿಯಿಡುವೆನು.


ಐಗುಪ್ತಕ್ಕೆ ಹೋಗಿ ಪ್ರವಾಸ ಮಾಡುತ್ತಿರುವ ಯೆಹೂದದ ಉಳಿದ ಜನರು ಸ್ವದೇಶಕ್ಕೆ ಹಿಂದಿರುಗಬೇಕೆಂದು ಎಷ್ಟು ಆಶಿಸಿದರೂ ಅವರಲ್ಲಿ ಯಾರೂ ಉಳಿದು ಅಲ್ಲಿಂದ ತಪ್ಪಿಸಿಕೊಂಡು ಯೆಹೂದಕ್ಕೆ ಹಿಂದಿರುಗುವುದಿಲ್ಲ; ಓಡಿಬರುವ ಸ್ವಲ್ಪ ಜನರೇ ಹೊರತು ಯಾರೂ ಹಿಂದಿರುಗುವುದಿಲ್ಲ.


ಸೇನಾಧೀಶ್ವರನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು, ‘ಖಂಡಿತವಾಗಿ ನಾನು ನಿನ್ನನ್ನು ಮಿಡತೆಗಳಷ್ಟು ಅಸಂಖ್ಯ ಜನರಿಂದ ತುಂಬಿಸುವೆನು, ಅವರು ನಿನ್ನ ಮೇಲೆ ಜಯಘೋಷಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು