Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನಾನು ನಿಮ್ಮನ್ನು ಈ ಸ್ಥಳದಲ್ಲಿ ದಂಡಿಸುವೆನು ಎಂಬುದಕ್ಕೆ ಒಂದು ಗುರುತು ಕಾಣುವುದು; ನನ್ನ ಮಾತುಗಳು ಈಡೇರಿ ನಿಮಗೆ ಕೇಡನ್ನು ಉಂಟುಮಾಡುವೆನು ಎಂಬುದಾಗಿ ಅದರಿಂದಲೇ ನಿಮಗೆ ತಿಳಿದುಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ‘ನಾನು ನಿಮ್ಮನ್ನು ಈ ಸ್ಥಳದಲ್ಲೇ ದಂಡಿಸುವೆನು ಎಂಬುದಕ್ಕೆ ಒಂದು ಗುರುತು ಕಾಣುವುದು. ನನ್ನ ಮಾತು ಈಡೇರಿ ನಿಮಗೆ ಕೇಡು ಉಂಟಾಗುವುದು ಎಂಬುದಾಗಿ ಅದರಿಂದಲೇ ನಿಮಗೆ ತಿಳಿದುಬರುವುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನಾನು ನಿಮ್ಮನ್ನು ಈ ಸ್ಥಳದಲ್ಲಿ ದಂಡಿಸುವೆನೆಂಬದಕ್ಕೆ ಒಂದು ಗುರುತು ಕಾಣುವದು; ನನ್ನ ಮಾತುಗಳು ಈಡೇರಿ ನಿಮಗೆ ಕೇಡನ್ನುಂಟುಮಾಡುವವು ಎಂಬದಾಗಿ ಅದರಿಂದಲೇ ನಿಮಗೆ ತಿಳಿದುಬರುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನಾನು ನಿಮ್ಮನ್ನು ಇಲ್ಲಿ ಈಜಿಪ್ಟಿನಲ್ಲಿ ದಂಡಿಸುತ್ತೇನೆಂದು ಪ್ರಮಾಣ ಮಾಡುತ್ತೇನೆ. ಆಗ ನಾನು ನಿಮ್ಮನ್ನು ದಂಡಿಸುವೆನೆಂದು ಮಾಡಿದ ಪ್ರತಿಜ್ಞೆ ಈಡೇರುವದೆಂದು ನಿಮಗೆ ತಿಳಿಯುವುದು.’ ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ ‘ನನ್ನ ಮಾತುಗಳು ನಿಮಗೆ ವಿರೋಧವಾಗಿ ಕೇಡಿಗಾಗಿ ನಿಶ್ಚಯವಾಗಿ ನಿಲ್ಲುವುವೆಂದು ನೀವು ತಿಳಿಯುವ ಹಾಗೆ ನಾನು ಈ ಸ್ಥಳದಲ್ಲಿ ನಿಮ್ಮನ್ನು ದಂಡಿಸುವೆನೆಂಬುದಕ್ಕೆ ಇದೇ ನಿಮಗೆ ಗುರುತು,’ ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:29
14 ತಿಳಿವುಗಳ ಹೋಲಿಕೆ  

ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ, ಯೆಹೋವನ ಸಂಕಲ್ಪವೇ ಈಡೇರುವುದು.


ಅದೇನೆಂದರೆ, ಇಗೋ ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಪ್ರಾಣ ಹುಡುಕುತ್ತಿದ್ದ ಶತ್ರುವಾದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಕೈಗೆ ಕೊಟ್ಟಂತೆ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣ ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇದು ಯೆಹೋವನಾದ ನನ್ನ ನುಡಿ’” ಎಂಬುದೇ.


ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು, ನಮ್ಮ ದೇವರ ಮಾತೋ ಸದಾಕಾಲವೂ ಇರುವುದು” ಎಂದು ಉತ್ತರವಾಯಿತು.


ಇದೆಲ್ಲಾ ನೆರವೇರುವುದೆಂಬುದಕ್ಕೆ ನಿನ್ನ ಮಕ್ಕಳಾದ ಹೊಫ್ನಿ ಹಾಗೂ ಫೀನೆಹಾಸರು ಒಂದೇ ದಿನದಲ್ಲಿ ಸಾಯುವುದೇ ಗುರುತಾಗಿರುವುದು.


“ನಿನ್ನ ದೇವರಾದ ಯೆಹೋವನಿಂದ ಒಂದು ಗುರುತನ್ನು ಕೇಳು. ಅದು ಪಾತಾಳದಷ್ಟು ಆಳದಲ್ಲಿದ್ದರೂ, ಮೇಲೆ ಎತ್ತರದಲ್ಲಿದ್ದರೂ ಅದನ್ನು ಕೇಳಿಕೋ” ಎಂದು ಹೇಳಿದನು.


ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.


ಆಹಾ, ನಾನೂ, ನನಗೆ ಯೆಹೋವನು ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರನಾದ ಯೆಹೋವನಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲರ ಮಧ್ಯದಲ್ಲಿದ್ದೇವೆ.


ಇಗೋ, ಆತನು ವಿವೇಕಿ, ತನ್ನ ಮಾತನ್ನು ಹಿಂದಕ್ಕೆ ತೆಗೆಯದೆ ಕೇಡನ್ನು ಬರಮಾಡುವನು. ಕೆಡುಕರ ಮನೆತನಕ್ಕೂ, ಅನ್ಯಾಯಗಾರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.


ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ಮತ್ತು ವಿಧಿಗಳೂ ನಿಮ್ಮ ಪೂರ್ವಿಕರನ್ನು ಹಿಂದಟ್ಟಿ ಹಿಡಿದು ಶಾಶ್ವತವಾಗಿ ಉಳಿದಿದೆ. ಅವರು ತಿರುಗಿಕೊಂಡು, ಸೇನಾಧೀಶ್ವರ ಯೆಹೋವನಿಗೆ ‘ನಮ್ಮ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ’” ಅಂದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು