ಯೆರೆಮೀಯ 44:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅದೇನೆಂದರೆ, ಇಗೋ ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಪ್ರಾಣ ಹುಡುಕುತ್ತಿದ್ದ ಶತ್ರುವಾದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಕೈಗೆ ಕೊಟ್ಟಂತೆ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣ ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇದು ಯೆಹೋವನಾದ ನನ್ನ ನುಡಿ’” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆ ಗುರುತು ಯಾವುದೆಂದರೆ: ಇಗೋ ಜುದೇಯದ ಅರಸ ಚಿದ್ಕೀಯನನ್ನು ಅವನ ಪ್ರಾಣ ಶತ್ರುವಾದ ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನ ಕೈ಼ಗೆ ಒಪ್ಪಿಸಿದಂತೆ ಈಜಿಪ್ಟಿನ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣ ಹುಡುಕುವ ಶತ್ರುಗಳ ಕೈಗೆ ಒಪ್ಪಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ’.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಅದೇನಂದರೆ - ಇಗೋ, ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಪ್ರಾಣ ಹುಡುಕುತ್ತಿದ್ದ ಶತ್ರುವಾದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಕೈಗೆ ಕೊಟ್ಟಂತೆ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣ ಹುಡುಕುವ ಶತ್ರುಗಳ ಕೈಗೆ ಕೊಡುವೆನು ಎಂಬದೇ; ಇದು ಯೆಹೋವನಾದ ನನ್ನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ನಾನು ಹೇಳಿದಂತೆ ಮಾಡುವೆನೆಂಬುದಕ್ಕೆ ಪ್ರಮಾಣ ಇದು. ಯೆಹೋವನು ಹೀಗೆ ಹೇಳಿದನು: ‘ಫರೋಹ ಹೊಫ್ರನೆಂಬುವನು ಈಜಿಪ್ಟಿನ ರಾಜನಾಗಿದ್ದಾನೆ. ಅವನ ಶತ್ರುಗಳು ಅವನನ್ನು ಕೊಲ್ಲಬಯಸುತ್ತಾರೆ. ನಾನು ಫರೋಹ ಹೊಫ್ರನನ್ನು ಅವನ ಶತ್ರುಗಳಿಗೆ ಒಪ್ಪಿಸುತ್ತೇನೆ. ಚಿದ್ಕೀಯನು ಯೆಹೂದದ ರಾಜನಾಗಿದ್ದನು. ನೆಬೂಕದ್ನೆಚ್ಚರನು ಚಿದ್ಕೀಯನ ವೈರಿಯಾಗಿದ್ದನು. ನಾನು ಚಿದ್ಕೀಯನನ್ನು ಅವನ ಶತ್ರುವಿನ ಕೈಗೆ ಒಪ್ಪಿಸಿದೆ. ಅದೇ ರೀತಿ ನಾನು ಫರೋಹ ಹೊಫ್ರನನ್ನು ಅವನ ವೈರಿಯ ಕೈಗೆ ಒಪ್ಪಿಸುತ್ತೇನೆ.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಶತ್ರುವಾದಂಥ ಅವನ ಪ್ರಾಣವನ್ನು ಹುಡುಕಿದಂಥ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಹೇಗೆ ಒಪ್ಪಿಸಿದೆನೋ, ಹಾಗೆಯೇ ಈಜಿಪ್ಟಿನ ಅರಸನಾದ ಫರೋಹ ಹೋಫ್ರನನ್ನು ಅವನ ಪ್ರಾಣವನ್ನು ಹುಡುಕುವ ಅವನ ಶತ್ರುಗಳ ಕೈಯಲ್ಲಿ ಒಪ್ಪಿಸುತ್ತೇನೆ.’ ” ಅಧ್ಯಾಯವನ್ನು ನೋಡಿ |