Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡ ಮಾಡದೆ ಕಳುಹಿಸುತ್ತಾ, ‘ಆಹಾ! ನಾನು ಹೇಸುವ ಈ ಅಸಹ್ಯಕಾರ್ಯವನ್ನು ಮಾಡಬೇಡಿರಿ’ ಎಂದು ಪ್ರಕಟಿಸುತ್ತಾ ಬಂದರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡಮಾಡದೆ ಕಳುಹಿಸುತ್ತಾಬಂದೆ. ‘ಎಚ್ಚರಿಕೆ, ನಾನು ಹೇಸುವ ಈ ಅಸಹ್ಯಕಾರ್ಯಗಳನ್ನು ಮಾಡಬೇಡಿ’ ಎಂದು ಪ್ರಕಟಿಸುತ್ತಾ ಬಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ಸಾವಕಾಶಮಾಡದೆ ಕಳುಹಿಸುತ್ತಾ - ಅಹಹ, ನಾನು ಹೇಸುವ ಈ ಅಸಹ್ಯಕಾರ್ಯವನ್ನು ಮಾಡಬೇಡಿರಿ ಎಂದು ಪ್ರಕಟಿಸುತ್ತಾ ಬಂದರೂ ಅವರು ಕಿವಿಗೊಟ್ಟು ಕೇಳಲಿಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ಮತ್ತೆಮತ್ತೆ ನನ್ನ ಪ್ರವಾದಿಗಳನ್ನು ಆ ಜನರಲ್ಲಿಗೆ ಕಳಿಸಿಕೊಟ್ಟೆ. ಆ ಪ್ರವಾದಿಗಳು ನನ್ನ ಸೇವಕರಾಗಿದ್ದರು. ಆ ಪ್ರವಾದಿಗಳು ನನ್ನ ಸಂದೇಶವನ್ನು ಜನರಿಗೆ ತಿಳಿಸಿ ‘ಈ ದುಷ್ಕೃತ್ಯವನ್ನು ಮಾಡಬೇಡಿರಿ, ನೀವು ಈ ವಿಗ್ರಹಗಳ ಪೂಜೆಮಾಡುವದನ್ನು ನಾನು ದ್ವೇಷಿಸುತ್ತೇನೆ’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಪುನಃ ಕಳುಹಿಸಿ, ‘ನಾನು ಹಗೆ ಮಾಡುವ ಈ ಅಸಹ್ಯವಾದ ಕಾರ್ಯವನ್ನು ಮಾಡಲೇಬೇಡಿರಿ!’ ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:4
24 ತಿಳಿವುಗಳ ಹೋಲಿಕೆ  

ನಿಮ್ಮ ಬಳಿಗೆ ನಾನು ತಪ್ಪದೆ ಕಳುಹಿಸುತ್ತಾ ಬಂದಿರುವ ನನ್ನ ಸೇವಕರಾದ ಪ್ರವಾದಿಗಳ ಮಾತುಗಳನ್ನು ಕೇಳದೆಯೂ ಇದ್ದರೆ,


“ನಿಮ್ಮ ಪೂರ್ವಿಕರು ಐಗುಪ್ತ ದೇಶದೊಳಗಿಂದ ಹೊರಟ ದಿನ ಮೊದಲುಗೊಂಡು ಈ ದಿನದವರೆಗೂ ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮವರ ಬಳಿಗೆ ಕಳುಹಿಸುತ್ತಾ ಬಂದಿದ್ದೇನೆ, ದಿನ ದಿನವೂ ತಡ ಮಾಡದೆ ಕಳುಹಿಸಿದ್ದೇನೆ.


ನಾನು ಸಾವಕಾಶ ಮಾಡದೆ ನಿಮಗೆ ನುಡಿದ ಮಾತುಗಳನ್ನು ನೀವು ಕೇಳದೆ, ನಿಮ್ಮನ್ನು ಕರೆದ ನನಗೆ ಉತ್ತರ ಕೊಡದೆ ಈ ಕೃತ್ಯಗಳನ್ನೆಲ್ಲಾ ನಡೆಸಿದಿರಿ.


ಯೆರೂಸಲೇಮು ಸುತ್ತಣ ಪಟ್ಟಣಗಳ ಸಮೇತ ಜನಭರಿತವಾಗಿಯೂ, ನೆಮ್ಮದಿಯಾಗಿಯೂ ಇದ್ದು, ದಕ್ಷಿಣ ಪ್ರಾಂತ್ಯದಲ್ಲಿಯೂ, ಪೂರ್ವದ ಇಳಕಲಿನ ಪ್ರದೇಶದಲ್ಲಿಯೂ ಜನರು ತುಂಬಿದ್ದಾಗ ಆ ಪೂರ್ವಕಾಲದ ಪ್ರವಾದಿಗಳ ಮೂಲಕ ಯೆಹೋವನು ಪ್ರಕಟಿಸಿದ ಮಾತುಗಳನ್ನು ನೀವು ಕೇಳಿಲ್ಲವೇ?’”


ಆದರೆ ನೀನು ನಡೆದ ದುರ್ಮಾರ್ಗವು ಅವರು ನಡೆದಂಥದಲ್ಲ, ನಿನ್ನ ಅಸಹ್ಯಕಾರ್ಯಗಳು ಅವರು ನಡೆಸಿದಂಥವುಗಳಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸರ್ವದಾ ಅವರಿಗಿಂತ ಬಹುಕೆಟ್ಟವಳಾಗಿ ನಡೆದುಕೊಂಡೆ.”


ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ, ಅಸಹ್ಯ ಮೃಗಗಳೂ ಮತ್ತು ಇಸ್ರಾಯೇಲ್ ವಂಶದವರು ಪೂಜಿಸುವ ಸಕಲ ಮೂರ್ತಿಗಳೂ ಆ ಗೋಡೆಯ ಸುತ್ತಲೂ ಚಿತ್ರಿಸಲ್ಪಟ್ಟಿದ್ದವು.


ಅವರು ನನ್ನ ಮಾತುಗಳನ್ನು ಕೇಳಲಿಲ್ಲವಲ್ಲಾ; ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಅವರ ಬಳಿಗೆ ತಪ್ಪದೆ ಕಳುಹಿಸಿ ಎಚ್ಚರಿಸುತ್ತಾ ಬಂದರೂ ಅವರು ಕೇಳಲೊಲ್ಲದೆ ಹೋದರು ಇದು ಯೆಹೋವನ ನುಡಿ.”


ಅವರ ಅಧರ್ಮಕ್ಕೂ, ಪಾಪಕ್ಕೂ ಎರಡರಷ್ಟು ಶಿಕ್ಷೆಯನ್ನು ಮೊದಲು ಕೊಡುವೆನು; ಹೆಣಗಳಂತಿರುವ ತಮ್ಮ ಹೇಯವಿಗ್ರಹಗಳಿಂದ ನನ್ನ ದೇಶವನ್ನು ಹೊಲಸುಮಾಡಿ, ನನ್ನ ಸ್ವತ್ತನ್ನು ತಮ್ಮ ಅಸಹ್ಯ ವಸ್ತುಗಳಿಂದ ತುಂಬಿಸಿದ್ದಾರಷ್ಟೆ.”


ಅವರ ಪೂರ್ವಿಕರ ದೇವರಾದ ಯೆಹೋವನು ತನ್ನ ಪ್ರಜೆಗಳನ್ನು, ತನ್ನ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಬಂದರು.


ನೀವು ಬಂಡುತನ, ದುರಾಶೆ, ಕುಡುಕತನ, ದುಂದೌತಣ, ಮದ್ಯಪಾನ ಗೋಷ್ಠಿ, ಅಸಹ್ಯವಾದ ವಿಗ್ರಹಾರಾಧನೆ, ಈ ಮೊದಲಾದವುಗಳನ್ನು ನಡಿಸುವುದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವುದರಲ್ಲಿಯೂ ಕಾಲಕಳೆದದ್ದು ಸಾಕು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಮಿತಿಮೀರಿದ ನಿನ್ನ ಕಾಮಾತುರ, ನಿನ್ನಲ್ಲಿ ವ್ಯಭಿಚಾರಮಾಡಿದ ನಿನ್ನ ಪ್ರಿಯರ ಮೂಲಕ ನಿನಗಾದ ಮಾನಭಂಗ, ನಿನ್ನ ಎಲ್ಲಾ ಅಸಹ್ಯ ವಿಗ್ರಹಗಳು, ನೀನು ಅವುಗಳಿಗೆ ಅರ್ಪಿಸಿದ ನಿನ್ನ ಮಕ್ಕಳ ರಕ್ತ,


ಇಗೋ, ನಾನು ಯೆಹೂದ್ಯರಿಗೂ, ಯೆರೂಸಲೇಮಿನವರೆಲ್ಲರಿಗೂ ಕೊಟ್ಟ ಶಾಪದ ಕೇಡನ್ನೆಲ್ಲಾ ಅವರ ಮೇಲೆ ಬರಮಾಡುವೆನು; ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ ಎಂದು ಸೇನಾಧೀಶ್ವರ ಸ್ವಾಮಿಯೂ, ಇಸ್ರಾಯೇಲರ ದೇವರೂ ಆದ ಯೆಹೋವನು ಅನ್ನುತ್ತಾನೆ” ಎಂಬುದೇ.


ಅವರು ನನಗೆ ಮುಖಕೊಡದೆ ಬೆನ್ನುಮಾಡಿದ್ದಾರೆ; ನಾನು ಎಡೆಬಿಡದೆ ಅವರಿಗೆ ಬೋಧಿಸುತ್ತಾ ಬಂದರೂ ಅವರು ಉಪದೇಶವನ್ನು ಹೊಂದಲಿಲ್ಲ ಮತ್ತು ನನಗೆ ಕಿವಿಗೊಡಲೇ ಇಲ್ಲ.


ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟು ಹೊಲೆ ಮಾಡಿದ್ದಾರೆ.


ತಮ್ಮ ಗಂಡು ಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗಾಗಿ ಆಹುತಿ ಕೊಡುವುದಕ್ಕೆ ಬೆನ್ ಹಿನ್ನೋಮ್ ತಗ್ಗಿನಲ್ಲಿನ ಬಾಳನ ಪೂಜಾಸ್ಥಳಗಳನ್ನು ಕಟ್ಟಿ, ಯೆಹೂದವನ್ನು ಪಾಪಕ್ಕೆ ಸಿಕ್ಕಿಸಿದ್ದಾರೆ; ನಾನು ಇಂಥ ಅಸಹ್ಯಕಾರ್ಯವನ್ನು ವಿಧಿಸಲಿಲ್ಲ, ಅದರ ಸಂಕಲ್ಪವೂ ನನ್ನ ಮನಸ್ಸಿನಲ್ಲಿ ಹುಟ್ಟಲಿಲ್ಲ” ಎಂಬುದೇ.


ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ, ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ನಮ್ಮ ಅರಸರು, ಪ್ರಧಾನರು, ಹಿರಿಯರು, ಸಾಮಾನ್ಯ ಜನರು, ಇವರಿಗೆಲ್ಲ ನಿನ್ನ ಹೆಸರಿನ ನಿಮಿತ್ತ ನುಡಿದ ನಿನ್ನ ಸೇವಕರಾದ ಪ್ರವಾದಿಗಳ ಕಡೆಗೆ ಕಿವಿಗೊಡಲೇ ಇಲ್ಲ.


ನೀನು ಅನೇಕ ವರ್ಷಗಳ ತನಕ ಅವರ ವಿಷಯದಲ್ಲಿ ತಾಳ್ಮೆಯುಳ್ಳವನಾಗಿ ಪ್ರವಾದಿಗಳ ಮುಖಾಂತರ ಮಾತನಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟೆ.


ನಮ್ಮ ಅರಸರೂ, ಪ್ರಭುಗಳೂ, ಯಾಜಕರೂ, ಹಿರಿಯರೂ ನಿನ್ನ ಧರ್ಮೋಪದೇಶವನ್ನು ಅನುಸರಿಸಲಿಲ್ಲ, ನಿನ್ನ ಆಜ್ಞೆಗಳಿಗೆ ಕಿವಿಗೊಡಲಿಲ್ಲ. ನೀನು ಎಚ್ಚರಿಸಿ ಹೇಳಿದ ಮಾತುಗಳನ್ನು ಗಮನಿಸಲಿಲ್ಲ.


ಇವರು ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡುವುದನ್ನು ನೀನು ನೋಡಲಿಲ್ಲವೋ?


ಗಗನದ ಒಡತಿಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಮಕ್ಕಳು ಸೌದೆಯನ್ನು ಆರಿಸುತ್ತಾರೆ, ತಂದೆಗಳು ಬೆಂಕಿಯನ್ನು ಹೊತ್ತಿಸುತ್ತಾರೆ, ಹೆಂಗಸರು ಕಣಕವನ್ನು ನಾದುತ್ತಾರೆ; ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ; ನನ್ನನ್ನು ಕೆಣಕಬೇಕೆಂದೇ ಇದನ್ನೆಲ್ಲಾ ಮಾಡುತ್ತಾರೆ.


“ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು ನಿಮ್ಮ ಹೃದಯವನ್ನೂ ಮತ್ತು ಸ್ವಭಾವವನ್ನೂ ನೂತನಪಡಿಸಿಕೊಳ್ಳಿರಿ; ಇಸ್ರಾಯೇಲ್ ವಂಶದವರೇ, ನೀವು ಸಾಯಬೇಕೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು