Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರು ಕಿವಿಗೊಟ್ಟು ಕೇಳಲಿಲ್ಲ, ಅನ್ಯದೇವತೆಗಳಿಗೆ ಧೂಪಹಾಕುವುದನ್ನು ನಿಲ್ಲಿಸಲಿಲ್ಲ, ತಮ್ಮ ದುರಾಚಾರವನ್ನು ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದರೂ ಅವರು ಕಿವಿಗೊಟ್ಟು ಕೇಳಲಿಲ್ಲ. ಅನ್ಯದೇವತೆಗಳಿಗೆ ಧೂಪಾರತಿ ಎತ್ತುವುದನ್ನು ನಿಲ್ಲಿಸಲಿಲ್ಲ. ತಮ್ಮ ದುರಾಚಾರವನ್ನು ಕೈಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅನ್ಯದೇವತೆಗಳಿಗೆ ಧೂಪಹಾಕುವದನ್ನು ನಿಲ್ಲಿಸಲಿಲ್ಲ, ತಮ್ಮ ದುರಾಚಾರವನ್ನು ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಆ ಜನರು ಪ್ರವಾದಿಗಳ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಅವರು ಆ ಪ್ರವಾದಿಗಳ ಕಡೆಗೆ ಗಮನ ಕೊಡಲಿಲ್ಲ. ಆ ಜನರು ತಮ್ಮ ದುಷ್ಟತನವನ್ನು ನಿಲ್ಲಿಸಲಿಲ್ಲ. ಅವರು ಬೇರೆ ದೇವರುಗಳಿಗೆ ಬಲಿ ಕೊಡುವುದನ್ನು ನಿಲ್ಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೆ ತಮ್ಮ ಕೆಟ್ಟತನದಿಂದ ತಿರುಗದೆ, ಬೇರೆ ದೇವರುಗಳಿಗೆ ಧೂಪಸುಡುವುದನ್ನು ಬಿಡದೆ ಕೇಳಲಿಲ್ಲ, ನೀವು ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:5
18 ತಿಳಿವುಗಳ ಹೋಲಿಕೆ  

ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ, ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ, ಆ ಮನೆಗಳೆಲ್ಲಾ ಹೊಲಸಾಗಿ ತೋಫೆತ್ ಎಂಬ ಸ್ಥಳಕ್ಕೆ ಸಮಾನವಾಗುವವು.’”


ನನ್ನ ಮಾತುಗಳನ್ನು ಕೇಳದಿದ್ದ ತಮ್ಮ ಪೂರ್ವಿಕರ ದುಷ್ಕೃತ್ಯಗಳ ಕಡೆಗೆ ತಿರುಗಿಕೊಂಡು, ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸಿದ್ದಾರೆ. ಇಸ್ರಾಯೇಲ್ ವಂಶದವರೂ ಮತ್ತು ಯೆಹೂದ ವಂಶದವರೂ ನಾನು ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ.


ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನೂ ತನ್ನ ತನ್ನ ದುಷ್ಟಹೃದಯದ ಹಟಕ್ಕೆ ತಕ್ಕ ಹಾಗೆ ನಡೆದನು; ಆದಕಾರಣ ಕೈಕೊಳ್ಳಬೇಕೆಂದು ನಾನು ಆಜ್ಞಾಪಿಸಿದರೂ ಅವರು ಕೈಗೊಳ್ಳದ ಈ ನಿಬಂಧನೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡಿದೆನು’” ಎಂದು ಹೇಳಿದನು.


ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಸ್ವಂತ ಆಲೋಚನೆಗಳನ್ನು ಅನುಸರಿಸಿ ತಮ್ಮ ದುಷ್ಟಹೃದಯದ ಹಟದಂತೆ ನಡೆದು ಹಿಂದಿರುಗಿಯೇ ಹೋದರು, ಮುಂದುವರಿಯಲಿಲ್ಲ.


ನೀನು ನನ್ನ ಆಜ್ಞೆಗಳನ್ನು ಕೇಳಿದ್ದರೆ ಎಷ್ಟೋ ಚೆನ್ನಾಗಿತ್ತು! ನಿನ್ನ ಸುಖವು ದೊಡ್ಡ ನದಿಯಂತೆಯೂ, ನಿನ್ನ ಕ್ಷೇಮವು ಸಮುದ್ರದ ಅಲೆಗಳ ಹಾಗೂ ಇರುತ್ತಿದ್ದವು.


ಏಕೆಂದರೆ ನೀನು ಹಟವಾದಿ ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು.


ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.


ನನ್ನ ಮಾತುಗಳನ್ನು ಕೇಳದೆ ತಮ್ಮ ಹೃದಯದ ಹಟದಂತೆ ನಡೆದು, ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸುತ್ತಿರುವ ಈ ದುಷ್ಟ ಜನರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಮಾನವಾಗಿರುವರು.


ಹೀಗೆ ಯೆಹೂದ ದೇಶದಲ್ಲಿಯೇ ವಾಸಮಾಡಿರಿ ಎನ್ನುವ ಯೆಹೋವನ ಮಾತನ್ನು ಕಾರೇಹನ ಮಗನಾದ ಯೋಹಾನಾನನೂ, ಸಮಸ್ತ ಸೇನಾಧಿಪತಿಗಳೂ ಮತ್ತು ಸಕಲಜನರೂ ಕೇಳದೆಹೋದರು.


ನಮ್ಮ ಅರಸರು, ಪ್ರಧಾನರು, ಹಿರಿಯರು, ಸಾಮಾನ್ಯ ಜನರು, ಇವರಿಗೆಲ್ಲ ನಿನ್ನ ಹೆಸರಿನ ನಿಮಿತ್ತ ನುಡಿದ ನಿನ್ನ ಸೇವಕರಾದ ಪ್ರವಾದಿಗಳ ಕಡೆಗೆ ಕಿವಿಗೊಡಲೇ ಇಲ್ಲ.


ನೀನು ಅನೇಕ ವರ್ಷಗಳ ತನಕ ಅವರ ವಿಷಯದಲ್ಲಿ ತಾಳ್ಮೆಯುಳ್ಳವನಾಗಿ ಪ್ರವಾದಿಗಳ ಮುಖಾಂತರ ಮಾತನಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟೆ.


ಯೆಹೂದದವರೇ, ನಿಮ್ಮ ಪಟ್ಟಣಗಳೆಷ್ಟೋ ನಿಮ್ಮ ದೇವರುಗಳೂ ಅಷ್ಟು. ಯೆರೂಸಲೇಮಿನ ಬೀದಿಗಳೆಷ್ಟೋ ತುಚ್ಛ ದೇವತೆಯಾದ ಬಾಳನಿಗೆ ಹೋಮ ಮಾಡುವುದಕ್ಕಾಗಿ ನೀವು ಮಾಡಿಕೊಂಡಿರುವ ಬಲಿಪೀಠಗಳೂ ಅಷ್ಟು.


ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಬಾಳನಿಗೆ ಹೋಮವನ್ನರ್ಪಿಸಿ, ನನ್ನನ್ನು ಕೆಣಕಿ ತಮಗೆ ಕೆಡುಕನ್ನು ಮಾಡಿಕೊಂಡಿದ್ದರಿಂದ ನಿನ್ನನ್ನು ನೆಟ್ಟ ಸೇನಾಧೀಶ್ವರನಾದ ಯೆಹೋವನು, “ನಿನಗೆ ಕೆಡುಕಾಗಲಿ” ಎಂದು ಶಪಿಸಿದ್ದಾನೆ.


ನಾನು ಕರೆದ ಹಾಗೆಲ್ಲಾ ನನ್ನ ಜನರು ದೂರದೂರ ಹೋಗುತ್ತಲೇ ಬಂದರು. ಬಾಳ್ ದೇವತೆಗಳಿಗೆ ಯಜ್ಞಮಾಡಿ, ಬೊಂಬೆಗಳಿಗೆ ಧೂಪ ಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು