ಯೆರೆಮೀಯ 44:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಹೀಗಿರಲು ಸೇನಾಧೀಶ್ವರಸ್ವಾಮಿಯೂ ಇಸ್ರಾಯೇಲಿನ ದೇವರೂ ಆದ ಯೆಹೋವನು ಈಗ ಇಂತೆನ್ನುತ್ತಾನೆ, ಈ ದೊಡ್ಡ ಕೇಡನ್ನು ನಿಮಗೆ ನೀವೇ ಉಂಟುಮಾಡಿಕೊಳ್ಳುವುದೇಕೆ? ಈ ದುರಾಚಾರದ ನಿಮಿತ್ತ ಯೆಹೂದದಲ್ಲಿರುವ ಗಂಡಸರು, ಹೆಂಗಸರು, ಮಕ್ಕಳು, ಮೊಲೆಕೂಸುಗಳು ನಿರ್ಮೂಲವಾಗುವರು, ನಿಮ್ಮಲ್ಲಿ ಯಾರೂ ಉಳಿಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 “ಹೀಗಿರಲು, ಸೇನಾಧೀಶ್ವರ ಸ್ವಾಮಿಯೂ ಇಸ್ರಯೇಲಿನ ದೇವರೂ ಆದ ಸರ್ವೇಶ್ವರ ಈಗ ಹೇಳುವುದನ್ನು ಕೇಳಿ: ‘ಈ ದೊಡ್ಡ ಕೇಡನ್ನು ನಿಮಗೆ ನೀವೆ ಬರಮಾಡಿಕೊಳ್ಳುವುದು ಸರಿಯೆ? ಈ ದುರಾಚಾರದ ನಿಮಿತ್ತ ಜುದೇಯದ ಗಂಡಸರು, ಹೆಂಗಸರು, ಮಕ್ಕಳು, ಮೊಲೆಕೂಸುಗಳು ನಿರ್ಮೂಲವಾಗುವರು. ನಿಮ್ಮಲ್ಲಿ ಯಾರೂ ಉಳಿಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಹೀಗಿರಲು ಸೇನಾಧೀಶ್ವರಸ್ವಾವಿುಯೂ ಇಸ್ರಾಯೇಲಿನ ದೇವರೂ ಆದ ಯೆಹೋವನು ಈಗ ಇಂತೆನ್ನುತ್ತಾನೆ - ಈ ದೊಡ್ಡ ಕೇಡನ್ನು ನಿಮಗೆ ನೀವೇ ಉಂಟುಮಾಡಿಕೊಳ್ಳುವದೇಕೆ? ಈ ದುರಾಚಾರದ ನಿವಿುತ್ತ ಯೆಹೂದದಲ್ಲಿರುವ ಗಂಡಸರು, ಹೆಂಗಸರು, ಮಕ್ಕಳು, ಮೊಲೆಕೂಸುಗಳು ನಿರ್ಮೂಲವಾಗುವರು, ನಿಮ್ಮಲ್ಲಿ ಯಾರೂ ಉಳಿಯರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: ವಿಗ್ರಹಗಳ ಪೂಜೆಮಾಡಿ ನಿಮ್ಮನ್ನು ನೀವೇ ಏಕೆ ತೊಂದರೆಗೀಡು ಮಾಡಿಕೊಳ್ಳುವಿರಿ? ಈ ದುರಾಚಾರದ ನಿಮಿತ್ತ ನೀವು ಯೆಹೂದ ಕುಟುಂಬದಿಂದ ಗಂಡಸರನ್ನು, ಹೆಂಗಸರನ್ನು, ಮಕ್ಕಳನ್ನು ಮತ್ತು ಕೂಸುಗಳನ್ನು ಅಗಲಿಸುತ್ತಿದ್ದೀರಿ. ಯೆಹೂದ ಕುಲದಿಂದ ಯಾರೂ ಉಳಿಯದಂತೆ ಮಾಡುತ್ತಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ಆದ್ದರಿಂದ ಈಗ ಇಸ್ರಾಯೇಲಿನ ದೇವರೂ, ಸರ್ವಶಕ್ತರಾಗಿರುವ ಯೆಹೋವ ದೇವರೂ ಹೇಳುವುದೇನೆಂದರೆ: ಏಕೆ ನಿಮಗೆ ಉಳಿದಿರುವವರನ್ನು ಮಿಗಿಸದ ಹಾಗೆ ನೀವು ಗಂಡಸರನ್ನೂ, ಹೆಂಗಸರನ್ನೂ, ಮಗುವನ್ನೂ, ಮೊಲೆ ಕೂಸನ್ನೂ ಯೆಹೂದದೊಳಗಿಂದ ಕಡಿದುಬಿಟ್ಟು, ನಿಮ್ಮ ಪ್ರಾಣಗಳಿಗೆ ದೊಡ್ಡ ಕೇಡನ್ನು ಮಾಡಿಕೊಳ್ಳುತ್ತೀರಿ? ಅಧ್ಯಾಯವನ್ನು ನೋಡಿ |
ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ ಇವನನ್ನು ಕೊಂದು ಹಾಕಿ ನಮಗೆ ದೊಡ್ಡ ಕೇಡನ್ನು ಉಂಟು ಮಾಡಿಕೊಳ್ಳುವವರಾಗಿದ್ದೇವೆ” ಎಂಬುದಾಗಿ ಸಕಲಜನ ಸಮೂಹಕ್ಕೆ ಹೇಳಿದರು.