Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿನ್ನ ಅವಮಾನದ ಸುದ್ದಿಯು ಜನಾಂಗಗಳಿಗೆ ಕೇಳಿಬಂದಿದೆ, ನಿನ್ನ ಕೂಗಾಟವು ಲೋಕದಲ್ಲೆಲ್ಲಾ ತುಂಬಿದೆ; ವೀರನು ವೀರನನ್ನು ಎಡವಿ ಇಬ್ಬರೂ ಬಿದ್ದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಿನ್ನ ಲಜ್ಜೆಯ ಸುದ್ದಿ ರಾಷ್ಟ್ರಗಳಿಗೆ ಮುಟ್ಟಿದೆ ಲೋಕವೆಲ್ಲಾ ನಿನ್ನ ಗೋಳಾಟದಿಂದ ತುಂಬಿದೆ ಯೋಧನು ಯೋಧನನ್ನು ಎಡವಿ, ಇಬ್ಬರೂ ಬಿದ್ದಿರುವರು ಕೆಳಗೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿನ್ನ ಅವಮಾನದ ಸುದ್ದಿಯು ಜನಾಂಗಗಳಿಗೆ ಕೇಳಬಂದಿದೆ, ನಿನ್ನ ಕೂಗಾಟವು ಲೋಕದಲ್ಲೆಲ್ಲಾ ತುಂಬಿದೆ; ವೀರನು ವೀರನನ್ನು ಎಡವಿ ಇಬ್ಬರೂ ಬಿದ್ದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಬೇರೆ ಜನಾಂಗಗಳು ನೀನು ಗೋಳಾಡುವದನ್ನು ಕೇಳಿಸಿಕೊಳ್ಳುವವು. ನಿನ್ನ ಗೋಳಾಟವು ಇಡೀ ಭೂಮಂಡಲದಲ್ಲೆಲ್ಲ ಕೇಳಿಸುವುದು. ‘ಒಬ್ಬ ಶೂರ ಸೈನಿಕನು’ ಮತ್ತೊಬ್ಬ ‘ಶೂರ ಸೈನಿಕನನ್ನು’ ಎದುರಿಸುವನು. ಆ ಶೂರ ಸೈನಿಕರಿಬ್ಬರೂ ಒಟ್ಟಿಗೆ ನೆಲಕ್ಕೆ ಬೀಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಜನಾಂಗಗಳು ನಿನ್ನ ಮಾನಭಂಗವನ್ನು ಕುರಿತು ಕೇಳಿವೆ; ನಿನ್ನ ಕೂಗು ದೇಶವನ್ನು ತುಂಬಿಸಿದೆ. ಏಕೆಂದರೆ ಪರಾಕ್ರಮಶಾಲಿಯು ಪರಾಕ್ರಮಶಾಲಿಯ ಮೇಲೆ ವಿರೋಧವಾಗಿ ಎಡವಿದ್ದಾರೆ. ಇಬ್ಬರೂ ಬಿದ್ದು ಹೋಗಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:12
17 ತಿಳಿವುಗಳ ಹೋಲಿಕೆ  

ವೇಗಶಾಲಿಗಳೂ ಓಡಿಹೋಗಲಾರರು, ಬಲಿಷ್ಠರೂ ತಪ್ಪಿಸಿಕೊಳ್ಳಲಾರರು. ಉತ್ತರ ದಿಕ್ಕಿನಲ್ಲಿ ಯೂಫ್ರೆಟಿಸ್ ನದಿಯ ಹತ್ತಿರ ಎಡವಿಬಿದ್ದಿದ್ದಾರೆ.


ಯೆಹೂದವು ದುಃಖಿಸುತ್ತದೆ, ಅಲ್ಲಿಯ ಜನರು ಕಂಗೆಟ್ಟು ಕರ್ರಗಾಗಿ ನೆಲದ ಮೇಲೆ ಬಿದ್ದಿದ್ದಾರೆ, ಯೆರೂಸಲೇಮಿನವರ ಗೋಳಾಟವು ಕೇಳಿಸುತ್ತದೆ.


“ಐಗುಪ್ತರನ್ನು ಐಗುಪ್ತ್ಯರ ಮೇಲೆಯೇ ಎಬ್ಬಿಸುವೆನು: ಸಹೋದರನಿಗೆ ವಿರುದ್ಧವಾಗಿ ಸಹೋದರನು, ನೆರೆಯವನಿಗೆ ವಿರುದ್ಧವಾಗಿ ನೆರೆಯವನೂ, ಪಟ್ಟಣಕ್ಕೆ ವಿರುದ್ಧವಾಗಿ ಪಟ್ಟಣವೂ, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಹೋರಾಡುವವು.


ಅದೇ ದಿನದಲ್ಲಿ ಮೀನುಬಾಗಿಲಿನಿಂದ ಕೂಗಾಟ, ಎರಡನೆಯ ಕೇರಿಯಿಂದ ಗೋಳಾಟ, ಗುಡ್ಡಗಳ ಮೇಲಿನಿಂದ ಭೀಕರ ಶಬ್ದವನ್ನು ಕೇಳುವಿರಿ, ಅಂತು ದೊಡ್ಡ ಗದ್ದಲವಾಗುವುದು” ಇದು ಯೆಹೋವನ ನುಡಿ.


“ಆಹಾ, ಬಾಬೆಲಿನಿಂದ ಮೊರೆಯೂ, ಕಸ್ದೀಯರ ದೇಶದಿಂದ ಮಹಾನಾಶದ ಶಬ್ದವೂ ಕೇಳಿ ಬರುತ್ತದೆ!


ಎದೋಮ್ಯರು ಧಡಮ್ಮನೆ ಬೀಳಲು ಭೂಮಿಯು ಕಂಪಿಸುವುದು; ಅದರ ಗೋಳು ಕೆಂಪು ಸಮುದ್ರದವರೆಗೂ ಕೇಳಿಸುವುದು!


ಹೆಷ್ಬೋನಿನಿಂದ ಎಲೆಯಾಲೆಯ ಮತ್ತು ಯಹಚಿನವರೆಗೆ ಜನರು ಅರಚಿಕೊಳ್ಳುತ್ತಾರೆ, ಚೋಯರಿನಿಂದ ಹೊರೊನಯಿಮಿನ ಮತ್ತು ಎಗ್ಲತ್ ಶೆಲಿಶೀಯದವರೆಗೆ ಕಿರಿಚಿಕೊಳ್ಳುತ್ತಾರೆ; ನಿಮ್ರೀಮ್ ಹಳ್ಳವೂ ಹಾಳಾಗಿದೆ.


ಕೈದಿಗಳ ಕಾಲ ಕೆಳಗೆ ಮುದುರಿಕೊಂಡು, ಹತರಾದವರ ಕೆಳಗೆ ಬಿದ್ದಿರುವುದೇ ಇವರ ಗತಿ. ಏಕೆಂದರೆ ಇಷ್ಟೆಲ್ಲಾ ನಡೆದರೂ ಯೆಹೋವನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.


ಸಾಯದೆ ಉಳಿದ ಜನರಿಗೂ ಗಡ್ಡೆರೋಗ ಬಂದಿತ್ತು. ಪಟ್ಟಣದ ಗೋಳಾಟವು ಆಕಾಶವನ್ನು ಮುಟ್ಟಿತು.


ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲಾ ಕೊನೆಗೊಂಡಿದೆ; ಲೋಕದ ಸಡಗರವು ಸೆರೆಯಾಗಿ ತೊಲಗಿದೆ.


ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಪ್ರಯತ್ನಿಸುತ್ತೀ? ಅಶ್ಶೂರದ ವಿಷಯವಾಗಿ ಹೇಗೆ ಆಶಾಭಂಗಪಟ್ಟೆಯೋ ಹಾಗೆಯೇ ಐಗುಪ್ತದ ವಿಷಯವಾಗಿಯೂ ಆಶಾಭಂಗಪಡುವಿ.


ಯೆಹೋವನು ಇಂತೆನ್ನುತ್ತಾನೆ, “ಇಗೋ, ಪ್ರವಾಹವು ಉತ್ತರದಿಕ್ಕಿನಿಂದ ಹೊರಟು ತುಂಬಿತುಳುಕುವ ತೊರೆಯಾಗಿ ದೇಶವನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ ಮತ್ತು ಪಟ್ಟಣದ ನಿವಾಸಿಗಳನ್ನೂ ಆಕ್ರಮಿಸುವುದು. ಆಗ ಅಲ್ಲಿನವರು ಮೊರೆಯಿಡುವರು, ದೇಶದವರೆಲ್ಲಾ ಗೋಳಾಡುವರು.


ಬಾಬೆಲು ಶತ್ರುವಶವಾಯಿತೆಂಬ ಕೋಲಾಹಲಕ್ಕೆ ಭೂಮಿಯು ಕಂಪಿಸುತ್ತದೆ, ಅದರ ಮೊರೆಯು ಜನಾಂಗಗಳಲ್ಲಿ ಕೇಳಿಸುತ್ತದೆ.


ಪಟ್ಟಣದ ಅರಸನು ತನ್ನ ಸರದಾರರನ್ನು ಕರೆಕಳುಹಿಸಿದ್ದಾನೆ; ಅವರು ಓಡಿ ಹೋಗುತ್ತಾ ಮುಗ್ಗರಿಸುತ್ತಾರೆ; ಪೌಳಿಗೋಡೆ ಕಡೆಗೆ ತ್ವರೆಯಾಗಿ ಓಡುತ್ತಾರೆ; ಮರೆಯು ನಿಲ್ಲಿಸಲ್ಪಟ್ಟಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು