ಯೆರೆಮೀಯ 46:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಬಹು ಜನರು ಮುಗ್ಗರಿಸುವಂತೆ ಮಾಡಿದನು; ಹೌದು, ಒಬ್ಬರಿಗೊಬ್ಬರು ಮೇಲೆ ಬಿದ್ದು; ‘ನಾವು ಎದ್ದು ಜನ್ಮಭೂಮಿಗೆ ಹೊರಟು ಸ್ವಜನರನ್ನು ಸೇರಿ ಹಿಂಸೆಯ ಖಡ್ಗದಿಂದ ತಪ್ಪಿಸಿಕೊಳ್ಳೋಣ’ ಎಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಬಹುಜನರು ಮುಗ್ಗರಿಸಿ ಬಿದ್ದರು ಹೌದು, ಒಬ್ಬರಿಗೊಬ್ಬರು ತಾಕಿ ಬಿದ್ದರು. ‘ಎದ್ದು ಜನ್ಮಭೂಮಿಗೆ ತೆರಳೋಣ ಸ್ವಜನರನ್ನು ಸೇರಿಕೊಳ್ಳೋಣ ಸಂಹರಿಸುವ ಖಡ್ಗದಿಂದ ತಪ್ಪಿಸಿಕೊಳ್ಳೋಣ’ ಎಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಬಹು ಜನರು ಮುಗ್ಗರಿಸುವಂತೆ ಮಾಡಿದನು; ಹೌದು, ಒಬ್ಬರಿಗೊಬ್ಬರು ತಗಲಿ ಬಿದ್ದರು; ನಾವು ಎದ್ದು ಜನ್ಮಭೂವಿುಗೆ ಹೊರಟು ಸ್ವಜನರನ್ನು ಸೇರಿ ಹಿಂಸೆಯ ಖಡ್ಗದಿಂದ ತಪ್ಪಿಸಿಕೊಳ್ಳೋಣ ಎಂದುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆ ಸೈನಿಕರು ಮತ್ತೆಮತ್ತೆ ಎಡವುತ್ತಾರೆ. ಅವರು ಒಬ್ಬರಮೇಲೊಬ್ಬರು ಬೀಳುವರು. ‘ಎದ್ದೇಳು, ನಮ್ಮ ಜನರಲ್ಲಿಗೆ ನಾವು ಹೋಗೋಣ. ನಮ್ಮ ಜನ್ಮಭೂಮಿಗೆ ನಾವು ಹೋಗೋಣ. ನಮ್ಮ ವೈರಿಯು ನಮ್ಮನ್ನು ಸೋಲಿಸುತ್ತಿದ್ದಾನೆ. ನಾವು ಇಲ್ಲಿಂದ ಹೊರಡಬೇಕು’ ಎಂದು ಅವರು ಹೇಳಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅವರು ಪದೇಪದೇ ಎಡವುತ್ತಾರೆ. ಹೌದು, ಒಬ್ಬರ ಮೇಲೊಬ್ಬರು ಬಿದ್ದರು. ‘ಅವರು ಉಪದ್ರವ ಪಡಿಸುವವರ ಖಡ್ಗವನ್ನು ಬಿಟ್ಟು, ಸ್ವಂತ ಜನರ ಬಳಿಗೂ, ನಾವು ಹುಟ್ಟಿದ ದೇಶದ ಬಳಿಗೂ ತಿರುಗಿ ಹೋಗೋಣ,’ ಎಂದು ಹೇಳಿದರು. ಅಧ್ಯಾಯವನ್ನು ನೋಡಿ |