ಯೆರೆಮೀಯ 46:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಇಗೋ, ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆಯೂ, ಸಮುದ್ರದಿಂದ ಎದ್ದಿರುವ ಕರ್ಮೆಲ್ ಬೆಟ್ಟದ ಹಾಗೂ ಉನ್ನತನಾದವನೊಬ್ಬನು ಬರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಇಗೋ, ಸೇನಾಧೀಶ್ವರ ಸರ್ವೇಶ ಎಂಬ ಹೆಸರುಳ್ಳ ರಾಜಾಧಿರಾಜನ ನುಡಿ: ‘ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆ ಸಮುದ್ರದಿಂದೆದ್ದಿರುವ ಕರ್ಮೆಲ್ ಗುಡ್ಡದಂತೆ ಉನ್ನತನೊಬ್ಬನು ಬರುವನು, ನನ್ನ ಜೀವದಾಣೆ.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ಇಗೋ, ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆಯೂ ಸಮುದ್ರದಿಂದೆದ್ದಿರುವ ಕರ್ಮೆಲ್ ಗುಡ್ಡದ ಹಾಗೂ ಉನ್ನತನಾದವನೊಬ್ಬನು ಬರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಈ ಸಂದೇಶವು ರಾಜನಿಂದ ಬಂದದ್ದು. ಆ ರಾಜನೇ ಸರ್ವಶಕ್ತನಾದ ಯೆಹೋವನು. “ನನ್ನ ಜೀವದಾಣೆಯಾಗಿ ಹೇಳುತ್ತೇನೆ. ಬಲಿಷ್ಠನಾದ ನಾಯಕನು ಬರುವನು. ಅವನು ತಾಬೋರ್ ಬೆಟ್ಟದಂತೆಯೂ ಸಮುದ್ರದ ಸಮೀಪದ ಕರ್ಮೆಲ್ ಗುಡ್ಡದಂತೆಯೂ ಇರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ಸೇನಾಧೀಶ್ವರ ಯೆಹೋವ ದೇವರೆಂದು ಹೆಸರುಳ್ಳ ಅರಸನು ಹೇಳುವುದೇನೆಂದರೆ, ‘ನನ್ನ ಜೀವದಾಣೆ,’ ಬೆಟ್ಟಗಳಲ್ಲಿ ತಾಬೋರಿನಂತೆಯೂ, ಸಮುದ್ರದ ಬಳಿಯಲ್ಲಿ ಕರ್ಮೆಲಿನಂತೆಯೂ ನಿಶ್ಚಯವಾಗಿ ಬರುವನು. ಅಧ್ಯಾಯವನ್ನು ನೋಡಿ |