ಯೆರೆಮೀಯ 46:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಐಗುಪ್ತವನ್ನು ಕುರಿತದ್ದು; ಐಗುಪ್ತದ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೆಟಿಸ್ ನದಿಯ ಬಳಿ ಕರ್ಕೆಮೀಷಿನಲ್ಲಿರುವಾಗ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಆ ಸೈನ್ಯವನ್ನು ಹೊಡೆದ ವಿಷಯ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಈಜಿಪ್ಟಿನ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೆಟಿಸ್ ನದಿಯ ಬಳಿ ಕರ್ಕೆಮೀಷಿನಲ್ಲಿ ಇರುವಾಗ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಆ ಸೈನ್ಯದ ಮೇಲೆ ದಾಳಿಮಾಡಿದ ವಿಷಯ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಐಗುಪ್ತವನ್ನು ಕುರಿತದ್ದು. ಐಗುಪ್ತದ ಅರಸನಾದ ಫರೋಹನೆಕೋವಿನ ಸೈನ್ಯವು ಯೂಫ್ರೇಟೀಸ್ ನದಿಯ ಬಳಿ ಕರ್ಕೆಮೀಷಿನಲ್ಲಿರುವಾಗ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳಿಕೆಯ ನಾಲ್ಕನೆಯ ವರುಷದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಆ ಸೈನ್ಯವನ್ನು ಹೊಡೆದ ವಿಷಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಈ ಸಂದೇಶವು ಈಜಿಪ್ಟ್ ಜನಾಂಗದ ಬಗ್ಗೆ ಇದೆ. ಈ ಸಂದೇಶವು ಫರೋಹನೆಕೋವಿನ ಸೈನ್ಯದ ಬಗ್ಗೆ ಇದೆ. ಫರೋಹನೆಕೋವು ಈಜಿಪ್ಟಿನ ರಾಜನಾಗಿದ್ದನು. ಅವನ ಸೈನ್ಯವನ್ನು ಕರ್ಕೆಮೀಷ್ ಪಟ್ಟಣದಲ್ಲಿ ಸೋಲಿಸಲಾಯಿತು. ಕರ್ಕೆಮೀಷ್ ಪಟ್ಟಣವು ಯೂಫ್ರೇಟೀಸ್ ನದಿಯ ದಂಡೆಯ ಮೇಲಿದೆ. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದದಲ್ಲಿ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಫರೋಹನೆಕೋವಿನ ಸೈನ್ಯವನ್ನು ಕರ್ಕೆಮೀಷಿನಲ್ಲಿ ಸೋಲಿಸಿದನು. ಯೆಹೋಯಾಕೀಮನು ರಾಜನಾದ ಯೋಷೀಯನ ಮಗನಾಗಿದ್ದನು. ಈಜಿಪ್ಟಿಗೆ ಯೆಹೋವನ ಸಂದೇಶ ಹೀಗಿತ್ತು: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಈಜಿಪ್ಟನ್ನು ಕುರಿತದ್ದು: ಯೆಹೂದದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ, ಈಜಿಪ್ಟಿನ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೇಟೀಸ್ ನದಿಯ ಬಳಿಯಿರುವ ಕರ್ಕೆಮೀಷಿನಲ್ಲಿ ಇರುವಾಗ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು, ಆ ಸೈನ್ಯದ ಮೇಲೆ ದಾಳಿಮಾಡಿದ್ದರ ವಿಷಯ: ಅಧ್ಯಾಯವನ್ನು ನೋಡಿ |