Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವರ ಪ್ರಾಣವನ್ನು ಹುಡುಕುವ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮತ್ತು ಅವನ ಸೇವಕರ ಕೈಗೆ ಕೊಟ್ಟುಬಿಡುವೆನು; ಅನಂತರ ಅಲ್ಲಿ ಪೂರ್ವಕಾಲದ ಹಾಗೆ ಜನರು ವಾಸಿಸುವರು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅವರ ಪ್ರಾಣವನ್ನು ಹುಡುಕುವ ಬಾಬಿಲೋನಿಯದ ಅರಸನಾದ ನೆಬೂಕದ್ನೆಚ್ಚರನ ಮತ್ತು ಅವರ ಸೇವಕರ ಕೈಗೆ ಅವರನ್ನು ಒಪ್ಪಿಸಿಬಿಡುವೆನು. ಆ ಬಳಿಕ ಈಜಿಪ್ಟಿನಲ್ಲಿ ಪೂರ್ವಕಾಲದ ಹಾಗೆ ಜನರು ವಾಸಿಸುವರು. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವರ ಪ್ರಾಣವನ್ನು ಹುಡುಕುವ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮತ್ತು ಅವನ ಸೇವಕರ ಕೈಗೆ ಕೊಟ್ಟುಬಿಡುವೆನು; ಅನಂತರ ಅಲ್ಲಿ ಪೂರ್ವಕಾಲದ ಹಾಗೆ ಜನರು ವಾಸಿಸುವರು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆ ಜನರನ್ನೆಲ್ಲ ಅವರ ಶತ್ರುಗಳು ಸೋಲಿಸುವಂತೆ ಮಾಡುವೆನು. ಅವರ ಶತ್ರುಗಳು ಅವರನ್ನು ಕೊಲ್ಲಬಯಸುವರು. ನಾನು ಆ ಜನರನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನ ಮತ್ತು ಅವನ ಸೇವಕರ ಕೈಗೆ ಒಪ್ಪಿಸುವೆನು.” “ಬಹಳ ಹಿಂದೆ, ಈಜಿಪ್ಟ್ ದೇಶದಲ್ಲಿ ಶಾಂತಿ ನೆಲೆಸಿತ್ತು. ತೊಂದರೆಗಳ ಈ ದಿನಗಳ ತರುವಾಯ ಈಜಿಪ್ಟ್ ಪುನಃ ಶಾಂತಿಯ ಬೀಡಾಗುವುದು” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವರ ಪ್ರಾಣವನ್ನೂ ಹುಡುಕುವವರ ಕೈಯಲ್ಲಿಯೂ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ, ಅವನ ಸೇವಕರ ಕೈಯಲ್ಲಿಯೂ ಅವರನ್ನು ನಾನು ಒಪ್ಪಿಸಿಬಿಡುವೆನು. ಅದರ ತರುವಾಯ ಅದು ಪೂರ್ವದ ಕಾಲಗಳಂತೆ ನಿವಾಸವಾಗುವುದೆಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:26
7 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಬಾಬೆಲಿನ ಅರಸನ ಖಡ್ಗವು ನಿನ್ನ ಮೇಲೆ ಬೀಳುವುದು.


ಅದೇನೆಂದರೆ, ಇಗೋ ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಪ್ರಾಣ ಹುಡುಕುತ್ತಿದ್ದ ಶತ್ರುವಾದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಕೈಗೆ ಕೊಟ್ಟಂತೆ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣ ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇದು ಯೆಹೋವನಾದ ನನ್ನ ನುಡಿ’” ಎಂಬುದೇ.


ಇದು ಯೆಹೋವನ ನುಡಿ. ಆದರೂ ಕಟ್ಟಕಡೆಯಲ್ಲಿ ಏಲಾಮಿನ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.”


ಆದರೂ ಅಂತ್ಯದಲ್ಲಿ ನಾನು ಮೋವಾಬಿನ ದುರವಸ್ಥೆಯನ್ನು ತಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ”. ಮೋವಾಬಿನ ವಿಷಯವಾದ ನ್ಯಾಯತೀರ್ಪು ಇದೇ.


ಇದಲ್ಲದೆ ಐಗುಪ್ತ್ಯರನ್ನು ಕ್ರೂರವಾದ ಒಡೆಯನ ಕೈಗೆ ಒಪ್ಪಿಸುವೆನು. ಭಯಂಕರನಾದ ರಾಜನು ಅವರನ್ನು ಆಳುವನು” ಎಂದು ಸೇನಾಧೀಶ್ವರನಾದ ಯೆಹೋವನು ನುಡಿಯುತ್ತಾನೆ.


“ಆ ದಿನದಲ್ಲಿ ನಾನು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಎತ್ತಿ, ಅದರ ಬಿರುಕುಗಳನ್ನು ಮುಚ್ಚುವೆನು, ಹಾಳಾದದ್ದನ್ನು ಎಬ್ಬಿಸಿ, ಹಿಂದಿನ ದಿನಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು