ಯೆರೆಮೀಯ 46:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅಶ್ವಗಳೇ, ಕುಣಿದಾಡಿರಿ! ರಥಗಳೇ, ರಭಸವಾಗಿರಿ! ಶೂರರು ಹೊರಡಲಿ! ಖೇಡ್ಯ ಸನ್ನದ್ಧರಾದ ಕೂಷ್ಯರು, ಪೂಟ್ಯರು, ಧನುರ್ಧಾರಿಗಳಾದ ಲೂದ್ಯರು ಮುಂದೆ ಹೋಗಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅಶ್ವಗಳೇ, ಕುಣಿದಾಡಿ; ರಥಗಳೇ, ರಭಸವಾಗಿ ಓಡಿ! ಹೊರಡಲಿ ಶೂರರು, ಖೇಡ್ಯ ಸನ್ನದ್ಧರಾದ ಸುಡಾನರು, ಲಿಬಿಯಾದವರು ಮುನ್ನುಗ್ಗಲಿ ಧನುರ್ಧಾರಿಗಳಾದ ಲಿಡಿಯದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅಶ್ವಗಳೇ, ಕುಣಿದಾಡಿರಿ! ರಥಗಳೇ, ರಭಸವಾಗಿರಿ! ಶೂರರು ಹೊರಡಲಿ! ಖೇಡ್ಯಸನ್ನದ್ಧರಾದ ಕೂಷ್ಯರು, ಪೂಟ್ಯರು, ಧನುರ್ಧಾರಿಗಳಾದ ಲೂದ್ಯರು ಮುಂದರಿಯಲಿ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅಶ್ವಾರೋಹಿಗಳೇ, ಯುದ್ಧದಲ್ಲಿ ಧುಮುಕಿರಿ, ಸಾರಥಿಗಳೇ, ರಥಗಳನ್ನು ವೇಗವಾಗಿ ಓಡಿಸಿರಿ. ಶೂರ ಸೈನಿಕರೇ, ಮುನ್ನುಗ್ಗಿರಿ; ಕೂಷ್ಯ ಮತ್ತು ಪೂಟ್ಯ ಸೈನಿಕರೇ, ನಿಮ್ಮ ಗುರಾಣಿಗಳನ್ನು ಹಿಡಿದುಕೊಂಡು ಹೋಗಿರಿ. ಲೂದ್ಯ ಸೈನಿಕರೇ, ನಿಮ್ಮ ಬಿಲ್ಲುಗಳನ್ನು ಉಪಯೋಗಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಕುದುರೆಗಳೇ ಬನ್ನಿರಿ; ಸಾರಥಿಗಳೇ ಓಡಾಡಿರಿ; ಪರಾಕ್ರಮಶಾಲಿಗಳು ಹೊರಗೆ ಬರಲಿ; ಗುರಾಣಿಯನ್ನು ಹಿಡಿಯುವ ಕೂಷ್ಯರೂ, ಪೂಟ್ಯರೂ, ಬಿಲ್ಲನ್ನು ಹಿಡಿದು ಬಗ್ಗಿಸುವ ಲೂದ್ಯರೂ ಹೊರಗೆ ಬರಲಿ. ಅಧ್ಯಾಯವನ್ನು ನೋಡಿ |