Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 47:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಶತ್ರುವಿನ ಕುದುರೆಗಳ ಗೊರಸುಗಳು ನೆಲವನ್ನು ಅಪ್ಪಳಿಸುವ ಶಬ್ದಕ್ಕೂ, ರಥಗಳ ರಭಸಕ್ಕೂ, ಚಕ್ರಗಳ ಬಿರುಗುಟ್ಟುವಿಕೆಗೂ ತಂದೆಗಳು ಹೆದರುತ್ತಾ ಜೋಲುಗೈ ಉಳ್ಳವರಾಗಿ ತಮ್ಮ ಮಕ್ಕಳನ್ನು ಹಿಂದಿರುಗಿ ನೋಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯುದ್ಧ ಕುದುರೆಗಳೋಟದ ಶಬ್ದಕ್ಕೂ ರಥಗಳ ರಭಸಕ್ಕೂ ಚಕ್ರಗಳ ಚಟಪಟಕ್ಕೂ ಹೆದರಿ ಜೋಲುಬೀಳುವುವು ಹೆತ್ತವರ ಕೈಗಳು. ತಮ್ಮ ಮಕ್ಕಳನ್ನೂ ಹಿಂದಿರುಗಿ ನೋಡದೆ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಶತ್ರುವಿನ ತುರಗಗಳ ಗೊರಸುಗಳು ನೆಲವನ್ನು ಅಪ್ಪಳಿಸುವ ಶಬ್ದಕ್ಕೂ, ರಥಗಳ ರಭಸಕ್ಕೂ, ಚಕ್ರಗಳ ಬಿರುಗುಟ್ಟುವಿಕೆಗೂ ತಂದೆಗಳು ಹೆದರುತ್ತಾ ಜೋಲುಗೈಯವರಾಗಿ ತಮ್ಮ ಮಕ್ಕಳನ್ನು ಹಿಂದಿರುಗಿ ನೋಡರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರು ವೇಗವಾಗಿ ಓಡುವ ಕುದುರೆಗಳ ಶಬ್ಧವನ್ನು ಕೇಳುವರು. ಅವರು ರಭಸವಾಗಿ ಚಲಿಸುವ ರಥಗಳ ಶಬ್ಧವನ್ನು ಕೇಳುವರು. ಅವರು ಚಕ್ರಗಳ ಗಡಗಡ ಶಬ್ಧವನ್ನು ಕೇಳುವರು. ತಂದೆಗಳು ತಮ್ಮತಮ್ಮ ಮಕ್ಕಳಿಗೆ ಸುರಕ್ಷಣೆಯನ್ನು ಕೊಡಲಾಗದಷ್ಟು ದುಬರ್ಲರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನ ಬಲವಾದ ಕುದುರೆಗಳ ಗೊರಸುಗಳ ತುಳಿಯುವಿಕೆಯ ಶಬ್ದದಿಂದಲೂ ಅವನ ರಥಗಳ ಘೋಷದಿಂದಲೂ ಅವನ ಚಕ್ರಗಳ ಧ್ವನಿಯಿಂದಲೂ ತಂದೆಗಳು ಕೈ ಬಲಹೀನತೆಯಿಂದಾಗಿ ತಮ್ಮ ಮಕ್ಕಳ ಕಡೆಗೆ ಹಿಂದಿರುಗಿ ನೋಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 47:3
14 ತಿಳಿವುಗಳ ಹೋಲಿಕೆ  

ವೈರಿಯ ಕುದುರೆಗಳ ಬುಸುಗಾಟವು ದಾನನಿಂದ ಕೇಳಿಬರುತ್ತದೆ; ತುರಂಗಗಳ (ಯುದ್ಧದ ಕುದುರೆ) ಕೆನೆತದ ಶಬ್ದಕ್ಕೆ ದೇಶವೆಲ್ಲಾ ಕಂಪಿಸುತ್ತದೆ. ಶತ್ರುಗಳು ಬಂದರು, ಸೀಮೆಯನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ, ಪಟ್ಟಣದ ನಿವಾಸಿಗಳನ್ನೂ ನುಂಗಿಬಿಟ್ಟರು” ಎಂದು ಹೇಳುವರು.


ಆಗ ಅತಿವೇಗವಾಗಿ ಓಡುತ್ತಿದ್ದ ಅವರ ಬಲವಾದ ಕುದುರೆಗಳ ಗೊರಸುಗಳ ಪೆಟ್ಟಿನಿಂದ ನೆಲವು ಕಂಪಿಸಿತು.


ಪಟ್ಟಣದ ಹೊರಗೆ ರಥಗಳು ರಭಸದಿಂದ ತಿರುಗಾಡುತ್ತವೆ, ಮೈದಾನಗಳಲ್ಲಿ ಧಡಧಡ ಓಡಾಡುತ್ತವೆ; ಪಂಜುಗಳಂತೆ ಬೆಳಗುತ್ತವೆ, ಮಿಂಚುಗಳ ಹಾಗೆ ಹಾರುತ್ತವೆ.


ಅಶ್ವಗಳೇ, ಕುಣಿದಾಡಿರಿ! ರಥಗಳೇ, ರಭಸವಾಗಿರಿ! ಶೂರರು ಹೊರಡಲಿ! ಖೇಡ್ಯ ಸನ್ನದ್ಧರಾದ ಕೂಷ್ಯರು, ಪೂಟ್ಯರು, ಧನುರ್ಧಾರಿಗಳಾದ ಲೂದ್ಯರು ಮುಂದೆ ಹೋಗಲಿ!


ಅವುಗಳಿಗೆ ಉಕ್ಕಿನ ಕವಚಗಳಂತಿದ್ದ ಕವಚಗಳು ಇದ್ದವು. ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ರಥಾಶ್ವಗಳ ಶಬ್ದದಂತೆ ಇತ್ತು.


ಬಿಲ್ಲನ್ನೂ ಮತ್ತು ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಮೊರೆಯುತ್ತದೆ, ಕುದುರೆ ಹತ್ತಿದ್ದಾರೆ; ಬಾಬೆಲ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ” ಎಂದು ಯೆಹೋವನು ಅನ್ನುತ್ತಾನೆ.


ಅವರು ರಥಗಳ ಸಂಗಡವಾಗಿಯೂ, ಬಂಡಿಗಳ ಸಂಗಡ ಜನಗಳ ಸಮೂಹದ ಸಂಗಡ, ಬಲವುಳ್ಳವರಾಗಿ ನಿನ್ನ ವಿರುದ್ಧವಾಗಿ ಬರುವರು; ಸುತ್ತಲೂ ಗುರಾಣಿಗಳನ್ನೂ, ಶಿರಸ್ತ್ರಾಣವನ್ನೂ, ಹಿಡಿದು ನಿನಗೆ ವಿರುದ್ಧವಾಗಿರುವೆನು. ಇದಲ್ಲದೆ ನಾನು ಅವರಿಗೆ ನ್ಯಾಯ ತೀರಿಸುವ ಅಧಿಕಾರವನ್ನು ಕೊಡುವೆನು. ಅವರು ತಮ್ಮ ನ್ಯಾಯಾನುಸಾರವಾಗಿ ನ್ಯಾಯತೀರಿಸುವರು.


ಪುರಾತನ ಕಾಲದಿಂದ ನಿನವೆ ಪಟ್ಟಣವೂ ಕಟ್ಟೆ ಒಡೆದು ನೀರು ತುಂಬಿದ ಕೆರೆಯಂತೆ ಇದೆ. ಆಹಾ! ಹರಿದು ಓಡುವ ನೀರಿನಂತೆ ಅದರ ನಿವಾಸಿಗಳು ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ ಎಂದು ಅಪ್ಪಣೆಯಾದರೂ ಯಾರೂ ಹಿಂದೆ ನೋಡರು.


ಅವರ ಬಾಣಗಳು ಹದವಾಗಿವೆ. ಅವರ ಬಿಲ್ಲುಗಳು ಬಿಗಿದಿವೆ. ಅವರ ಕುದುರೆಗಳ ಗೊರಸುಗಳು ಕಲ್ಲಿನಂತೆಯೂ, ಚಕ್ರಗಳು ಬಿರುಗಾಳಿಯಂತೆಯೂ ರಭಸವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು