Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 “ಮೋವಾಬಿಗೆ ತಲೆಗೇರುವಂತೆ ಕುಡಿಸಿರಿ, ಅದು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿತಲ್ಲಾ; ಅದು ತನ್ನ ವಾಂತಿಯಲ್ಲಿ ದೊಪ್ಪನೆ ಬಿದ್ದು ಪರಿಹಾಸ್ಯಕ್ಕೆ ಗುರಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 “ಮೋವಾಬಿಗೆ ಅಮಲೇರುವಷ್ಟು ಕುಡಿಸಿರಿ. ಅದು ಸರ್ವೇಶ್ವರನನ್ನೆ ತಿರಸ್ಕರಿಸಿ ಉಬ್ಬಿಹೋಗಿದೆ. ತನ್ನ ವಾಂತಿಯಲ್ಲೆ ಬಿದ್ದು ಗೇಲಿ ಪರಿಹಾಸ್ಯಕ್ಕೆ ಗುರಿಯಾಗಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಮೋವಾಬಿಗೆ ತಲೆಗೇರಕುಡಿಸಿರಿ, ಅದು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿತಲ್ಲಾ; ಅದು ತನ್ನ ವಾಂತಿಯಲ್ಲಿ ದೊಪ್ಪನೆ ಬಿದ್ದು ಗೇಲಿಗೆ ಗುರಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ತಾನು ಯೆಹೋವನಿಗಿಂತ ಬಹಳ ಮುಖ್ಯವಾದವನೆಂದು ಮೋವಾಬು ಭಾವಿಸಿತ್ತು. ಕುಡಿದು ಮದವೇರಿದವನಂತೆ ಆಗುವವರೆಗೆ ಮೋವಾಬನ್ನು ದಂಡಿಸಿರಿ. ಮೋವಾಬು ತನ್ನ ವಾಂತಿಯಲ್ಲಿ ಬಿದ್ದು ಹೊರಳಾಡುವದು. ಜನರು ಮೋವಾಬನ್ನು ತಮಾಷೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ಅದನ್ನು ನೀವು ಅಮಲೇರಿಸಿರಿ; ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡಿದೆ; ಮೋವಾಬು ಸಹ ತಾನೇ ವಾಂತಿ ಮಾಡಿದ್ದರಲ್ಲಿ ಹೊರಳಾಡುವುದು; ಅದೇ ಹಾಸ್ಯಕ್ಕಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:26
37 ತಿಳಿವುಗಳ ಹೋಲಿಕೆ  

ಅವರು ಹೊಟ್ಟೆಬಾಕರು, ನಾನು ಅವರಿಗೆ ಔತಣವನ್ನು ಸಿದ್ಧಪಡಿಸುವೇನು, ಅವರು ಅದರಿಂದ ಸಂಭ್ರಮಪಟ್ಟು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವಂತೆ ತಲೆಗೇರುವ ಮಟ್ಟಿಗೆ ಕುಡಿಸುವೆನು. ಇದು ಯೆಹೋವನ ನುಡಿ” ಎಂಬುದೇ.


ಮೋವಾಬು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿದ್ದರಿಂದ ಅದು ಹಾಳಾಗಿ ಇನ್ನು ಜನಾಂಗವೆನಿಸಿಕೊಳ್ಳದು.”


ನಿಮ್ಮನ್ನು ನೀವೇ ಬೆರಗು ಮಾಡಿಕೊಂಡು ಬೆರಗಾಗಿರಿ, ಕುರುಡು ಮಾಡಿಕೊಂಡು ಕುರುಡರಾಗಿರಿ! ಇವರು ಅಮಲೇರಿದ್ದಾರೆ, ದ್ರಾಕ್ಷಾರಸದಿಂದಲ್ಲ; ಓಲಾಡುತ್ತಾರೆ ಮದ್ಯದಿಂದಲ್ಲ.


ಯೆಹೋವನು ಅವರ ಅಂತರಾತ್ಮದಲ್ಲಿ ವಕ್ರಬುದ್ಧಿಯನ್ನು ಕಲ್ಪಸಿದ್ದಾನೆ. ಅಮಲೇರಿದವನು ಕಕ್ಕುತ್ತಾ ಓಡಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾರೆ.


ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.


ಊಚ್ ದೇಶದಲ್ಲಿ ವಾಸಿಸುವ ಎದೋಮೆಂಬ ಕನ್ಯೆಯೇ, ಹರ್ಷಿಸು, ಉಲ್ಲಾಸಗೊಳ್ಳು; ಆದರೆ ರೋಷಪಾನದ ಪಾತ್ರೆಯು ನಿನ್ನ ಪಾಲಿಗೂ ಬರುವುದು; ಅಮಲೇರಿದವಳಾಗಿ ನಿನ್ನನ್ನು ನೀನೇ ಬೆತ್ತಲೆಮಾಡಿಕೊಳ್ಳುವಿ.


ಬಾಬೆಲು ಯೆಹೋವನ ಕೈಯಲ್ಲಿನ ಹೊನ್ನಿನ ಪಾತ್ರೆಯ ಹಾಗಿತ್ತು; ಲೋಕದವರೆಲ್ಲರೂ ಅದರಲ್ಲಿ ಕುಡಿದು ಮತ್ತರಾದರು; ಜನಾಂಗಗಳು ಅದರಲ್ಲಿನ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.


ಆಹಾ, ಭಂಗವಾಯಿತು! ಕಿರಿಚಿಕೊಳ್ಳುತ್ತಾರಲ್ಲಾ! ಓಹೋ, ಮೋವಾಬು ನಾಚಿಕೆಯಿಂದ ಬೆನ್ನು ತೋರಿಸಿದೆ! ಅದರ ನೆರೆಹೊರೆಯವರು ಅಣಕಿಸುವುದಕ್ಕೂ ಮತ್ತು ಬೆಚ್ಚಿಬೀಳುವುದಕ್ಕೂ ಆಸ್ಪದವಾಗಿದೆ.


ಅದಕ್ಕೆ ಫರೋಹನು, “ಯೆಹೋವನೆಂಬುವವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲರನ್ನು ಹೋಗಗೊಡಿಸುವುದೇತಕ್ಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ, ಇಸ್ರಾಯೇಲರನ್ನು ಹೋಗಲು ನಾನು ಬಿಡುವುದೇ ಇಲ್ಲ” ಅಂದನು.


ಮಹಾ ಪಟ್ಟಣವು ಮೂರು ಭಾಗವಾಗಿ ಬಿರಿಯಿತು ಮತ್ತು ಜನಾಂಗಗಳ ಪಟ್ಟಣಗಳು ಬಿದ್ದವು. ಆಗ ದೇವರು ತನ್ನ ಸನ್ನಿಧಿಯಲ್ಲಿ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕೊಟ್ಟನು.


ಯಾವುದು ದೇವರೆನಿಸಿಕೊಳ್ಳುತ್ತದೋ ಯಾವುದು ಆರಾಧಿಸಲ್ಪಡುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಘೋಷಿಸಿಕೊಂಡು ದೇವರ ಗರ್ಭಗುಡಿಯಲ್ಲೇ ಕುಳಿತುಕೊಳ್ಳುತ್ತಾನೆ.


ನೀನು ಮಾನವಂತನಲ್ಲ, ನಿನಗೆ ಸನ್ಮಾನವಲ್ಲಾ ಅವಮಾನ ಕಟ್ಟಿಟ್ಟ ಬುತ್ತಿ. ನೀನು ಕುಡಿ ಕುಡಿದು ನಗ್ನನಾಗು, ಯೆಹೋವನ ಬಲಗೈಯಲ್ಲಿರುವ ನಿನ್ನ ಪಾಪದ ಕೊಡ ತುಂಬಿ ಅವಮಾನವೇ ನಿನಗೆ ಸಲ್ಲುವುದು.


ನೀನೂ ಓಲಾಡುವಿ, ಬಳಲಿಹೋಗುವಿ; ನೀನೂ ಶತ್ರುವಿನ ನಿಮಿತ್ತ ಆಶ್ರಯವನ್ನು ಹುಡುಕುವಿ.


“ರಾಜನು ತನ್ನ ಇಚ್ಛಾನುಸಾರ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಗರ್ವದಿಂದ ಉಬ್ಬಿ, ದೇವಾಧಿ ದೇವನನ್ನು ಮಿತಿಮೀರಿ ದೂಷಿಸಿ ನಿಮ್ಮ ಮೇಲಿನ ದೈವ ಕೋಪವು ತೀರುವ ತನಕ ವೃದ್ಧಿಯಾಗಿರುವನು. ದೈವಸಂಕಲ್ಪವು ನೆರವೇರಲೇ ಬೇಕು.


ಆತನು ನನಗೆ ಕಹಿಯಾದ ಆಹಾರವನ್ನು ಕೊಟ್ಟು, ವಿಷ ಪಾನವನ್ನು ಕುಡಿಯಮಾಡಿದ್ದಾನೆ.


ಯಾರೂ ನನ್ನನ್ನು ಸಂತೈಸರು; ನನ್ನ ನರಳಾಟದ ಸುದ್ದಿಯು ನನ್ನ ವೈರಿಗಳ ಕಿವಿಗೆ ಬಿದ್ದಿದೆ; ನನ್ನ ಶತ್ರುಗಳೆಲ್ಲಾ ನನಗಾದ ಕೇಡಿನ ಸಮಾಚಾರವನ್ನು ಕೇಳಿ ಅದನ್ನು ಮಾಡಿದವನು ನೀನೇ ಎಂದು ಉಲ್ಲಾಸಪಡುತ್ತಾರೆ. ನೀನು ಮುಂತಿಳಿಸಿದ ದಿನವನ್ನು ಬರಮಾಡುವಾಗ ನನಗಾದ ಗತಿಯು ಅವರಿಗೂ ಆಗಲಿ!


ನಾನು ಅದರ ಪ್ರಧಾನರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಬಲಿಷ್ಠರು, ಇವರೆಲ್ಲರಿಗೂ ತಲೆಗೇರುವ ಮಟ್ಟಿಗೆ ಕುಡಿಸುವೆನು; ಅವರು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವರು ಎಂದು ಸೇನಾಧೀಶ್ವರನಾದ ಯೆಹೋವನೆಂಬ ಹೆಸರಿನ ರಾಜಾಧಿರಾಜನು ಅನ್ನುತ್ತಾನೆ.”


ನನ್ನ ಕೋಪದಿಂದ ಜನಾಂಗಗಳನ್ನು ತುಳಿದು ರೋಷವೇರಿದವನಾಗಿ, ಅವುಗಳನ್ನು ಚೂರುಚೂರು ಮಾಡಿ ನೆಲದ ಮೇಲೆ ಅವುಗಳ ಸಾರವನ್ನು ಸುರಿಸಿದೆನು.


ಯೆಹೋವನು ತನ್ನ ರೋಷವನ್ನು ತುಂಬಿಕೊಟ್ಟ ಪಾತ್ರೆಯಿಂದ ಕುಡಿದ ಯೆರೂಸಲೇಮೇ, ಎಚ್ಚೆತ್ತುಕೋ, ಎಚ್ಚೆತ್ತುಕೋ, ಎದ್ದುನಿಲ್ಲು! ಭ್ರಮಣಗೊಳಿಸುವ ಆ ಪಾನದ ಪಾತ್ರೆಯಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿದುಬಿಟ್ಟಿದ್ದಿ.


ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೇ? ಗರಗಸವು ಕತ್ತರಿಸುವವನಿಗೆ ಪ್ರತಿಯಾಗಿ ತನ್ನನ್ನು ಹೆಚ್ಚಿಸಿಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತಾಯಿತು, ಮರಕ್ಕಿಂತ ಶ್ರೇಷ್ಠನಾಗಿರುವ ಮನುಷ್ಯನನ್ನು ದೊಣ್ಣೆಯು ಎತ್ತಿಕೊಂಡ ಹಾಗಾಯಿತು.


ಯೆಹೋವನ ಕೈಯಲ್ಲಿ ಪಾತ್ರೆ ಇದೆ; ಅದು ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿದೆ. ಅದರಿಂದ ಹೊಯ್ದು ಹಂಚುತ್ತಾನೆ. ಲೋಕದ ದುಷ್ಟರೆಲ್ಲರೂ ಅದರೊಳಗಿನ ಮಡ್ಡಿಯನ್ನು ಸಹ ಕುಡಿದು ಮುಗಿಸಬೇಕು.


ನಿನ್ನ ಜನರನ್ನು ಸಂಕಟಕ್ಕೆ ಗುರಿಪಡಿಸಿದ್ದೀ; ನೀನು ನಮಗೆ ರೋಷವೆಂಬ ಪಾತ್ರೆಯಿಂದ ಪಾನಮಾಡಿಸಿದಿ.


ಯೆಹೋವನೇ, ನೀನಾದರೋ ಅವರನ್ನು ನೋಡಿ ನಗುವಿ; ಎಲ್ಲಾ ಅನ್ಯಜನಾಂಗಗಳನ್ನು ಪರಿಹಾಸ್ಯಮಾಡುವಿ.


ಪರಲೋಕದಲ್ಲಿ ಆಸೀನನಾಗಿರುವಾತನು ಅದಕ್ಕೆ ನಗುವನು; ಕರ್ತನು ಅವರನ್ನು ಪರಿಹಾಸ್ಯಮಾಡುವನು.


ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು. ಆತನ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ?


ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ಅವರ ಮುಂದೆ, ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯಾ?


ಅವರ ಮೇಜುಗಳ ಮೇಲೆಲ್ಲಾ ವಾಂತಿಯೂ, ಎಂಜಲೂ ತುಂಬಿವೆ, ಶುದ್ಧವಾದ ಸ್ಥಳವೇ ಇಲ್ಲ.


ಅದು ನಕ್ಷತ್ರ ಗಣದ ಮೇಲೆ ಕೈಮಾಡುವಷ್ಟು ಹೆಚ್ಚಿ, ಆ ಗಣದ ಕೆಲವು ನಕ್ಷತ್ರಗಳನ್ನು ನೆಲಕ್ಕೆ ಕೆಡವಿ ತುಳಿದುಬಿಟ್ಟಿತು.


ಅವನು ದೇವರಿಗೆ ವಿರುದ್ಧವಾಗಿ ಕೈಚಾಚಿ ಸರ್ವಶಕ್ತನಾದ ದೇವರ ಎದುರು ನಿಂತು ಶೂರನಂತೆ ಮೆರೆದನಲ್ಲಾ.


ಬಿಲ್ಲನ್ನು ಬೊಗ್ಗಿಸಿ, ಬಾಣಬಿಡುವವರನ್ನೆಲ್ಲಾ ಬಾಬಿಲೋನಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ; ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲರ ಸದಮಲಸ್ವಾಮಿಯಾದ ಯೆಹೋವನನ್ನು ಅಸಡ್ಡೆ ಮಾಡಿತಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು