Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಹರ್ಷಾನಂದಗಳು ತೋಟಗಳಿಂದಲೂ, ಮೋವಾಬಿನ ಇಡೀ ದೇಶದಿಂದಲೂ ತೊಲಗಿವೆ; ತೊಟ್ಟಿಗಳಲ್ಲಿ ದ್ರಾಕ್ಷಾರಸವು ಇಲ್ಲದಂತೆ ಮಾಡಿದ್ದೇನೆ; ಯಾರೂ ದ್ರಾಕ್ಷಿತೊಟ್ಟಿಯಲ್ಲಿ ತುಳಿಯುತ್ತಾ ಹರ್ಷಧ್ವನಿಗೈಯರು; ಕೇಳಿಸುವ ಧ್ವನಿ ಹರ್ಷಧ್ವನಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಹರ್ಷಾನಂದಗಳು ತೋಟಗಳಿಂದಲೂ ಮೋವಾಬಿನ ಇಡೀ ನಾಡಿನಿಂದಲೂ ತೊಲಗಿವೆ. ತೊಟ್ಟಿಗಳಲ್ಲಿ ದ್ರಾಕ್ಷಾರಸ ಇಲ್ಲದಂತಾಗಿದೆ. ಯಾರೂ ತೊಟ್ಟಿಯಲ್ಲಿ ತುಳಿಯುತ್ತಾ ಆನಂದ ಧ್ವನಿಗೈಯುತ್ತಿಲ್ಲ. ಕೇಳಿಸುವಾ ಧ್ವನಿ ಆನಂದ ಧ್ವನಿ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಹರ್ಷಾನಂದಗಳು ತೋಟಗಳಿಂದಲೂ ಮೋವಾಬಿನ ಇಡೀ ದೇಶದಿಂದಲೂ ತೊಲಗಿವೆ; ತೊಟ್ಟಿಗಳಲ್ಲಿ ದ್ರಾಕ್ಷಾರಸವು ಇಲ್ಲದಂತೆ ಮಾಡಿದ್ದೇನೆ; ಯಾರೂ ತೊಟ್ಟಿಯಲ್ಲಿ ತುಳಿಯುತ್ತಾ ಹರ್ಷಧ್ವನಿಗೈಯರು; ಕೇಳಿಸುವ ಧ್ವನಿ ಹರ್ಷಧ್ವನಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಮೋವಾಬಿನ ದೊಡ್ಡದೊಡ್ಡ ದ್ರಾಕ್ಷಿತೋಟಗಳಿಂದ ಹರ್ಷವೂ ಆನಂದವೂ ಕಣ್ಮರೆಯಾಗಿವೆ. ದ್ರಾಕ್ಷಿಗಾಣದಿಂದ ದ್ರಾಕ್ಷಾರಸ ಹರಿಯುವದನ್ನು ನಾನು ನಿಲ್ಲಿಸಿದ್ದೇನೆ. ದ್ರಾಕ್ಷಾರಸವನ್ನು ಮಾಡಲು ದ್ರಾಕ್ಷಿಯನ್ನು ತುಳಿಯುವ ಜನರ ಹಾಡು ಮತ್ತು ನೃತ್ಯ ಕಂಡುಬರುವದಿಲ್ಲ. ಸಂತೋಷದ ಧ್ವನಿ ಕೇಳಿಬರುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಫಲವುಳ್ಳ ಹೊಲದಿಂದಲೂ, ಮೋವಾಬಿನ ದೇಶದಿಂದಲೂ ಸಂತೋಷವೂ, ಉಲ್ಲಾಸವೂ ತೆಗೆಯಲಾಗಿವೆ; ಏಕೆಂದರೆ ದ್ರಾಕ್ಷಿ ಆಲೆಗಳೊಳಗಿಂದ ದ್ರಾಕ್ಷಾರಸವನ್ನು ನಿಲ್ಲಿಸಿದ್ದೇನೆ; ಅವರ ಆರ್ಭಟದ ಸಂಗಡ ಅವರು ಯಾರೂ ತುಳಿಯುವುದಿಲ್ಲ; ಆರ್ಭಟವೇ ಆರ್ಭಟವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:33
13 ತಿಳಿವುಗಳ ಹೋಲಿಕೆ  

ಆ ಕಾಲದಲ್ಲೆಲ್ಲಾ ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಧಾನ್ಯ ಮಾತ್ರ ಸಿಕ್ಕುತ್ತಿತ್ತಲ್ಲವೇ; ಐವತ್ತು ಸೇರು ದ್ರಾಕ್ಷಾರಸವನ್ನು ಮೊಗೆಯಬೇಕೆಂದು ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆಯುತ್ತಿತ್ತು.


ಏಕೆಂದರೆ ಹತ್ತು ಎಕರೆ ಭಾಗವಾಯಿತು. ಭೂಮಿಯು ನಾಲ್ಕು ಕೊಳಗದಷ್ಟೇ ದ್ರಾಕ್ಷಾರಸವನ್ನಿಯುವುದು. ಬಿತ್ತಿದ ಒಂದು ಖಂಡುಗ ಬೀಜದಿಂದ ಕಡಿಮೆ ದವಸವು ಬರುವುದು.


ನಮ್ಮ ಆಹಾರವು ನಮ್ಮ ಕಣ್ಣೆದುರಿಗೆ ಹಾಳಾಯಿತಲ್ಲಾ, ಸಂತೋಷವೂ ಹಾಗೂ ಉಲ್ಲಾಸವೂ ನಮ್ಮ ದೇವರ ಆಲಯವನ್ನು ಬಿಟ್ಟುಹೋಯಿತ್ತಲ್ಲಾ!


ಅಮಲೇರಿದವರೇ, ಎಚ್ಚರಗೊಳ್ಳಿರಿ ಮತ್ತು ಅಳಿರಿ! ದ್ರಾಕ್ಷಾರಸ ಕುಡಿಯುವವರೇ, ಗೋಳಾಡಿರಿ, ಏಕೆಂದರೆ ದ್ರಾಕ್ಷಾರಸದ ಸಿಹಿಯು ನಿಮ್ಮ ಬಾಯಿಗೆ ಸಿಕ್ಕುವುದಿಲ್ಲ.


ನೀನು ಪ್ರಜೆಗಳನ್ನು ವೃದ್ಧಿಗೊಳಿಸಿದ್ದೀ. ಅವರಿಗೆ ಸಂತೋಷವನ್ನು ಹೆಚ್ಚಿಸಿದ್ದೀ. ಸುಗ್ಗಿ ಕಾಲದಲ್ಲಿ ಜನರು ಹರ್ಷಿಸುವ ಹಾಗೂ, ಕೊಳ್ಳೆಯನ್ನು ಹಂಚಿಕೊಳ್ಳುವವರು, ಹೆಚ್ಚಳಪಡುವವರು ನಿನ್ನ ಮುಂದೆ ಆನಂದಿಸುತ್ತಾರೆ.


ಆಗ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷಿಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶದಲ್ಲಿಯೂ, ಮುಳ್ಳು ಮತ್ತು ದತ್ತೂರಿಗಳಿಂದ ಮುಚ್ಚಿಕೊಂಡು ಹೋಗುವುದು.


ಎಲ್ಲಾ ದ್ರಾಕ್ಷಿಯ ತೋಟಗಳಲ್ಲಿ ರೋದನವಾಗುವುದು. ಏಕೆಂದರೆ ನಾನು ನಿಮ್ಮ ನಡುವೆ ಸಂಹಾರಕನಾಗಿ ಹಾದುಹೋಗುವೆನು” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು