Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಮೋವಾಬಿನೊಳಗೆ ಪೂಜಾಸ್ಥಾನದಲ್ಲಿ ಬಲಿಯರ್ಪಿಸುವವರನ್ನೂ ತಮ್ಮ ದೇವರುಗಳಿಗೆ ಧೂಪಹಾಕುವವರನ್ನೂ ನಿರ್ಮೂಲಮಾಡುವೆನು. ಇದು ಯೆಹೋವನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 “ಮೋವಾಬಿನ ಪೂಜಾಸ್ಥಾನಗಳಲ್ಲಿ ಬಲಿಯರ್ಪಿಸುವುದನ್ನೂ ತಮ್ಮ ದೇವರುಗಳಿಗೆ ಧೂಪಾರತಿಯೆತ್ತುವುದನ್ನೂ ನಿಲ್ಲಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಮೋವಾಬಿನೊಳಗೆ ಪೂಜಾಸ್ಥಾನದಲ್ಲಿ ಬಲಿಯರ್ಪಿಸುವವರನ್ನೂ ತಮ್ಮ ದೇವರುಗಳಿಗೆ ಧೂಪಹಾಕುವವರನ್ನೂ ನಿರ್ಮೂಲ ಮಾಡುವೆನು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಮೋವಾಬಿನ ಜನರು ಪೂಜಾಸ್ಥಾನದಲ್ಲಿ ಧೂಪಹಾಕುವದನ್ನು ನಾನು ನಿಲ್ಲಿಸುತ್ತೇನೆ. ಅವರು ತಮ್ಮ ದೇವರುಗಳಿಗೆ ಬಲಿ ಅರ್ಪಿಸುವದನ್ನು ನಿಲ್ಲಿಸುತ್ತೇನೆ” ಎಂದು ಯೆಹೋವನು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಇದಲ್ಲದೆ ಎತ್ತರ ಸ್ಥಳಗಳಲ್ಲಿ ಅರ್ಪಿಸುವವನನ್ನೂ, ತನ್ನ ದೇವರುಗಳಿಗೆ ಧೂಪಸುಡುವವನನ್ನೂ ಮೋವಾಬಿನಲ್ಲಿ ನಿಲ್ಲಿಸಿಬಿಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:35
8 ತಿಳಿವುಗಳ ಹೋಲಿಕೆ  

ಮೋವಾಬ್ಯರು ಸನ್ನಿಧಿಗೆ ಸೇರಿ, ದಿಣ್ಣೆಯಲ್ಲಿನ ಪೂಜೆಯಿಂದ ಬಹಳ ಆಯಾಸಗೊಂಡು ಪ್ರಾರ್ಥನೆಗಾಗಿ ತಮ್ಮ ದೇವಾಲಯಕ್ಕೆ ಬಂದರೂ ಅವರ ಪ್ರಾರ್ಥನೆಯು ಸಫಲವಾಗುವುದಿಲ್ಲ.


ಬಯಿತ್ ಮತ್ತು ದೀಬೋನ್ ಊರಿನವರು ಆಳುವುದಕ್ಕಾಗಿ, ತಮ್ಮ ಎತ್ತರವಾದ ಪೂಜಾ ಸ್ಥಳಗಳಿಗೆ ಹೋಗುತ್ತಾರೆ. ನೆಬೋವಿನಲ್ಲಿಯೂ, ಮೇದೆಬದಲ್ಲಿಯೂ ಮೋವಾಬ್ಯರು ಗೋಳಾಡುತ್ತಾರೆ. ಎಲ್ಲರ ತಲೆಯು ಬೋಳಾಗಿರುವುದು, ಎಲ್ಲರ ಗಡ್ಡವು ವಿಕಾರವಾಗಿ ಕತ್ತರಿಸಲ್ಪಡುವುದು.


ನೀನು ನಿನ್ನ ಕೆಲಸಗಳಲ್ಲಿಯೂ, ಧನರಾಶಿಗಳಲ್ಲಿಯೂ ಭರವಸವಿಟ್ಟದ್ದರಿಂದ ನೀನೂ ಶತ್ರುವಿನ ಕೈವಶವಾಗುವಿ; ಕೆಮೋಷ್ ದೇವತೆಯೂ ಅದರ ಭಕ್ತರಾದ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.


ಯೆಹೂದದವರೇ, ನಿಮ್ಮ ಪಟ್ಟಣಗಳೆಷ್ಟೋ ನಿಮ್ಮ ದೇವರುಗಳೂ ಅಷ್ಟು. ಯೆರೂಸಲೇಮಿನ ಬೀದಿಗಳೆಷ್ಟೋ ತುಚ್ಛ ದೇವತೆಯಾದ ಬಾಳನಿಗೆ ಹೋಮ ಮಾಡುವುದಕ್ಕಾಗಿ ನೀವು ಮಾಡಿಕೊಂಡಿರುವ ಬಲಿಪೀಠಗಳೂ ಅಷ್ಟು.


ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆ ಯಾವುದೆಂದರೆ: ಒಂದೊಂದು ಹೋರಿಗೆ ಮೂರು ಸೇರು ದ್ರಾಕ್ಷಾರಸವನ್ನು, ಟಗರಿಗೆ ಎರಡು ಸೇರು ದ್ರಾಕ್ಷಾರಸವನ್ನು, ಕುರಿಗೆ ಒಂದುವರೆ ಸೇರು ದ್ರಾಕ್ಷಾರಸವನ್ನು, ವರ್ಷದ ಪ್ರತಿ ತಿಂಗಳಿನ ಆರಂಭದಲ್ಲಿ ಹೀಗೆ ಸರ್ವಾಂಗಹೋಮವನ್ನು ಮಾಡಬೇಕು.


ನೀವು ಕಳ್ಳತನ, ಕೊಲೆ ಮತ್ತು ವ್ಯಭಿಚಾರಗಳನ್ನು ಮಾಡಿ ಸುಳ್ಳುಸಾಕ್ಷಿ ಹೇಳಿ, ಬಾಳನಿಗೆ ಹೋಮವನ್ನರ್ಪಿಸಿ, ಕಂಡುಕೇಳದ ಅನ್ಯದೇವತೆಗಳನ್ನು ಹಿಂಬಾಲಿಸಿದ ಮೇಲೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು