ಯೆರೆಮೀಯ 48:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಆದುದರಿಂದ ಮೋವಾಬಿನ ಮತ್ತು ಕೀರ್ ಹೆರೆಸಿನವರ ನಿಮಿತ್ತ ನನ್ನ ಹೃದಯವು ಕೊಳಲುಗಳಂತೆ ಮೊರೆಯಿಡುತ್ತದೆ; ಮೋವಾಬ್ಯರು ಕೂಡಿಸಿಟ್ಟ ಹೇರಳವಾದ ಆಸ್ತಿಯು ಮಾಯವಾಯಿತಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 “ಆದುದರಿಂದ ಮೋವಾಬಿನ ಮತ್ತು ಕೀರ್ ಹೆರೆಸಿನವರ ನಿಮಿತ್ತ ನನ್ನ ಹೃದಯ ಕೊಳಲಿನಂತೆ ಮೊರೆಯಿಡುತ್ತದೆ. ಮೋವಾಬ್ಯರು ಕೂಡಿಸಿಟ್ಟ ಹೇರಳವಾದ ಆಸ್ತಿ ಮಾಯವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಆದದರಿಂದ ಮೋವಾಬಿನ ಮತ್ತು ಕೀರ್ ಹೆರೆಸಿನವರ ನಿವಿುತ್ತ ನನ್ನ ಹೃದಯವು ಕೊಳಲುಗಳಂತೆ ಮೊರೆಯಿಡುತ್ತದೆ; ಮೋವಾಬ್ಯರು ಕೂಡಿಸಿಟ್ಟ ಹೇರಳವಾದ ಆಸ್ತಿಯು ಮಾಯವಾಯಿತಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 “ಮೋವಾಬಿಗಾಗಿ ನಾನು ಬಹಳ ದುಃಖಿತನಾಗಿದ್ದೇನೆ. ಸ್ಮಶಾನಯಾತ್ರೆಯ ಕಾಲದಲ್ಲಿ ಊದುವ ಕೊಳಲಿನಿಂದ ಹೊರಬರುವ ದುಃಖದ ಧ್ವನಿಯಂತೆ ನನ್ನ ಹೃದಯ ಅಳುತ್ತಿದೆ. ಕೀರ್ ಹೆರೆಸಿನ ಜನರಿಗಾಗಿ ನಾನು ದುಃಖಿಸುತ್ತೇನೆ. ಅವರ ಹಣವನ್ನು ಮತ್ತು ಸಂಪತ್ತನ್ನು ಕಿತ್ತುಕೊಳ್ಳಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 “ಆದ್ದರಿಂದ ನನ್ನ ಹೃದಯವು ಮೋವಾಬಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡುವುದು. ನನ್ನ ಹೃದಯವು ಕೀರ್ ಹೆರೆಸಿನ ಮನುಷ್ಯರಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡುವುದು. ಏಕೆಂದರೆ ಅವನು ಮಾಡಿಕೊಂಡ ದ್ರವ್ಯ ನಾಶವಾಯಿತು. ಅಧ್ಯಾಯವನ್ನು ನೋಡಿ |