Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಮೋವಾಬು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿದ್ದರಿಂದ ಅದು ಹಾಳಾಗಿ ಇನ್ನು ಜನಾಂಗವೆನಿಸಿಕೊಳ್ಳದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಉಬ್ಬಿಕೊಂಡು ಸರ್ವೇಶ್ವರನನ್ನೆ ತಿರಸ್ಕರಿಸಿದ ಕಾರಣ ಹಾಳಾಗಿ ಇನ್ನು ರಾಷ್ಟ್ರವೆನಿಸಿಕೊಳ್ಳದು ಮೋವಾಬ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಮೋವಾಬು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡದರಿಂದ ಅದು ಹಾಳಾಗಿ ಇನ್ನು ಜನಾಂಗವೆನಿಸಿಕೊಳ್ಳದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಮೋವಾಬ್ ಜನಾಂಗವನ್ನು ನಾಶಮಾಡಲಾಗುವದು. ಏಕೆಂದರೆ ತಾವು ಯೆಹೋವನಿಗಿಂತ ಬಹಳ ಮುಖ್ಯವಾದವರೆಂದು ಅವರು ಭಾವಿಸಿಕೊಂಡರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಏಕೆಂದರೆ ಮೋವಾಬು ಅದು ಯೆಹೋವ ದೇವರಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡದ್ದರಿಂದ, ಜನಾಂಗವಲ್ಲದ ಹಾಗೆ ನಾಶವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:42
14 ತಿಳಿವುಗಳ ಹೋಲಿಕೆ  

ಮೋವಾಬಿನ ಕೀರ್ತಿಯು ಮಾಯವಾಯಿತು; ಶತ್ರುಗಳು ಹೆಷ್ಬೋನಿನಲ್ಲಿ ದೇಶಕ್ಕೆ ಕೇಡನ್ನು ಕಲ್ಪಿಸಿ, ‘ಮೋವಾಬ್ ಇನ್ನು ಜನಾಂಗವೆನಿಸಿಕೊಳ್ಳದಂತೆ ಅದನ್ನು ನಿರ್ಮೂಲಮಾಡೋಣ ಬನ್ನಿರಿ’ ಎಂದು ಆಲೋಚಿಸಿಕೊಂಡಿದ್ದಾರೆ. ಮದ್ಮೆನೇ, ನೀನು ಸಹ ಸುಮ್ಮನಾಗುವಿ; ಖಡ್ಗವು ನಿನ್ನನ್ನು ಹಿಂದಟ್ಟುವುದು.


ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ಡೀ? ಯಾರ ವಿರುದ್ಧವಾಗಿ ಬಾಯ್ದೆರೆದು ಧ್ವನಿಯೆತ್ತಿದ್ದೀ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!’


ಏಕೆಂದರೆ ಅರಾಮಿಗೆ ಶಿರಸ್ಸು ದಮಸ್ಕ, ದಮಸ್ಕಕ್ಕೆ ಶಿರಸ್ಸು ರೆಚೀನ. ಅರುವತ್ತೈದು ವರ್ಷಗಳೊಳಗೆ ಎಫ್ರಾಯೀಮ್ಯರು ಭಂಗಪಟ್ಟು ಜನಾಂಗವೆನ್ನಿಸಿಕೊಳ್ಳರು.


ಆ ಮೃಗವು ಬಾಯಿದೆರೆದು ದೇವರನ್ನು ದೂಷಿಸಿದ್ದಲ್ಲದೆ ಆತನ ನಾಮವನ್ನೂ, ಆತನು ವಾಸಿಸುವ ನಿವಾಸವನ್ನೂ, ಪರಲೋಕ ನಿವಾಸಿಗಳನ್ನೂ ದೂಷಿಸಿತು.


ಯಾವುದು ದೇವರೆನಿಸಿಕೊಳ್ಳುತ್ತದೋ ಯಾವುದು ಆರಾಧಿಸಲ್ಪಡುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಘೋಷಿಸಿಕೊಂಡು ದೇವರ ಗರ್ಭಗುಡಿಯಲ್ಲೇ ಕುಳಿತುಕೊಳ್ಳುತ್ತಾನೆ.


ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.


“ರಾಜನು ತನ್ನ ಇಚ್ಛಾನುಸಾರ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಗರ್ವದಿಂದ ಉಬ್ಬಿ, ದೇವಾಧಿ ದೇವನನ್ನು ಮಿತಿಮೀರಿ ದೂಷಿಸಿ ನಿಮ್ಮ ಮೇಲಿನ ದೈವ ಕೋಪವು ತೀರುವ ತನಕ ವೃದ್ಧಿಯಾಗಿರುವನು. ದೈವಸಂಕಲ್ಪವು ನೆರವೇರಲೇ ಬೇಕು.


ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಓಡಿಸಿಬಿಟ್ಟು ಚದರಿಸಿದೆನೋ, ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು. ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವುದಿಲ್ಲ.”


ಗರ್ವದಿಂದ ಭಂಗ, ಉಬ್ಬಿನಿಂದ ದೊಬ್ಬು.


ಆಗ ಯೆಹೋವನು ತಿರುಗಿ ಹೇಳಿದ್ದೇನೆಂದರೆ, “ಮೂರು ವರ್ಷದೊಳಗೆ ಮೋವಾಬಿನ ವೈಭವವು ಕಣ್ಮರೆಯಾಗುವುದು. ಅವರ ದೊಡ್ಡ ಗುಂಪು ನಾಶವಾಗುವುದು ಅವರ ಜನರಲ್ಲಿ, ಉಳಿದವರು ಕೇವಲ ಚಿಕ್ಕ ಗುಂಪಾಗಿ ಬಲಹೀನರಾಗುವರು” ಎಂಬುದೇ.


ನಿನ್ನವರು ಬಾಯಿ ತೆರೆದು, ನನ್ನ ವಿರುದ್ಧವಾಗಿ ಆಡಿದ ಮಾತುಗಳನ್ನು ಕೇಳಿದ್ದೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು